Belagavi Rural Constituency : ಲಕ್ಷ್ಮೀ- ರಮೇಶ್ ಸಂಘರ್ಷಕ್ಕೆ ಸಾಕ್ಷಿಯಾಗಲಿದೆ ಕ್ಷೇತ್ರ, ವಿಶ್ಲೇಷಣೆ
ಈ ಬಾರಿ ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಎರಡು ರಾಷ್ಟ್ರೀಯ ಪಕ್ಷಗಳ ನಡುವೆ ನೇರ ಪೈಪೋಟಿ ಇದೆ. ಕಾಂಗ್ರೆಸ್ ಬಿಜೆಪಿ ಸೆಣಸಲಿವೆ. ಇದಕ್ಕೆ ಸಂಬಂಧಿಸಿದ ವರದಿ, ವಿಶ್ಲೇಷಣೆ ಓದಿ.
ಬೆಳಗಾವಿ, ಫೆಬ್ರವರಿ 20: ರಾಜ್ಯದ ಪ್ರತಿಷ್ಠಿತ ವಿಧಾನಸಭೆ ಕ್ಷೇತ್ರಗಳಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರವೂ ಒಂದು. ಬೆಳಗಾವಿಯು ಕರ್ನಾಟಕದಲ್ಲಿ ಐತಿಹಾಸಿಕ ಹಾಗೂ ಆರ್ಥಿಕ ಸ್ಥಾನಮಾನವನ್ನು ಹೊಂದಿದೆ. ಪಶ್ಚಿಮ ಘಟ್ಟಗಳ ಮಡಿಲಿನಲ್ಲಿ ಇರುವ ಬೆಳಗಾವಿ ಕ್ಷೇತ್ರವು ಹತ್ತಿ ಹಾಗೂ ರೇಷ್ಮೆ ನೇಕಾರರ ಪ್ರದೇಶಗಳಿಂದ ಕೂಡಿದೆ.
ಬೆಳಗಾವಿ ನಗರವು ಮೂರು ರಾಜ್ಯಗಳಿಗೆ ಕೊಂಡಿಯಾಗಿದೆ. ಕರ್ನಾಟಕ, ಮಹಾರಾಷ್ಟ್ರ ಹಾಗೂ ಗೋವಾ ರಾಜ್ಯಗಳಿಗೆ ಬೆಳಗಾವಿ ಸಂಪರ್ಕ ಕೇಂದ್ರವಾಗಿದೆ. ಇಲ್ಲಿ ಕನ್ನಡ, ಮರಾಠಿ ಹಾಗೂ ಕೊಂಕಣಿ ಭಾಷೆಗಳ ಸಂಗಮವಿದೆ. ಈ ಹಿನ್ನೆಲೆಯಲ್ಲಿ ಬೆಳಗಾವಿ ಶ್ರೀಮಂತ ಸಂಸ್ಕೃತಿಯನ್ನು ಪ್ರತಿನಿಧಿಸುತ್ತದೆ.
ಬೆಳಗಾವಿಯನ್ನು ಕರ್ನಾಟಕದ ಎರಡನೇ ರಾಜಧಾನಿ ಎಂದೇ ಕರೆಯಲಾಗುತ್ತದೆ. ಇಲ್ಲಿರುವ ಸುವರ್ಣ ಸೌಧದಲ್ಲಿ ವಿಧಾನಸಭೆಯ ಚಳಿಗಾಲದ ಕಲಾಪಗಳು ನಡೆಯುತ್ತವೆ. ಹೀಗಾಗಿ, ಬೆಳಗಾವಿ ರಾಜಕೀಯವಾಗಿಯೂ ಮಹತ್ವವನ್ನು ಪಡೆದುಕೊಂಡಿದೆ.

ಬೆಳಗಾವಿ ಕ್ಷೇತ್ರದ ರಾಜಕೀಯ ಚರಿತ್ರೆ
ಬೆಳಗಾಗಿ ಗ್ರಾಮೀಣ ಕ್ಷೇತ್ರವು 1967ರಿಂದ ಅಸ್ತಿತ್ವದಲ್ಲಿದೆ. ಈ ಕ್ಷೇತ್ರದಲ್ಲಿ ಕಾಂಗ್ರೆಸ್, ಜನತಾ ಪರಿವಾರ, ಜನತಾದಳ ಹಾಗೂ ಬಿಜೆಪಿ ಪಕ್ಷಗಳ ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ. ಪ್ರಸ್ತುತ ಬೆಳಗಾವಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳ ನಡುವೆ ನೇರ ಹಣಾಹಣಿ ಇದೆ. 2008 ಹಾಗೂ 2013 ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಸಂಜಯ್ ಪಾಟೀಲ್ ಅವರು ಗೆಲುವು ಸಾಧಿಸಿದ್ದರು. 2008 ರಲ್ಲಿ ಕಾಂಗ್ರೆಸ್‌ನ ಚನ್ನಬಸಪ್ಪ ಮಾಳಗಿ ಹಾಗೂ 2013 ರಲ್ಲಿ ಕಲ್ಲಪ್ಪ ಕನೇಕರ್ ಅವರು ಸಂಜಯ್ ಪಾಟೀಲ್ ವಿರುದ್ಧ ಸೋಲು ಅನುಭವಿಸಿದ್ದರು.

2018ರಲ್ಲಿ ಬದಲಾದ ಚಿತ್ರಣ
ಸತತ ಎರಡು ಬಾರಿ ಗೆದ್ದು ಬೀಗಿದ್ದ ಸಂಜಯ್ ಪಾಟೀಲ್ ಅವರು 2018ರಲ್ಲಿ ಪರಾಭವಗೊಂಡರು. ಕಾಂಗ್ರೆಸ್‌ನ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಸಂಜಯ್ ಪಾಟೀಲ್ ವಿರುದ್ಧ 51,724 ಮತಗಳ ಅಂತರದಿಂದ ಗೆದ್ದು, ಅಭೂತಪೂರ್ವ ಗೆಲುವು ದಾಖಲಿಸಿದರು. ಈ ಗೆಲುವಿನಿಂದಲೇ ಲಕ್ಷ್ಮೀ ಹೆಬ್ಬಾಳ್ಕರ್ ಅವರು ರಾಜ್ಯ ರಾಜಕಾರಣದಲ್ಲಿ ಪ್ರಭಾವಿಯಾಗಿ ಬೆಳೆದರು. ಈಗ ಅವರ ತಮ್ಮನೂ ಕಾಂಗ್ರೆಸ್‌ನಿಂದ ಎಂಎಲ್‌ಸಿ ಆಗಿದ್ದಾರೆ.

ರಮೇಶ್ ಜಾರಕಿಹೊಳಿ ವಿರುದ್ಧ 'ಲಕ್ಷ್ಮೀ' ಸಂಘರ್ಷ
ಈ ಹಿಂದೆ ಕಾಂಗ್ರೆಸ್‌ನಲ್ಲಿದ್ದ ರಮೇಶ್ ಜಾರಕಿಹೊಳಿ ಅವರು ಲಕ್ಷ್ಮೀ ಹೆಬ್ಬಾಳ್ಕರ್ ಅವರ ರಾಜಕೀಯ ಗುರುವೆಂದೇ ಹೇಳಲಾಗುತ್ತದೆ. ಆದರೆ, 2018ರ ನಂತರ ಲಕ್ಷ್ಮೀ ಹೆಬ್ಬಾಳ್ಕರ್ ಅವರೊಂದಿಗೆ ರಮೇಶ್ ಜಾರಕಿಹೊಳಿ ಅಸಮಾಧಾನ ಬೆಳೆಸಿಕೊಂಡರು. ಪಿಎಲ್‌ಡಿ ಬ್ಯಾಂಕ್ ವಿಚಾರವಾಗಿ ಭುಗಿಲೆದ್ದ ಅಸಮಾಧಾನ ಮುಂದಿನ ದಿನಗಳಲ್ಲಿ ಅಕ್ಷರಶಃ ಸಂಘರ್ಷವಾಗಿ ಮಾರ್ಪಟ್ಟಿತು. ರಮೇಶ್ ಅವರು ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಗೊಂಡರು.

ಲಕ್ಷ್ಮೀ ಹೆಬ್ಬಾಳ್ಕರ್‌ಗೆ 'ವಿಷಕನ್ಯೆ' ಎಂದ ರಮೇಶ್ ಜಾರಕಿಹೊಳಿ
ಕಳೆದ ವರ್ಷ ಸಿಡಿ ಪ್ರಕರಣದಲ್ಲಿ ರಮೇಶ್ ಜಾರಕಿಹೊಳಿ ಸಿಕ್ಕುಹಾಕಿಕೊಂಡರು. ಬಸವರಾಜ ಬೊಮ್ಮಾಯಿ ಸರ್ಕಾರದಲ್ಲಿ ಜಲಸಂಪನ್ಮೂಲ ಸಚಿವರಾಗಿದ್ದ ಅವರು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ರಮೇಶ್ ಜಾರಕಿಹೊಳಿ ಹಾಗೂ ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ರಮೇಶ್ ಜಾರಕಿಹೊಳಿ ಸಂಘರ್ಷ ಸಾರಿದ್ದಾರೆ. ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು 'ವಿಷಕನ್ಯೆ' ಎಂದು ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ. ಅವರನ್ನು ಸೋಲಿಸುವುದಾಗಿಯೂ ಪ್ರತಿಜ್ಞೆ ಮಾಡಿದ್ದಾರೆ.

ಬೆಳಗಾವಿ ಗ್ರಾಮೀಣ ಕ್ಷೇತ್ರದ ಆಕಾಂಕ್ಷಿಗಳು
ಬೆಳಗಾವಿ ಗ್ರಾಮೀಣ ಕ್ಷೇತ್ರಕ್ಕೆ ಕಾಂಗ್ರೆಸ್‌ನಿಂದ ಯಾವುದೇ ಅರ್ಜಿ ಸಲ್ಲಿಕೆಯಾಗಿಲ್ಲ. ಹೀಗಾಗಿ, ಈ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಲಕ್ಷ್ಮೀ ಹೆಬ್ಬಾಳ್ಕರ್ ಅವರೇ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ. ಇನ್ನು ಬಿಜೆಪಿಯಿಂದ ಮಾಜಿ ಶಾಸಕ ಸಂಜಯ್ ಪಾಟೀಲ್ ಅವರು ಕಣಕ್ಕಿಳಿಯುವುದು ಸಹ ಬಹುತೇಕ ಖಚಿತವಾಗಿದೆ. ಈ ಇಬ್ಬರೂ ನಾಯಕರು ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ.
ಕ್ಷೇತ್ರದ ಮತದಾರ ವಿವರ (2018ರಲ್ಲಿ ಚುನಾವಣಾ ಆಯೋಗದ ಮಾಹಿತಿಯ ಪ್ರಕಾರ)
ಪುರುಷರು: 1,10,000
ಮಹಿಳೆಯರು - 91,743
ಒಟ್ಟು: 2,01,743
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications