ಬೆಳಗಾವಿ ಕನ್ನಡ ಧ್ವಜ ವಿವಾದ; ಕುಮಾರಸ್ವಾಮಿ ಟ್ವೀಟ್
ಬೆಳಗಾವಿ, ಜನವರಿ 05: ಬೆಳಗಾವಿ ಮಹಾನಗರ ಪಾಲಿಕೆ ಕಚೇರಿ ಮುಂದೆ ಕನ್ನಡ ಧ್ವಜವನ್ನು ಹಾರಿಸಿರುವುದು ವಿವಾದಕ್ಕೆ ಕಾರಣವಾಗಿದೆ. "ಕನ್ನಡ ಧ್ವಜದ ವಿಚಾರದಲ್ಲಿ ನಡೆಯುತ್ತಿರುವ ಕಿತಾಪತಿಗಳನ್ನು ಸರ್ಕಾರ ನೋಡಿಯೂ ಸುಮ್ಮನಿದೆಯೇ?" ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.
ಮಂಗಳವಾರ ಎಚ್. ಡಿ. ಕುಮಾರಸ್ವಾಮಿ ಈ ಕುರಿತು ಟ್ವೀಟ್ ಮಾಡಿದ್ದಾರೆ. "ಬೆಳಗಾವಿ ಪಾಲಿಕೆ ಎದುರಿನ ಕನ್ನಡ ಧ್ವಜ ತೆರವು ಮಾಡದಿದ್ದರೆ ಗಲ್ಲಿಗಳಲ್ಲಿ ಭಗವಾಧ್ವಜ ಹಾರಿಸುವುದಾಗಿ ಎಂಇಎಸ್ ಬೆದರಿಸಿದೆ. ಕನ್ನಡ ಧ್ವಜವನ್ನು ತೆಗೆಯಬೇಕೆಂಬುದೇ ಅಪರಾಧ" ಎಂದು ಹೇಳಿದ್ದಾರೆ.
"ಇನ್ನು ಬೆದರಿಕೆ ಹಾಕುವುದು ಅಕ್ಷಮ್ಯ. ಅಷ್ಟಕ್ಕೂ ಕನ್ನಡ ಧ್ವಜವೆಂಬುದೇನಾದರೂ ಭಗವಾಧ್ವಜಕ್ಕೆ ವಿರುದ್ಧಾರ್ಥಕವೇ? ಕನ್ನಡಿಗನಿಗೆ ಕನ್ನಡ ಧ್ವಜ ಭಗವಾಧ್ವಜಕ್ಕೂ ಮಿಗಿಲು" ಎಂದು ಕುಮಾರಸ್ವಾಮಿ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

"ಬೆಳಗಾವಿಯಲ್ಲಿ ಕನ್ನಡ ಧ್ವಜದ ವಿಚಾರದಲ್ಲಿ ನಡೆಯುತ್ತಿರುವ ಕಿತಾಪತಿಗಳನ್ನು ಸರ್ಕಾರ ನೋಡಿಯೂ ಸುಮ್ಮನಿದೆಯೇ? ಅಥವಾ 'ಕನ್ನಡಿಗರಿಗೆ ಸರ್ಕಾರ ಹೆದರಬಾರದು' ಎಂದು ಬಿಜೆಪಿ ಶಾಸಕರೊಬ್ಬರು ಹಿಂದೆ ಹೇಳಿದ್ದ ಮಾತನ್ನು ಸರ್ಕಾರ ಗಂಭೀರವಾಗಿ ತೆಗೆದುಕೊಂಡಿದೆಯೇ? ಬೆಳಗಾವಿಯ ಕನ್ನಡ ವಿರೋಧಿ ಪುಂಡರ ವಿರುದ್ಧ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು" ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
ಡಿಸೆಂಬರ್ 28ರಂದು ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು ಏಕಾಏಕಿ ಕನ್ನಡ ಧ್ವಜ ಇರುವ ಸ್ತಂಭವನ್ನು ಪಾಲಿಕೆ ಕಚೇರಿ ಮುಂದೆ ಸ್ಥಾಪನೆ ಮಾಡಿದರು.
ಬೆಳಗಾವಿಯಲ್ಲಿ ಕನ್ನಡ ಧ್ವಜದ ವಿಚಾರದಲ್ಲಿ ನಡೆಯುತ್ತಿರುವ ಕಿತಾಪತಿಗಳನ್ನು ಸರ್ಕಾರ ನೋಡಿಯೂ ಸುಮ್ಮನಿದೆಯೇ? ಅಥವಾ 'ಕನ್ನಡಿಗರಿಗೆ ಸರ್ಕಾರ ಹೆದರಬಾರದು' ಎಂದು ಬಿಜೆಪಿ ಶಾಸಕರೊಬ್ಬರು ಹಿಂದೆ ಹೇಳಿದ್ದ ಮಾತನ್ನು ಸರ್ಕಾರ ಗಂಭೀರವಾಗಿ ತೆಗೆದುಕೊಂಡಿದೆಯೇ? ಬೆಳಗಾವಿಯ ಕನ್ನಡ ವಿರೋಧಿ ಪುಂಡರ ವಿರುದ್ಧ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು.
— H D Kumaraswamy (@hd_kumaraswamy) January 5, 2021
2/2
ಪೊಲೀಸರು ಕನ್ನಡ ಧ್ವಜ ಸ್ತಂಭವನ್ನು ಸ್ಥಾಪನೆ ಮಾಡದಂತೆ ತಡೆಯಲು ಪ್ರಯತ್ನ ನಡೆಸಿದರು. ಎಂಇಎಸ್ ಕಾರ್ಯಕರ್ತರು ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.












Click it and Unblock the Notifications