ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸಂಗೊಳ್ಳಿ ರಾಯಣ್ಣ ಪ್ರತಿಮೆ ವಿರೂಪ: ಬೆಳಗಾವಿಯತ್ತ 10,000ಕ್ಕೂ ಹೆಚ್ಚು ಕರವೇ ಕಾರ್ಯಕರ್ತರ ರ್‍ಯಾಲಿ

|
Google Oneindia Kannada News

ಬೆಳಗಾವಿ, ಡಿಸೆಂಬರ್‌ 19: ಬೆಳಗಾವಿಯ ಎರಡು ಕಡೆ ಸಂಗೊಳ್ಳಿ ರಾಯಣ್ಣನ ಪ್ರತಿಮೆಗಳನ್ನು ವಿರೂಪಗೊಳಿಸಲಾಗಿದ್ದು ಇದರ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಆಕ್ರೋಶ ವ್ಯಕ್ತಪಡಿಸಿದೆ. ನಾಳೆ ಸುಮಾರು ಹತ್ತು ಸಾವಿರಕ್ಕೂ ಹೆಚ್ಚು ಕರವೇ ಕಾರ್ಯಕರ್ತರು ಬೆಳಗಾವಿಗೆ ಪ್ರತಿಭಟನ ರ್‍ಯಾಲಿ ಮೂಲಕ ಆಗಮಿಸಲಿದ್ದಾರೆ. ಹಾಗೆಯೇ ಬಳಿಕ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲು ಕರವೇ ಕಾರ್ಯಕರ್ತರು ಮುಂದಾಗಿದ್ದಾರೆ. ಕರವೇ ಅಧ್ಯಕ್ಷ ಟಿಎ ನಾರಾಯಣಗೌಡ ನೇತೃತ್ವದಲ್ಲಿ ಈ ಬೆಳಗಾವಿ ಮಾರ್ಚ್ ನಡೆಯಲಿದೆ

ಈ ಬಗ್ಗೆ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ಸಣ್ಣೀರಪ್ಪ ಹೇಳಿಕೆಯನ್ನು ಬಿಡುಗಡೆ ಮಾಡಿದ್ದಾರೆ. "ಕರುನಾಡಿನ ಆದರ್ಶ ಪುರುಷ, ಸ್ವಾತಂತ್ರ್ಯ ಹೋರಾಟಗಾರ, ಬ್ರಿಟಿಷರಿಂದ ಗಲ್ಲಿಗೇರಿಸಲ್ಪಟ್ಟ ಹುತಾತ್ಮ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ವಿರೂಪಗೊಳಿಸಿದ ಎಂಇಎಸ್, ಶಿವಸೇನೆ ಎಂಬ ಭಯೋತ್ಪಾದಕ ಗುಂಪುಗಳ ವಿರುದ್ಧ ನಿರ್ಣಾಯಕ ಹೋರಾಟಕ್ಕೆ ಕರವೇ ಕಾರ್ಯಕರ್ತರು ಸಜ್ಜಾಗಿದ್ದಾರೆ," ಎಂದು ಬಿ.ಸಣ್ಣೀರಪ್ಪ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ರಾಯಣ್ಣ ಪ್ರತಿಮೆ ಭಗ್ನ ಪ್ರಕರಣ: ಪುಂಡರ ವಿರುದ್ಧ ಕಠಿಣ ಕ್ರಮಕ್ಕೆ ಆದೇಶರಾಯಣ್ಣ ಪ್ರತಿಮೆ ಭಗ್ನ ಪ್ರಕರಣ: ಪುಂಡರ ವಿರುದ್ಧ ಕಠಿಣ ಕ್ರಮಕ್ಕೆ ಆದೇಶ

ಹಾಗೆಯೇ "ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರಾದ ಟಿ.ಎ.ನಾರಾಯಣಗೌಡರ ಕರೆಯನ್ವಯ ಈಗಾಗಲೇ ರಾಜ್ಯದ ಎಲ್ಲ ಜಿಲ್ಲೆಗಳಿಂದ ಸಹಸ್ರಾರು ಕರವೇ ಸೇನಾನಿಗಳು ಕಾರು, ಬಸ್ಸು, ರೈಲುಗಳ ಮೂಲಕ ಬೆಳಗಾವಿಯತ್ತ ಧಾವಿಸುತ್ತಿದ್ದಾರೆ. ಟಿ.ಎ.ನಾರಾಯಣಗೌಡರ ನೇತೃತ್ವದಲ್ಲಿ ಸುಮಾರು 50 ವಾಹನಗಳ ಮೂಲಕ ನೂರಾರು ಕರವೇ ಸೇನಾನಿಗಳು ರಾತ್ರಿ 8-30ಕ್ಕೆ ಬೆಂಗಳೂರಿನ ಗಾಂಧಿನಗರದ ಕರವೇ ಕೇಂದ್ರ ಕಚೇರಿಯಿಂದ ಹೊರಡಲಿದ್ದಾರೆ," ಎಂದು ಕೂಡಾ ಹೇಳಿಕೆಯಲ್ಲಿ ಉಲ್ಲೇಖ ಮಾಡಲಾಗಿದೆ.

 Karave TA Narayana Gowda and activists Protest march towards Belagavi

ಇನ್ನು "ರಾಜ್ಯ ಸರ್ಕಾರ ಕುತಂತ್ರ ನಡೆಸಿ ನಮ್ಮ ಕಾರ್ಯಕರ್ತರನ್ನು ತಡೆಯದೆ ಇದ್ದಲ್ಲಿ ನಾಳೆ ಬೆಳಿಗ್ಗೆ (ಸೋಮವಾರ ಡಿಸೆಂಬರ್‌ 20) ಸುಮಾರು ಹತ್ತು ಸಾವಿರಕ್ಕೂ ಹೆಚ್ಚು ಕರವೇ ಸೇನಾನಿಗಳು ಬೆಳಗಾವಿ ತಲುಪಲಿದ್ದಾರೆ. ನಾಳೆ ಮಧ್ಯಾಹ್ನ 12 ಗಂಟೆಗೆ ಕಿತ್ತೂರು ರಾಣಿ ಚನ್ನಮ್ಮ ವೃತ್ತದಲ್ಲಿ ಚನ್ನಮ್ಮನವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಸಹಸ್ರಾರು ಕರವೇ ಕಾರ್ಯಕರ್ತರು ಮೆರವಣಿಗೆಯಲ್ಲಿ ಹೊರಟು ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲಿದ್ದಾರೆ," ಎಂದು ಕರವೇ ಮಾಹಿತಿ ನೀಡಿದೆ.

ಬೆಳಗಾವಿಯತ್ತ ಹೊರಟ ಕರವೇ ಬೇಡಿಕೆಗಳು ಏನು?

* ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಪ್ರತಿಮೆ ವಿರೂಪಗೊಳಿಸಿದ ಎಲ್ಲ ಭಯೋತ್ಪಾದಕರ ಮೇಲೂ ಗೂಂಡಾಕಾಯ್ದೆಯಡಿ ಪ್ರಕರಣ ದಾಖಲಿಸಿ ಶಿಕ್ಷಿಸಬೇಕು. ಎಲ್ಲರನ್ನೂ ಮಹಾರಾಷ್ಟ್ರಕ್ಕೆ ಗಡಿಪಾರು ಮಾಡಬೇಕು.
* ಎಂಇಎಸ್ ಮತ್ತು ಶಿವಸೇನೆ ಸಂಘಟನೆಗಳನ್ನು ಈ ಕೂಡಲೇ ಕರ್ನಾಟಕದಲ್ಲಿ ನಿಷೇಧಿಸಬೇಕು. ಈ ಸಂಘಟನೆಗಳ ಮುಖಂಡರನ್ನು ಗಡಿಪಾರು ಮಾಡಬೇಕು.
* ಬೆಳಗಾವಿಯಲ್ಲಿ, ಬೆಂಗಳೂರಿನಲ್ಲಿ ಮತ್ತು ರಾಜ್ಯದ ವಿವಿಧೆಡೆ ಬಂಧನಕ್ಕೆ ಒಳಗಾಗಿರುವ ಎಲ್ಲ ಕನ್ನಡಪರ ಕಾರ್ಯಕರ್ತರನ್ನೂ ಕೂಡಲೇ ಬಿಡುಗಡೆ ಮಾಡಬೇಕು.
* ಮಹಾರಾಷ್ಟ್ರದಲ್ಲಿ ಕನ್ನಡ ಬಾವುಟಕ್ಕೆ ಬೆಂಕಿ ಇಟ್ಟ, ಕನ್ನಡಿಗರ ಮೇಲೆ, ಕನ್ನಡಿಗರ ಆಸ್ತಿಪಾಸ್ತಿ ಮೇಲೆ ದಾಳಿ ನಡೆಸುತ್ತಿರುವ ಭಯೋತ್ಪಾದಕ ಶಕ್ತಿಗಳ ಮೇಲೆ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರ ಒತ್ತಡ ಹೇರಬೇಕು.

ರಾಯಣ್ಣ ಪ್ರತಿಮೆ ಭಗ್ನ ಪ್ರಕರಣ: ಪುಂಡರ ವಿರುದ್ಧ ಕಠಿಣ ಕ್ರಮಕ್ಕೆ ಆದೇಶರಾಯಣ್ಣ ಪ್ರತಿಮೆ ಭಗ್ನ ಪ್ರಕರಣ: ಪುಂಡರ ವಿರುದ್ಧ ಕಠಿಣ ಕ್ರಮಕ್ಕೆ ಆದೇಶ

ಶನಿವಾರ ನಸುಕಿನ ಅವಧಿಯಲ್ಲಿ ದುಷ್ಕರ್ಮಿಗಳು ಬೆಳಗಾವಿ ನಗರದ ಅನಗೋಳದಲ್ಲಿ ಸಂಗೊಳ್ಳಿ ರಾಯಣ್ಣನ ಪ್ರತಿಮೆಯನ್ನು ಭಗ್ನಗೊಳಿಸಿದ್ದಾರೆ. ರಾಯಣ್ಣನ ಪ್ರತಿಮೆಯ ಡಾಲ್‌ ಮತ್ತು ಖಡ್ಗ ಮುರಿದು ಚೆಲ್ಲಾಡಲಾಗಿದೆ. ಮುಖವನ್ನು ವಿರೂಪಗೊಳಿಸಲಾಗಿದೆ. ಹಾಗೆಯೇ ತಾಲೂಕಿನ ಗ್ರಾಮೀಣ ಭಾಗದ ಸುಳಗಾ ಗ್ರಾಮದಲ್ಲೂ ಕಿಡಿಗೇಡಿಗಳು ರಾಯಣ್ಣನ ಚಿತ್ರಕ್ಕೆ ಬಣ್ಣ ಎರಚಿ ವಿಕೃತಿ ಮೆರೆದಿದ್ದಾರೆ. ಇದರಿಂದ ರಾಯಣ್ಣ ಅಭಿಮಾನಿಗಳು ಹಾಗೂ ಕನ್ನಡಪರ ಸಂಘಟನೆಯವರು ಆಕ್ರೋಶಗೊಂಡಿದ್ದಾರೆ.

ಸರ್ಕಾರಕ್ಕೆ ಸ್ವಾಭಿಮಾನವಿದ್ದರೆ ಎಂಇಎಸ್ ನಿಷೇಧಿಸಲಿ ಎಂದ ಟಿ.ಎ.ನಾರಾಯಣಗೌಡ

Recommended Video

ಬಿಜೆಪಿಯನ್ನು ಓಡಿಸಲು ಅಮೇಥಿಯಲ್ಲಿ ರಣತಂತ್ರ ರೂಪಿಸಲು ಬಂದ್ರು Rahul Gandhi | Oneindia Kannada

"ರಾಜ್ಯ ಸರ್ಕಾರಕ್ಕೆ ಸ್ವಾಭಿಮಾನ ಎಂಬುವುದು ಇದೆ ಎಂದಾದರೆ ಸರ್ಕಾರ ಕೂಡಲೇ ಎಂಇಎಸ್ ನಿಷೇಧಿಸಲಿ. ಎಂಇಎಸ್ ಗೂಂಡಾಗಿರಿ ಮಾಡುತ್ತಿದೆ. ಕನ್ನಡಿಗರ ಸ್ವಾಭಿಮಾನವನ್ನು ಎಂಇಎಸ್ ಕೆರಳಿಸುತ್ತಿದೆ. ಕನ್ನಡಿಗರ ಮನೆಗೆ ಬೆಂಕಿ ಹಚ್ಚುತ್ತಿದ್ದಾರೆ. ಆದರೆ ಸರ್ಕಾರ ಎಲ್ಲನ್ನೂ ನೋಡಿಕೊಂಡು ಸುಮ್ಮನಿದೆ. ಇದು ರಣಹೇಡಿ ಸರ್ಕಾರ," ಎಂದು ಕರವೇ ಅಧ್ಯಕ್ಷ ಟಿಎ ನಾರಾಯಣಗೌಡ ಟೀಕೆ ಮಾಡಿದ್ದಾರೆ. (ಒನ್‌ಇಂಡಿಯಾ ಸುದ್ದಿ)

English summary
Karave TA Narayana Gowda and activists Protest march towards Belagavi.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X