ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಆಪ್ತನ ಮನೆ ಮೇಲೆ ಐಟಿ ದಾಳಿ
ಬೆಳಗಾವಿ, ಏಪ್ರಿಲ್ 22: ಹಾಸನ, ಮಂಡ್ಯ ಆಯ್ತು ಇದೀಗ ಕಂದಾಯ ಇಲಾಖೆ ಅಧಿಕಾರಿಗಳು ಬೆಳಗಾವಿಗೆ ಲಗ್ಗೆ ಇಟ್ಟಿದ್ದಾರೆ. ಬೆಳ್ಳಂಬೆಳಗ್ಗೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಆಪ್ತರ ಮನೆ ಮೇಲೆ ದಾಳಿ ನಡೆಸಿದ್ದಾರೆ.
ಲಕ್ಷ್ಮೀ ಹೆಬ್ಬಾಳ್ಕರ್ ಆಪ್ತ ಶಂಕರಗೌಡ ಪಾಟೀಲ್ ಅವರ ಫಾರ್ಮ್ ಹೌಸ್ ಮೇಲೆ ಕಂದಾಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಳಗಾವಿ ನಗರದ ವಿಕರಣಕೊಪ್ಪದಲ್ಲಿರುವ ಫಾರ್ಮ್ ಹೌಸ್ ಮೇಲೆ ಕರ್ನಾಟಕ-ಗೋವಾ ಐಟಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಇನ್ನೊಂದೆಡೆ ಹಣ ಸಾಗಿಸುತ್ತಿದ್ದ ಶ್ರೀಕಾಂತ್ ಮುನವಳ್ಳಿ ಅವರನ್ನು ವಶಕ್ಕೆ ಪಡೆಯಲಾಗಿದೆ. ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಮುನವಳ್ಳಿ ಗ್ರಾಮದಲ್ಲಿ ಶ್ರೀಕಾಂತ್ ಅವರ ಕಾರಿನಲ್ಲಿ ಸಾಗಿಸುತ್ತಿದ್ದ 14 ಲಕ್ಷ ರೂ ವಶಪಡಿಸಿಕೊಳ್ಳಲಾಗಿದೆ.












Click it and Unblock the Notifications