ಬಜೆಟ್‌ನಲ್ಲಿ ಉ.ಕರ್ನಾಟಕಕ್ಕೆ ಅನ್ಯಾಯವಾಗಿಲ್ಲ: ಸಚಿವ ಶಿವಶಂಕರ ರೆಡ್ಡಿ

ಬೆಳಗಾವಿ, ಜುಲೈ 07: ಕುಮಾರಸ್ವಾಮಿ ಅವರು ಮಂಡಿಸಿರುವ ಬಜೆಟ್‌ನಲ್ಲಿ ಉತ್ತರ ಕರ್ನಾಟಕಕ್ಕೆ ಅನ್ಯಾಯವಾಗಿಲ್ಲ ಎಂದು ಮೈತ್ರಿ ಸರ್ಕಾರದ ಕೃಷಿ ಸಚಿವ ಎನ್‌.ಎಚ್.ಶಿವಶಂಕರ ರೆಡ್ಡಿ ಸಮರ್ಥನೆ ಮಾಡಿಕೊಂಡಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರ ಸಾಲಮನ್ನಾ ಮಾಡಿರುವ ಲಾಭ ಕೇವಲ ರಾಮನಗರ, ಹಾಸನ, ಮಂಡ್ಯ ಜಿಲ್ಲೆಗೆ ಮಾತ್ರ ಸಿಗುವುದಿಲ್ಲ ಅದರ ಲಾಭ ಹೆಚ್ಚಾಗಿ ದೊರಕುವುದು ಉತ್ತರ ಕರ್ನಾಟಕದ ರೈತರಿಗೆ ಎಂದು ಅವರು ಹೇಳಿದ್ದಾರೆ.

ಎಚ್‌.ಕೆ.ಪಾಟೀಲರ ಮಾತನ್ನೇ ದೊಡ್ಡದು ಮಾಡಿ ವಿರೋಧ ಪಕ್ಷಗಳು ಮುಂದಿಡುತ್ತಿವೆ. ಹಾಗೇನಾದರೂ ಉ.ಕರ್ನಟಕಕ್ಕೆ ಅನ್ಯಾಯವಾಗಿದ್ದಲ್ಲಿ ಪೂರಕ ಬಜೆಟ್‌ನಲ್ಲಿ ಸರಿಪಡಿಸಲಾಗುತ್ತದೆ ಎಂದು ಅವರು ಹೇಳಿದರು.

It is not unfair budget to Uttar karnataka: Shivashankar Reddy

ಉತ್ತರ ಕರ್ನಾಟಕ ಹಾಗೂ ಕರಾವಳಿ ಜಿಲ್ಲೆಗಳಿಗೆ ಬಜೆಟ್‌ನಲ್ಲಿ ಅನ್ಯಾಯವಾಗಿದೆ ಎಂದು ವಿರೋಧ ಪಕ್ಷಗಳು ಅಸಮಾಧಾನ ವ್ಯಕ್ತಪಡಿಸಿದ್ದವು. ಬಿಜೆಪಿ ಈ ಕುರಿತು ಪ್ರತಿಭಟನೆಯನ್ನೂ ಮಾಡಿತ್ತು.

ಕಾಂಗ್ರೆಸ್ ಹಿರಿಯ ಶಾಸಕ ಎಚ್‌.ಕೆ.ಪಾಟೀಲ್ ಸಹ ಬಜೆಟ್‌ನಲ್ಲಿ ಉತ್ತರ ಕರ್ನಾಟಕಕ್ಕೆ ಅನ್ಯಾಯವಾಗಿದೆ ಎಂದು ಸೊಲ್ಲೆತ್ತಿದ್ದರು. ಈ ಬಗ್ಗೆ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಪರಮೇಶ್ವರ್ ಹಾಗೂ ರಾಜ್ಯದ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಅವರಿಗೂ ಪತ್ರ ಬರೆದಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+