ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಳಗಾವಿಯಲ್ಲಿ ಕನ್ನಡ ಧ್ವಜ ಹಾರಿಸುವುದು ನಮ್ಮ ಹಕ್ಕು; ಎಚ್‌ಡಿಕೆ

|
Google Oneindia Kannada News

ಬೆಳಗಾವಿ, ಮಾರ್ಚ್ 14; " ಬೆಳಗಾವಿ ನಮ್ಮದು. ಇಲ್ಲಿ ಕನ್ನಡ ಧ್ವಜ ಹಾರಿಸುವುದು ನಮ್ಮ ಹಕ್ಕು. ಇದನ್ನು ಪ್ರಶ್ನಿಸಲು ಮಹಾರಾಷ್ಟ್ರಕ್ಕೆ ಯಾವ ಹಕ್ಕೂ ಇಲ್ಲ" ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಕರ್ನಾಟಕ-ಬೆಳಗಾವಿ ಗಡಿ ವಾದದ ಚರ್ಚೆ ಮತ್ತೆ ಆರಂಭವಾಗಿದೆ. ಭಾನುವಾರ ಸರಣಿ ಟ್ವೀಟ್ ಮಾಡಿರುವ ಕುಮಾರಸ್ವಾಮಿ ಅವರು, "ಬೆಳಗಾವಿಯಲ್ಲಿ ಕನ್ನಡ ಪರ ಹೋರಾಟಗಾರರು ಕನ್ನಡ ಧ್ವಜ ಸ್ಥಾಪಿಸಿರುವುದನ್ನು ಶಿವಸೇನೆ ಅಪರಾಧವೆಂಬಂತೆ ನೋಡುತ್ತಿದೆ. ಅಲ್ಲಿಂದಾಚೆಗೆ ಮಹಾರಾಷ್ಟ್ರ ಪ್ರೇರಿತ ಭಾಷೆ, ಗಡಿ ವಿವಾದ ಮುನ್ನೆಲೆಗೆ ಬಂದಿದೆ" ಎಂದು ಹೇಳಿದ್ದಾರೆ.

ಬೆಳಗಾವಿ-ಕೊಲ್ಹಾಪುರ ಸರ್ಕಾರಿ ಬಸ್ ಸಂಚಾರ ಸ್ಥಗಿತ ಬೆಳಗಾವಿ-ಕೊಲ್ಹಾಪುರ ಸರ್ಕಾರಿ ಬಸ್ ಸಂಚಾರ ಸ್ಥಗಿತ

"ಗಡಿ ವಿಚಾರದಲ್ಲಿ ಮಹಾಜನ ಆಯೋಗದ ವರದಿಯೇ ಅಂತಿಮ. ಮಹಾರಾಷ್ಟ್ರದ ಹಠದಿಂದಲೇ ರಚಿಸಲಾದ ಮಹಾಜನ ಆಯೋಗವು ಬೆಳಗಾವಿ ಕರ್ನಾಟಕದ್ದು ಎಂದು ಸ್ಪಷ್ಟವಾಗಿ ಹೇಳಿದೆ. ಈ ವಿಚಾರವಾಗಿ‌ ಮಹಾರಾಷ್ಟ್ರ ಮತ್ತೊಮ್ಮೆ ನಡೆಸುತ್ತಿರುವ ಕಾನೂನು ಹೋರಾಟ ವ್ಯರ್ಥವಾಗಲಿದೆ. ಅಲ್ಲಿ ವರೆಗೆ ವಿಸ್ತರಾಣಾವಾದದ ಮಾತುಗಳನ್ನು ನೆರೆಯ ರಾಜ್ಯ ನಿಲ್ಲಿಸುವುದು ಒಳಿತು" ಎಂದು ಸಲಹೆ ನೀಡಿದ್ದಾರೆ.

ಕನ್ನಡ ಧ್ವಜ ತೆರವುಗೊಳಿಸಲು ಆಗ್ರಹಿಸಿ ಮಾರ್ಚ್ 8ರಂದು ಎಂಇಎಸ್ ಪ್ರತಿಭಟನೆಕನ್ನಡ ಧ್ವಜ ತೆರವುಗೊಳಿಸಲು ಆಗ್ರಹಿಸಿ ಮಾರ್ಚ್ 8ರಂದು ಎಂಇಎಸ್ ಪ್ರತಿಭಟನೆ

ಶಿವಸೇನೆ ನಾಯಕರ ಹೇಳಿಕೆ

"ಬೆಳಗಾವಿಯಲ್ಲಿ ಕಳೆದೆಂಟು ದಿನಗಳಿಂದ ಮರಾಠಿಗರ ಮೇಲೆ ಹಲ್ಲೆ ನಡೆಯುತ್ತಿರುವುದಾಗಿಯೂ, ಅಲ್ಲಿಗೆ ಸರ್ವಪಕ್ಷಗಳ ನಿಯೋಗ ತೆರಳಬೇಕಾಗಿಯೂ ಶಿವಸೇನೆಯ ನಾಯಕರೊಬ್ಬ ಹೇಳಿದ್ದಾರೆ" ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ಬಸ್ ಮೇಲೆ ದಾಳಿ ಮಾಡಿದವರು ಯಾರು?

ಬಸ್ ಮೇಲೆ ದಾಳಿ ಮಾಡಿದವರು ಯಾರು?

"ಕಳೆದೆಂಟು ದಿನಗಳಿಂದ ಬೆಳಗಾವಿಯಲ್ಲಿ ಮರಾಠಿಗರ ಮೇಲೆ ಹಲ್ಲೆ ನಡೆದಿದೆ ಎಂದು ಮಹಾರಾಷ್ಟ್ರ ಹೇಳಿದೆ. ಕೊಲ್ಲಾಪುರದಲ್ಲಿ ಮೊದಲಿಗೆ ನಮ್ಮ ಬಸ್‌ಗಳ ಮೇಲೆ ದಾಳಿ ನಡೆಸಿದವರು ಯಾರು? ಬೆಳಗಾವಿಯಲ್ಲಿ ಮರಾಠಿ ಭಾಷೆ ಫಲಕ ತೆರವು ವೇಳೆ ದಾಳಿ ನಡೆದಿದ್ದು ಕನ್ನಡಿಗರ ಮೇಲೆ. ಇಷ್ಟಾಗಿಯೂ ಮಹಾರಾಷ್ಟ್ರ ಅತ್ತೂ ಕರೆದು ಗಮನ ಸೆಳೆಯುವ ಪ್ರಯತ್ನ ಮಾಡುತ್ತಿದೆ" ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಕನ್ನಡಿಗರ ಸಾರ್ವಭೌಮತ್ವದ ಸಂಕೇತ

ಕನ್ನಡಿಗರ ಸಾರ್ವಭೌಮತ್ವದ ಸಂಕೇತ

"ಬೆಳಗಾವಿಯಲ್ಲಿ ಅಕ್ರಮವಾಗಿ ವಿಧಾನಸೌಧ ನಿರ್ಮಿಸಿ 2ನೇ ರಾಜಧಾನಿ ಮಾಡಲಾಗಿದೆ ಎಂದು ಮಹಾರಾಷ್ಟ್ರ ವಾದಿಸಿದೆ. ಬೆಳಗಾವಿ ವಿಚಾರದಲ್ಲಿನ ಮಹಾರಾಷ್ಟ್ರ ಖ್ಯಾತೆ ಗಮನಿಸಿಯೇ ನನ್ನ ಅವಧಿಯಲ್ಲಿ ಅದನ್ನು ನಿರ್ಮಿಸಲಾಯಿತು, ಕಲಾಪವನ್ನೂ ನಡೆಸಲಾಯಿತು. ಸುವರ್ಣ ವಿಧಾನಸೌಧವು ಮಹಾರಾಷ್ಟ್ರ ವಿಸ್ತರಣಾವಾದದ ವಿರುದ್ಧದ ಕನ್ನಡಿಗರ ಸಾರ್ವಭೌಮತ್ವದ ಸಂಕೇತ" ಎಂದು ಹೇಳಿದ್ದಾರೆ.

Recommended Video

ಸ್ವಪಕ್ಷವನ್ನೇ ಹಿಗ್ಗಾಮುಗ್ಗಾ ಜಾಡಿಸಿದ ಜೆಡಿಎಸ್ ಕಾರ್ಯಕರ್ತ- ವೀಡಿಯೋ ಫುಲ್ ವೈರಲ್ | Oneindia Kannada

ಬಿಜೆಪಿ ಮೇಲೆ ಪ್ರಭಾವ ಬೀರದೆ?

"ಗಡಿ ವಿವಾದದಲ್ಲಿ ಪ್ರಧಾನಿ ಮೋದಿ ಅವರು ಮಧ್ಯಪ್ರವೇಶ ಮಾಡಬೇಕು ಎಂದು ಲಕ್ಷ್ಮಣ ಸವದಿ ಬಯಸಿದ್ದಾರೆ. ಈ ವಿವಾದದಲ್ಲಿ ಯಾರ ಮಧ್ಯಸ್ಥಿತಿಕೆಯೂ ಬೇಡ" ಎಂದು ಕುಮಾರಸ್ವಾಮಿ ಹೇಳಿದ್ದಾರೆ.

English summary
It is our right to host Kannada flag in Belagavi. Nothing wrong in hoisting flag why Maharashtra questing it said former chief minister H. D. Kumaraswamy in a tweet.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X