Arabhavi Assembly Constituency: ಅರಭಾವಿಯಲ್ಲಿ ಮತ್ತೆ ಮಿನುಗುವರೇ ಬಾಲಚಂದ್ರ
ಅರಭಾವಿ ವಿಧಾನಸಭಾ ಕ್ಷೇತ್ರದಲ್ಲಿ ಜಾರಕಿಹೊಳಿ ಕುಟುಂಬದ ಪ್ರಾಬಲ್ಯ ಮೊದಲಿನಿಂದಲೂ ಇದ್ದೇ ಇದೆ. ಬಾಲಚಂದ್ರ ಜಾರಕಿಹೊಳಿ ಅವರು ಕೇತ್ರದಲ್ಲಿ ಸೋಲಿಲ್ಲದ ಸರದಾರ ಎಂದೇ ಖ್ಯಾತಿ ಪಡೆದವರು. 2008ರಿಂದಲೂ ಅವರು ಸಕ್ರೀಯ ರಾಜಕಾರಣದಲ್ಲಿ ಇದ್ದಾರೆ.
ಬೆಳಗಾವಿ, ಫೆಬ್ರವರಿ 23: ಅರಭಾವಿ ವಿಧಾನಸಭಾ ಕ್ಷೇತ್ರ ಬೆಳಗಾವಿ ಜಿಲ್ಲೆಯಲ್ಲಿ ಪ್ರಮುಖವಾದ ಕ್ಷೇತ್ರವಾಗಿದೆ. ಇದು ಬಿಜೆಪಿಯ ಭದ್ರಕೋಟೆಯಾಗಿದೆ. ಸದ್ಯ ಇಲ್ಲಿ ಬಾಲಚಂದ್ರ ಜಾರಕಿಹೊಳಿ ಅವರು ಹಾಲಿ ಶಾಸಕರಾಗಿದ್ದಾರೆ. ಇವರು ಪ್ರಸ್ತುತ ಕರ್ನಾಟಕ ಹಾಲು ಒಕ್ಕೂಟದ (ಕೆಎಂಎಫ್) ಅಧ್ಯಕ್ಷರೂ ಆಗಿದ್ದಾರೆ.
ಅರಭಾವಿ ವಿಧಾನಸಭಾ ಕ್ಷೇತ್ರದಲ್ಲಿ ಜಾರಕಿಹೊಳಿ ಕುಟುಂಬದ ಪ್ರಾಬಲ್ಯ ಮೊದಲಿನಿಂದಲೂ ಇದ್ದೇ ಇದೆ. ಬಾಲಚಂದ್ರ ಜಾರಕಿಹೊಳಿ ಅವರು ಕೇತ್ರದಲ್ಲಿ ಸೋಲಿಲ್ಲದ ಸರದಾರ ಎಂದೇ ಖ್ಯಾತಿ ಪಡೆದವರು. 2008ರಿಂದಲೂ ಅವರು ಸಕ್ರೀಯ ರಾಜಕಾರಣದಲ್ಲಿ ಇದ್ದಾರೆ.
2004ರಿಂದ ತಮ್ಮ ವಿಜಯಪತಾಕೆ ಹಾರಸಲು ಶುರು ಮಾಡಿದ ಅವರು ಮೊದಲ ಬಾರಿ ಜೆಡಿಎಸ್‌ನಿಂದ ಶಾಸಕರಾಗಿ ಅಯ್ಕೆಯಾದವರು. 2008ರಲ್ಲಿ 53,206 ಮತಗಳನ್ನು ಪಡೆದು ಅವರು ವಿಜಯಶಾಲಿಯಾಗಿದ್ದರು. ಬಳಿಕ 2013ರಲ್ಲಿ ಬಿಜೆಪಿಯಿಂದ 99,283 ಮತಗಳನ್ನು ಪಡೆದು ಅವರು ಮತ್ತೊಮ್ಮೆ ಶಾಸಕರಾದರು. ಕಳೆದ 2018ರ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಅವರು 96,144 ಮತಗಳನ್ನು ಪಡೆದು ಮತ್ತೆ ಶಾಸಕರಾದರು. ಅವರ ವಿರುದ್ಧ ಜೆಡಿಎಸ್‌ನ ಭೀಮಪ್ಪ ಗುಂಡಪ್ಪ ಗದಗ ಅವರು 48,816 ಮತಗಳನ್ನು ಪಡೆದು ಪರಾಭವಗೊಂಡರು.

ಬಾಲಚಂದ್ರ ಜಾರಕಿಹೊಳಿ ಬಿಜೆಪಿಯಿಂದ ಸ್ಪರ್ಧೆ ಖಚಿತ
ಮುಂಬರುವ ವಿಧಾನಸಭಾ ಚುನಾವಣೆಗೆ ಮತ್ತೆ ಬಾಲಚಂದ್ರ ಜಾರಕಿಹೊಳಿ ಬಿಜೆಪಿಯಿಂದ ಸ್ಪರ್ಧಿಸುವುದು ಖಚಿತ. ಕಾಂಗ್ರೆಸ್‌ನಿಂದ ಭೀಮಪ್ಪ ಗಡಾದ, ಅರವಿಂದ ದಳವಾಯಿ, ಬಿ.ಬಿ.ಹಂದಿಗುಂದ, ರಮೇಶ್ ಉಟಗಿ, ಮಲ್ಲಿಕಾರ್ಜುನ ಕಬ್ಬೂರ, ಲಖನ್ ಸವಸುದ್ದಿ ಟಿಕೆಟ್ ಆಕಾಂಕ್ಷಿಗಳಾಗಿದ್ದಾರೆ. ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆಯನ್ನು ಆರಂಭಿಸಿರುವ ಹಿನ್ನೆಲೆಯಲ್ಲಿ ಪಕ್ಷ ಸಂಘಟನೆಗೆ ಈಗಾಗಲೇ ಬಾಲಚಂದ್ರ ಜಾರಕಿಹೊಳಿ ಅವರು ತೊಡಗಿಸಿಕೊಂಡಿದ್ದಾರೆ. ಬಿಜೆಪಿಯಿಂದ ಅರಭಾವಿ ವಿಧಾನಸಭಾ ಕ್ಷೇತ್ರದ ಟಿಕೆಟ್ ಬಯಸಿ ಅರ್ಜಿ ಹಾಕಿದಂತಿಲ್ಲ. ಹಾಕಿದರೂ ಅದು ಬಾಲಚಂದ್ರ ಜಾರಕಿಹೊಳಿ ಬಿಟ್ಟು ಬೇರೆಲ್ಲೂ ಹೊಗುವುದಿಲ್ಲ.

ಸಿಡಿ ಹಗರಣದ ವಿವಾದ
ಅವರ ಸಹೋದರ ರಮೇಶ್ ಜಾರಕಿಹೊಳಿ ಅವರ ಸಿಡಿ ಹಗರಣದ ವಿವಾದ ರಾಜ್ಯದಾದ್ಯಂತ ಸದ್ದು ಮಾಡಿದ್ದು ಅವರಿಗೂ ಇರಸು ಮುರುಸು ಉಂಟಾಗಿರುವುದು ಸುಳ್ಳಲ್ಲ. ಆದರೂ ಬಾಲಚಂದ್ರ ಜಾರಕಿಹೊಳಿ ಅವರು ತಾವು ತಮ್ಮ ಸಹೋದರನೊಂದಿಗೆ ಬಿಜೆಪಿಯಲ್ಲೇ ಇರುತ್ತೇವೆ ಎಂದು ಕಳೆದ ಡಿಸೆಂಬರ್‌ನಲ್ಲಿ ಹೇಳಿದ್ದಾರೆ. ನಾಯಕ ಸಮುದಾಯಕ್ಕೆ ಸೇರಿದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿಯಲ್ಲಿ ತಮ್ಮದೇ ಪ್ರಾಬಲ್ಯವನ್ನು ಬೆಳೆಸಿಕೊಂಡಿದ್ದಾರೆ. ಕ್ಷೇತ್ರದಲ್ಲಿ ಲಿಂಗಾಯತರು ಹಾಗೂ ಕುರುಬ ಸಮುದಾಯದ ಮತಗಳು ಅಧಿಕವಾಗಿವೆ. ಈ ಎಲ್ಲ ಮತಗಳು ಬಾಲಚಂದ್ರ ಜಾರಕಿಹೊಳಿ ಅವರಿಗೆ ಬಹುತೇಕ ಬೀಳುತ್ತವೆ ಎಂಬುದು ಚುನಾವಣಾ ಸಮೀಕ್ಷೆಯ ವರದಿ.

6ರಲ್ಲಿ ಬಿಜೆಪಿಯ ಪಾರಮ್ಯ
ಆದರೆ ಈಗಾಗಲೇ ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆಯ ಮೂಲಕ ಕ್ಷೇತ್ರದಲ್ಲಿ ಮತದಾರರ ಮನವೊಲಿಕೆಗೆ ಕ್ಷೇತ್ರದಾದ್ಯಂತ ಸಂಚಾರ ಮಾಡುತ್ತಿದ್ದಾರೆ. ಬೆಳಗಾವಿ ಜಿಲ್ಲೆಯ 8 ವಿಧಾನಸಭಾ ಕ್ಷೇತ್ರಗಳ ಪೈಕಿ 6ರಲ್ಲಿ ಬಿಜೆಪಿಯ ಪಾರಮ್ಯವಿದೆ. ಎರಡು ಕಡೆ ಮಾತ್ರ ಕಾಂಗ್ರೆಸ್ ಶಾಸಕರು ಇದ್ದಾರೆ. ತಾಲೂಕು, ಪಂಚಾಯಿತಿ ಮಟ್ಟದಲ್ಲೂ ಬಿಜೆಪಿಯ ಕಾರ್ಯಕರ್ತರು ಇಲ್ಲಿ ಸಕ್ರಿಯರಾಗಿದ್ದಾರೆ.

20 ಕೆರೆಗಳನ್ನು ತುಂಬಿಸುವ ಯೋಜನೆ
ಈ ಬಾರಿಯ ಬೆಜೆಟ್‌ನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅರಭಾವಿ ವಿಧಾನಸಭಾ ಕ್ಷೇತ್ರದ 20 ಕೆರೆಗಳನ್ನು ತುಂಬಿಸುವ ಯೋಜನೆ ಹಾಕಿಕೊಂಡಿದ್ದಾರೆ. ಬೆಳಗಾವಿ ಜಿಲ್ಲೆಯ ಅರಭಾವಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 20 ಕೆರೆಗಳನ್ನು ಘಟಪ್ರಭಾ ನದಿಯಿಂದ ನೀರು ತುಂಬಿಸುವ ಯೋಜನೆಗೆ ₹323.87 ಕೋಟಿಗಳ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಹೀಗಾಗಿ ಬಾಲಚಂದ್ರ ಜಾರಕಿಹೊಳಿ ಅವರು ಚುನಾವಣೆಗೆ ಸಿದ್ಧರಾಗುವುದು ಅಷ್ಟು ಕಷ್ಟವಾಗುವುದಿಲ್ಲ. ಆದರೆ ಬೆಳಗಾವಿಯಲ್ಲಿ ಲಿಂಗಾಯತ ಸಮುದಾಯದ ನಾಯಕರು ಈ ಬಾರಿ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಬೆಂಬಲಕ್ಕೆ ನಿಂತರೆ ಬಾಲಚಂದ್ರ ಜಾರಕಿಹೊಳಿಗೆ ಕಷ್ಟವಾಗುತ್ತದೆ.
-
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ












Click it and Unblock the Notifications