10 ವರ್ಷದ ಬಳಿಕ ಖಾನಾಪುರದಲ್ಲಿ ಜನತಾ ದರ್ಶನ, ಅಹವಾಲು ಹಿಡಿದು ಬಂದ ಜನ
ಬೆಳಗಾವಿ, ಅಕ್ಟೋಬರ್ 18: ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಜನರ ಅಹವಾಲುಗಳನ್ನು ಜಿಲ್ಲಾ ಮಟ್ಟದಲ್ಲಿಯೇ ಆಲಿಸಿ, ಸೂಕ್ತ ಪರಿಹಾರವನ್ನು ಒದಗಿಸುವ ನಿಟ್ಟಿನಲ್ಲಿ ಪ್ರತಿ ಜಿಲ್ಲೆಯಲ್ಲಿಯೂ, ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಪ್ರತಿ ತಿಂಗಳು ' ಜನತಾ ದರ್ಶನ' ಕಾರ್ಯಕ್ರಮ ಹಮ್ಮಿಕೊಂಡು ಜನರ ಅಹವಾಲುಗಳನ್ನು ಆಲಿಸಿ ಸಮಸ್ಯೆಗಳಿಗೆ ಪರಿಹಾರ ನೀಡಬೇಕು ಎಂದು ಸೂಚನೆ ನೀಡಿದ್ದಾರೆ.
ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ನಂದಗಡದ ಟಿಎಪಿಸಿಎಂಎಸ್ ಕಲ್ಯಾಣ ಮಂಟಪದಲ್ಲಿ ಬುಧವಾರ 'ಜನತಾ ದರ್ಶನ' ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಸಕ ವಿಠ್ಠಲ ಹಲಗೇಕರ್ ಜನತಾ ದರ್ಶನಕ್ಕೆ ಚಾಲನೆ ಕೊಟ್ಟರು.

ಶಾಸಕರು ಮಾತನಾಡಿ, 10 ವರ್ಷಗಳ ಬಳಿಕ ಖಾನಾಪುರ ತಾಲೂಕಿನಲ್ಲಿ ಜನತಾದರ್ಶನ ಹಮ್ಮಿಕೊಳ್ಳಲಾಗಿದೆ. ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ತಿಂಗಳಿಗೊಮ್ಮೆ ಹಾಗೂ ಹದಿನೈದು ದಿನಕ್ಕೊಮ್ಮೆ ತಾಲೂಕಿನಲ್ಲಿ ಜನತಾ ದರ್ಶನ ನಡೆಸಲಾಗುತ್ತಿದೆ. ತಾಲೂಕುಮಟ್ಟದ ಪ್ರಥಮ ಕಾರ್ಯಕ್ರಮಕ್ಕೆ ಖಾನಾಪುರ ಆಯ್ಕೆ ಮಾಡಿಕೊಂಡಿರುವುದಕ್ಕೆ ಜಿಲ್ಲಾಡಳಿತಕ್ಕೆ ಶಾಸಕರು ಕೃತಜ್ಞತೆ ಸಲ್ಲಿಸಿದರು.
10 ಕೌಂಟರ್‌ಗಳ ಸ್ಥಾಪನೆ; ಶಾಸಕ ವಿಠ್ಠಲ ಹಲಗೇಕರ್ ಮಾತನಾಡಿ, "ಜನರ ಸಮಸ್ಯೆಗಳನ್ನು ಸ್ಥಳೀಯವಾಗಿ ಬಗೆಹರಿಸುವುದು ಜನತಾ ದರ್ಶನದ ಉದ್ಧೇಶ. ಜನರು ತಮ್ಮ ಅಹವಾಲುಗಳನ್ನು ಪರಿಹರಿಸಲು ಜಿಲ್ಲಾ ಕೇಂದ್ರಕ್ಕೆ ಅಲೆದಾಡುವುದನ್ನು ತಪ್ಪಿಸಬಹುದು. ರಸ್ತೆ, ವಿದ್ಯುತ್, ಕುಡಿಯುವ ನೀರು, ಆರೋಗ್ಯದಂತಹ ಸಮಸ್ಯೆಗಳನ್ನು ತಾಲೂಕು ಮಟ್ಟದಲ್ಲಿಯೇ ಬಗೆಹರಿಸಲು ಸಾಧ್ಯವಾಗಲಿದೆ" ಎಂದರು.
"ಜಿಲ್ಲಾ ಪಂಚಾಯತಿ, ಕಂದಾಯ, ಅರಣ್ಯ ಸೇರಿದಂತೆ ಎಲ್ಲ ಇಲಾಖೆಗಳ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಒಂದೇ ಸ್ಥಳದಲ್ಲಿ ಲಭ್ಯವಿರುವುದರಿಂದ ಜನರು ಸಮಸ್ಯೆಗಳನ್ನು ತಿಳಿಸಲು ಹಾಗೂ ಅವುಗಳನ್ನು ಬಗೆಹರಿಸುವುದು ಸಾಧ್ಯವಾಗಲಿದೆ. ಜನರು ಜನತಾ ದರ್ಶನದ ಪ್ರಯೋಜನ ಪಡೆದುಕೊಳ್ಳಬೇಕು" ಎಂದು ಕರೆ ನೀಡಿದರು.
ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಮಾತನಾಡಿ, "ಜನರ ಅಹವಾಲು ಸ್ವೀಕರಿಸಲು ಇಲಾಖಾವಾರು 10 ಕೌಂಟರ್ ಅನ್ನು ಸ್ಥಾಪಿಸಲಾಗಿದೆ. ಪ್ರತಿ ಅರ್ಜಿಗೆ ಸ್ವೀಕೃತಿ ನೀಡಲಾಗುತ್ತದೆ. ಅಹವಾಲು ಬಗೆಹರಿಸಲು ಕೈಗೊಳ್ಳಲಾಗುವ ಕ್ರಮಗಳ ಮಾಹಿತಿಯನ್ನು ಅರ್ಜಿದಾರರಿಗೆ ನೀಡಲಾಗುತ್ತದೆ" ಎಂದು ತಿಳಿಸಿದರು.
"ಪ್ರತಿಯೊಂದು ಅರ್ಜಿಯನ್ನು ಸಕಾರಾತ್ಮಕವಾಗಿ ಪರಿಗಣಿಸಿ ಆಯಾ ಇಲಾಖೆಯ ಅಧಿಕಾರಿಗಳು ಸೂಕ್ತ ಕ್ರಮವನ್ನು ಕೈಗೊಳ್ಳಲಿದ್ದಾರೆ. ಜನರ ಕುಂದುಕೊರತೆಗಳ ನಿವಾರಣೆಗೆ ಜನತಾ ದರ್ಶನದಲ್ಲಿ ಕ್ರಮವನ್ನು ತೆಗೆದುಕೊಳ್ಳಲಾಗುವುದು. ತಾಲೂಕು/ ಜಿಲ್ಲಾ ಹಾಗೂ ರಾಜ್ಯಮಟ್ಟದಲ್ಲಿ ಬಗೆಹರಿಸಬಹುದಾದ ಸಮಸ್ಯೆಗಳನ್ನು ವಿಂಗಡಣೆ ಮಾಡಿ ನಿಗದಿತ ಕಾಲಾವಧಿಯಲ್ಲಿ ಪರಿಹರಿಸಲು ಕ್ರಮ ಕೈಗೊಳ್ಳಲಾಗುತ್ತದೆ" ಎಂದು ಭರವಸೆ ನೀಡಿದರು.
"ಪ್ರತಿ ಹದಿನೈದು ದಿನಕ್ಕೊಮ್ಮೆ ಒಂದು ತಾಲೂಕಿನಲ್ಲಿ ಜನತಾ ದರ್ಶನ ನಡೆಸಲಾಗುತ್ತಿದೆ.
ಜಿಲ್ಲಾ ಮಟ್ಟದಲ್ಲಿ 722 ಅಹವಾಲುಗಳ ಸ್ವೀಕಾರವಾಗಿವೆ. ಪ್ರಥಮ ತಾಲೂಕುಮಟ್ಟದ ಜನತಾ ದರ್ಶನ ಕಾರ್ಯಕ್ರಮ ಖಾನಾಪುರದ ನಂದಗಡದಲ್ಲಿ ಆಯೋಜಿಸಲಾಗಿದೆ" ಎಂದು ಜಿಲ್ಲಾಧಿಕಾರಿಗಳು ಹೇಳಿದರು.
ಜನತಾ ದರ್ಶನ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ನೇತೃತ್ವದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ತಂಡ ಸರ್ಕಾರಿ ಬಸ್‌ನಲ್ಲಿ ನಂದಗಡಕ್ಕೆ ಪ್ರಯಾಣ ಬೆಳೆಸಿತು. ಮಹಿಳಾ ಅಧಿಕಾರಿಗಳು 'ಶಕ್ತಿ' ಯೋಜನೆಯಡಿ ಶೂನ್ಯ ದರದ ಟಿಕೆಟ್ ಪಡೆದು, ಉಚಿತವಾಗಿ ಪ್ರಯಾಣಿಸಿದರೆ ಜಿಲ್ಲಾಧಿಕಾರಿಗಳು ಸೇರಿದಂತೆ ಇತರೆ ಅಧಿಕಾರಿಗಳು ಟಿಕೆಟ್ ಪಡೆದುಕೊಂಡು ತೆರಳಿದರು.
ಜನತಾ ದರ್ಶನ ಕಾರ್ಯಕ್ರಮಕ್ಕೆ ಅಹವಾಲು ಹಿಡಿದು ನೂರಾರು ಜನರು ಆಗಮಿಸಿದ್ದರು. ಶಾಸಕರು ಹಾಗೂ ಜಿಲ್ಲಾಧಿಕಾರಿಗಳು ಕೂಡ ಜನರ ಅಹವಾಲುಗಳನ್ನು ಆಲಿಸಿದರು. ಸ್ಥಳದಲ್ಲಿಯೇ ಉಪಸ್ಥಿತರಿದ್ದ ವಿವಿಧ ಇಲಾಖೆಯ ಅಧಿಕಾರಿಗಳಿಗೆ ಅಹವಾಲುಗಳನ್ನು ತಕ್ಷಣವೇ ಪರಿಹರಿಸುವಂತೆ ಸೂಚನೆ ಕೊಟ್ಟರು.
ಕಂದಾಯ, ಗ್ರಾಮೀಣಾಭಿವೃದ್ದಿ, ಅರಣ್ಯ, ಅಬಕಾರಿ, ಪೊಲೀಸ್, ಆಹಾರ, ಆರೋಗ್ಯ, ಪಶುಸಂಗೋಪನೆ, ಹೆಸ್ಕಾಂ, ತೋಟಗಾರಿಕೆ, ಶಿಕ್ಷಣ ಹೀಗೆ ಇಲಾಖಾವಾರು ಕೌಂಟರ್ ತೆರೆದು ಜನರಿಂದ ಅರ್ಜಿಗಳನ್ನು ಪಡೆದುಕೊಂಡು ಸ್ವೀಕೃತಿ ಪತ್ರ ನೀಡಲಾಯಿತು.
ಅನಕ್ಷರಸ್ಥ ಹಾಗೂ ಹಿರಿಯ ನಾಗರಿಕರು ಕೂಡ ಲಿಖಿತ ಅಹವಾಲು ಸಲ್ಲಿಸಲು ನೆರವಾಗಲು ಪ್ರತ್ಯೇಕ ಕೌಂಟರ್ ಸ್ಥಾಪಿಸಿ ಅರ್ಜಿಗಳನ್ನು ಬರೆದುಕೊಡುವ ಮೂಲಕ ಜಿಲ್ಲಾಡಳಿತ ಮತ್ತು ತಾಲೂಕು ಆಡಳಿತದ ಸಿಬ್ಬಂದಿ ನೆರವು ನೀಡಿದರು.
-
Ugadi 2026: ಹಬ್ಬದ ಕಳೆ ಹೆಚ್ಚಿಸುವ ಸುಂದರ ರಂಗೋಲಿಗಳು; ಸರಳ, ಚುಕ್ಕಿ ಹಾಗೂ ಬಣ್ಣದ ರಂಗೋಲಿ ಐಡಿಯಾ ಇಲ್ಲಿದೆ -
ಮಾರ್ಚ್ 17ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು -
ಶಿಕ್ಷಕಿಯರು ಹೆರಿಗೆ ರಜೆಗಾಗಿ ಅರ್ಜಿ ಸಲ್ಲಿಸಿದ 15 ದಿನಗಳ ಒಳಗೆ ಮಂಜೂರು; 5 ವರ್ಷ ಇಚ್ಛಿಸಿದ ಶಾಲೆಯಲ್ಲೇ ಕೆಲಸಕ್ಕೆ ಅವಕಾಶ -
SSLC Exam 2026 : ಮಾರ್ಚ್ 18ರಿಂದ ಪರೀಕ್ಷೆ; ವಿದ್ಯಾರ್ಥಿಗಳೇ, ನಿಮ್ಮ ಕೊನೆ ಕ್ಷಣದ ಸಿದ್ಧತೆಗೆ ಹೀಗಿರಲಿ -
Puneeth Rajkumar Birthday: ಇಂದು ನಟ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬ; ಅಭಿಮಾನಿಗಳಿಂದ ವಿಶೇಷ ನಮನ, ಶುಭಾಶಯಗಳ ಮಹಾಪೂರ












Click it and Unblock the Notifications