ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಳ್ಳಂಬೆಳಗ್ಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಬೆಂಬಲಿಗನಿಗೆ ಐಟಿ ಶಾಕ್

By ಬೆಳಗಾವಿ ಪ್ರತಿನಿಧಿ
|
Google Oneindia Kannada News

ಬೆಳಗಾವಿ, ಏಪ್ರಿಲ್ 27: ರಾಜ್ಯ ವಿಧಾನಸಭೆ ಚುನಾವಣೆಗೆ ಎಲ್ಲಾ ಪಕ್ಷಗಳ ಅಭ್ಯರ್ಥಿಗಳು, ಬೆಂಬಲಿಗರು ಭರ್ಜರಿ ಸಿದ್ಧತೆಯಲ್ಲಿ ತೊಡಗಿರುವ ಸಂಧರ್ಭದಲ್ಲಿ ಐಟಿ ಸಹ ತನ್ನ ಕಾರ್ಯವನ್ನು ಚುರುಕುಗೊಳಿಸಿದೆ. ಹೌದು, ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಬೆಂಬಲಿಗ ಸಂತೋಷ್ ಸೋನವಾಲ್ಕರ್ ಅವರ ನಿವಾಸದ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಬೆಳಗಾವಿ ಜಿಲ್ಲೆಯ ಮೂಡಲಗಿ ಪಟ್ಟಣದಲ್ಲಿರುವ ಸಂತೋಷ್ ಸೋನವಾಲ್ಕರ್ ನಿವಾಸದ ಮೇಲೆ ಐಟಿ ಅಧಿಕಾರಿಗಳು ಇಂದು ಶುಕ್ರವಾರ ಬೆಳ್ಳಂಬೆಳಗ್ಗೆಯೇ ದಾಳಿ ನಡೆಸಿದ್ದಾರೆ. ಸತತವಾಗಿ ಮನೆಯಲ್ಲಿರುವ ಮಹತ್ವದ ದಾಖಲಾತಿಗಳನ್ನು ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

ಲೋಕೋಪಯೋಗಿ ಸಚಿವ ಎಚ್.ಸಿ. ಮಹದೇವಪ್ಪ ಮನೆ ಮೇಲೆ ಐಟಿ ದಾಳಿಲೋಕೋಪಯೋಗಿ ಸಚಿವ ಎಚ್.ಸಿ. ಮಹದೇವಪ್ಪ ಮನೆ ಮೇಲೆ ಐಟಿ ದಾಳಿ

ಅರಭಾವಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ 5 ನೇ ಬಾರಿ ನಾಮಪತ್ರ ಸಲ್ಲಿಸುತ್ತಿರುವ ಬಾಲಚಂದ್ರ ಜಾರಕಿಹೊಳಿ 2013ರ ಚುನಾವಣೆಯಲ್ಲಿ 99,283 ಮತಗಳನ್ನು ಪಡೆದಿದ್ದರು. ಕಾಂಗ್ರೆಸ್‌ನ ಉಟಗಿ ರಾಮಪ್ಪ ಕರೆಪ್ಪ 24,062 ಮತ, ಜೆಡಿಎಸ್ ನ ಗುರಪ್ಪ ಕಲ್ಲಪ್ಪ ಹಿಟ್ಟಣಗಿ 3081 ಮತಗಳನ್ನು ಪಡೆದಿದ್ದರು.

IT officials raided residence of Santosh Sonawalkar

ಕಳೆದ ಎರಡು ದಿನಗಳ ಹಿಂದೆಯಷ್ಟೇ ಸಿಎಂ ಸಿದ್ದರಾಮಯ್ಯ ಪರಮಾಪ್ತ ಸಚಿವ ಎಚ್​.ಸಿ. ಮಹದೇವಪ್ಪ ಅವರ ಮೈಸೂರಿನ ವಿಜಯನಗರದಲ್ಲಿರುವ ನಿವಾಸದ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸಿದ್ದರು.

ಚುನಾವಣಾ ಅಭ್ಯರ್ಥಿಗಳು ಟಿಕೆಟ್ ಸಿಕ್ಕಿದ ಸಂಭ್ರಮದಲ್ಲಿ ನಾಮಪತ್ರ ಸಲ್ಲಿಸಿ ಸಾರ್ವತ್ರಿಕ ಚುನಾವಣೆಯ ಭರ್ಜರಿ ಪ್ರಚಾರದಲ್ಲಿ ತೊಡಗಿರುವಾಗ ಇತ್ತ ಐಟಿ ಅಧಿಕಾರಿಗಳು ಅವರ ನಿವಾಸಗಳ ಮೇಲೆ ದಾಳಿ ನಡೆಸಿ ಶಾಕ್ ಕೊಡುತ್ತಿರುವುದಂತು ಸುಳ್ಳಲ್ಲ.

English summary
IT officials raided residence of Santosh Sonawalkar. Santosh is supporter of Arabhavi MLA Balachandra Jarkhiholi. Important documents are being examined by authorities.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X