ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಳಗಾವಿ : ಕಾಂಗ್ರೆಸ್ ಬೆಂಬಲಿಗರ ಮನೆ ಮೇಲೆ ಐಟಿ ದಾಳಿ

|
Google Oneindia Kannada News

ಬೆಳಗಾವಿ, ಏಪ್ರಿಲ್ 10 : ಕರ್ನಾಟಕದಲ್ಲಿ ಮತ್ತೆ ಐಟಿ ದಾಳಿ ನಡೆದಿದೆ. ಚಿಕ್ಕೋಡಿ ಕ್ಷೇತ್ರದ ಕಾಂಗ್ರೆಸ್-ಜೆಡಿಎಸ್ ಅಭ್ಯರ್ಥಿ ಪ್ರಕಾಶ್ ಹುಕ್ಕೇರಿ ಅವರ ಆಪ್ತರ ಮನೆ ಮೇಲೆ ದಾಳಿ ನಡೆದಿದ್ದು, ದಾಖಲೆಗಳ ಪರಿಶೀಲನೆ ಮುಂದುವರೆದಿದೆ.

ಲೋಕಸಭಾ ಚುನಾವಣೆಯಲ್ಲಿ ಹಣದ ಹರಿವಿನ ಮಾಹಿತಿ ಸಂಗ್ರಹಿಸಿರುವ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಮತ್ತು ಅಥಣಿ ಪಟ್ಟಣದಲ್ಲಿ ಬುಧವಾರ ದಾಳಿ ನಡೆಸಲಾಗಿದೆ.

ಕಾಂಗ್ರೆಸ್‌ ನಾಯಕ ಆತ್ಮಾನಂದ ಮನೆ ಮೇಲೆ ಐಟಿ ದಾಳಿಕಾಂಗ್ರೆಸ್‌ ನಾಯಕ ಆತ್ಮಾನಂದ ಮನೆ ಮೇಲೆ ಐಟಿ ದಾಳಿ

ಚಿಕ್ಕೋಡಿಯ ಕ್ಲಾಸ್ 1 ಗುತ್ತಿಗೆದಾರ ಪ್ರಕಾಶ್ ವಂಟಮುತ್ತೆ ಮನೆ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ. ಪ್ರಕಾಶ್ ಮಾಜಿ ಸಚಿವ, ಕಾಂಗ್ರೆಸ್ ನಾಯಕ ಪ್ರಕಾಶ್ ಹುಕ್ಕೇರಿ ಅವರ ಬೆಂಬಲಿಗರು.

ಬಿಎಸ್‌ವೈ, ಈಶ್ವರಪ್ಪ ಮೇಲೆ ಐಟಿ ದಾಳಿ ಯಾಕಿಲ್ಲ? ಸಿದ್ದರಾಮಯ್ಯ ಪ್ರಶ್ನೆಬಿಎಸ್‌ವೈ, ಈಶ್ವರಪ್ಪ ಮೇಲೆ ಐಟಿ ದಾಳಿ ಯಾಕಿಲ್ಲ? ಸಿದ್ದರಾಮಯ್ಯ ಪ್ರಶ್ನೆ

IT raid in Belagavi supporter of Prakash Hukkeri

ಅಥಣಿಯ ಕ್ಲಾಸ್ 1 ಗುತ್ತಿಗೆದಾರ ಆರ್.ಎಸ್.ಪಾಟೀಲ ಅವರ ಮನೆ ಮೇಲೆಯೂ ದಾಳಿ ನಡೆಸಲಾಗಿದೆ. ದಾಖಲೆಗಳ ಪರಿಶೀಲನೆ ಅಂತ್ಯಗೊಂಡ ಬಳಿಕ ದಾಳಿಗೆ ನಿಖರವಾದ ಕಾರಣ ತಿಳಿದು ಬರಲಿದೆ.

ಚಿಕ್ಕೋಡಿ ಕ್ಷೇತ್ರದ ಚುನಾವಣಾ ಪುಟ

ಕರ್ನಾಟಕದಲ್ಲಿ ಐಟಿ ದಾಳಿ ಬಗ್ಗೆ ಭಾರಿ ಚರ್ಚೆ ನಡೆಯುತ್ತಿದೆ. ಕೇಂದ್ರ ಸರ್ಕಾರ ಐಟಿ ಇಲಾಖೆಯನ್ನು ದುರುಪಯೋಗ ಪಡಿಸಿಕೊಳ್ಳುತ್ತಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಆರೋಪ ಮಾಡುತ್ತಿದ್ದಾರೆ.

ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರನ್ನು ಟಾರ್ಗೆಟ್ ಮಾಡಿ ಐಟಿ ದಾಳಿ ನಡೆಸಲಾಗುತ್ತಿದೆ. ಬಿಜೆಪಿ ನಾಯಕರ ಮನೆ ಮೇಲೆ ಏಕೆ ದಾಳಿ ಮಾಡುತ್ತಿಲ್ಲ ಎಂದು ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ಪ್ರಶ್ನೆ ಮಾಡುತ್ತಿದ್ದಾರೆ.

English summary
Income Tax department conducted raid on house of civil engineer in Belagavi. Class 1 contractor Parakash supporter of Chikodi lok sabha seat Congress-JD(S) candidate Parkash Hukkeri.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X