ಇಂಗ್ಲಿಷ್‌ನಲ್ಲಿ ಪ್ರಮಾಣ ವಚನ: ಸುರೇಶ್ ಅಂಗಡಿ ವಿರುದ್ಧ ಪ್ರತಿಭಟನೆ

ಬೆಳಗಾವಿ, ಜೂನ್ 19: ಲೋಕಸಭೆಯಲ್ಲಿ ಸಂಸದರಾಗಿ ಇಂಗ್ಲಿಷ್‌ನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಕ್ಕೆ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಅವರ ವಿರುದ್ಧ ಬೆಳಗಾವಿಯಲ್ಲಿ ಪ್ರತಿಭಟನೆ ನಡೆಯಿತು.

ರಾಜ್ಯದ ಎಲ್ಲ ಸಂಸದರು ಕನ್ನಡದಲ್ಲಿಯೇ ಪ್ರಮಾಣವಚನ ಸ್ವೀಕರಿಸಿದ್ದಾರೆ. ಆದರೆ, ಸುರೇಶ್ ಅಂಗಡಿ ಇಂಗ್ಲಿಷ್‌ನಲ್ಲಿ ಮತ್ತು ಅನಂತ್ ಕುಮಾರ್ ಹೆಗಡೆ ಸಂಸ್ಕೃತ ಭಾಷೆಯಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಕಾರ್ಯಕರ್ತರು ಸಂಸದ ಸುರೇಶ್ ಅಂಗಡಿ ಅವರ ಮನೆಗೆ ಮುತ್ತಿಗೆ ಹಾಕಿದರು.

ಚೆನ್ನಮ್ಮ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ಆರಂಭಿಸಿದ ಕರವೇ ಕಾರ್ಯಕರ್ತರು, ಅಲ್ಲಿ ಸುರೇಶ್ ಅಂಗಡಿ ಅವರ ಪ್ರತಿಕೃತಿ ದಹಿಸಿದರು. ಬಳಿಕ ಸದಾಶಿವ ನಗರದಲ್ಲಿರುವ ಅವರ ನಿವಾಸದ ಎದುರು ಪ್ರತಿಭಟನೆ ನಡೆಸಿದರು.

Karave protest against union minister Suresh angadi for taking oath in english

ಸುರೇಶ್ ಅಂಗಡಿ ಅವರು ಕನ್ನಡ ವಿರೋಧಿ. ಅವರು ಎಂಇಎಸ್‌ನೊಂದಿಗೆ ಅನೈತಿಕ ಮೈತ್ರಿ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದರು. ಈ ಸಂದರ್ಭದಲ್ಲಿ ಪ್ರತಿಭಟನಾ ನಿರತರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+