Athani Constituency: ಆಪ್ತನಿಗೆ ಟಿಕೆಟ್ ನೀಡದಿದ್ದರೆ ಜಾರಕಿಹೊಳಿ ಬಂಡಾಯ, ಅಥಣಿ ಬಿಡಲ್ಲವೆಂದ ಸವದಿ ಮಗ- ಇದು BJP Vs BJP ಕದನ
ಲಿಂಗಾಯತರೇ ಅಧಿಕವಾಗಿರುವ ಅಥಣಿ ತಾಲ್ಲೂಕಿನಲ್ಲಿ ಈ ಬಾರಿಯೂ ಎರಡು ರಾಷ್ಟ್ರೀಯ ಪಕ್ಷಗಳ ನಡುವೆ ಜಿದ್ದಾಜಿದ್ದಿ ಏರ್ಪಡುವ ಸಾಧ್ಯತೆಗಳು ಹೆಚ್ಚಿವೆ. ವರದಿ, ವಿಶ್ಲೇಷಣೆ ಓದಿ
ಬೆಳಗಾವಿ, ಮಾರ್ಚ್ 13: ಕರ್ನಾಟಕದ ಪ್ರತಿಷ್ಠಿತ ವಿಧಾನಸಭಾ ಕ್ಷೇತ್ರಗಳಲ್ಲಿ ಬೆಳಗಾವಿ ಜಿಲ್ಲೆಯ ಅಥಣಿ ಕ್ಷೇತ್ರವೂ ಒಂದು. ಇಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ನೇರ ಪೈಪೋಟಿ ಇದೆ. 2004ಕ್ಕೂ ಮೊದಲು ಈ ಕ್ಷೇತ್ರವು ಕಾಂಗ್ರೆಸ್ ಹಾಗೂ ಜನತಾ ಪರಿವಾರದ ನಡುವಿನ ಜಿದ್ದಾಜಿದ್ದಿಯ ಕಣವಾಗಿತ್ತು. ಆ ನಂತರ ಬಿಜೆಪಿ ತನ್ನ ನೆಲೆಯನ್ನು ಈ ಕ್ಷೇತ್ರದಲ್ಲಿ ಕಂಡುಕೊಳ್ಳುವಲ್ಲಿ ಸಫಲವಾಯಿತು. ಲಿಂಗಾಯತರೇ ಅಧಿಕವಾಗಿರುವ ಅಥಣಿ ತಾಲ್ಲೂಕಿನಲ್ಲಿ ಈ ಬಾರಿಯೂ ಎರಡು ರಾಷ್ಟ್ರೀಯ ಪಕ್ಷಗಳ ನಡುವೆ ಜಿದ್ದಾಜಿದ್ದಿ ಏರ್ಪಡುವ ಸಾಧ್ಯತೆಗಳು ಹೆಚ್ಚಿವೆ.

ಚಿಕ್ಕೋಡಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಅಥಣಿ
ಅಥಣಿ ವಿಧಾನ ಸಭಾ ಕ್ಷೇತ್ರವು ಚಿಕ್ಕೋಡಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುತ್ತದೆ. ಚಿಕ್ಕೋಡಿ ಲೋಕಸಭೆಯ 8 ವಿಧಾನಸಭಾ ಕ್ಷೇತ್ರಗಳ ಪೈಕಿ ಅಥಣಿಯೂ ಒಂದು. 2004 ರಿಂದ 2018ರ ವರೆಗೂ ಈ ಕ್ಷೇತ್ರವನ್ನು ಬಿಜೆಪಿ ಪ್ರತಿನಿಧಿಸಿದೆ. ಸಚಿವ ಲಕ್ಷ್ಮಣ ಸವದಿ ಅವರು ಈ ಕ್ಷೇತ್ರದಲ್ಲಿ ಸತತ ಮೂರು ಭಾರಿ ಜಯಗಳಿಸಿದ್ದಾರೆ. ಅವರು ಪ್ರಸ್ತುತ ವಿಧಾನ ಪರಿಷತ್ ಸದಸ್ಯರಾಗಿದ್ದು, ಬೊಮ್ಮಾಯಿ ನೇತೃತ್ವದ ಸರ್ಕರದಲ್ಲಿ ಸಾರಿಗೆ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಎಸ್ ಯಡಿಯೂರಪ್ಪನವರ ಸರ್ಕಾರದಲ್ಲಿ ಉಪ ಮುಖ್ಯಮಂತ್ರಿಯಾಗಿಯೂ ಸೇವೆ ಸಲ್ಲಿಸಿದ್ದಾರೆ.

2018ರಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ಹಣಾಹಣಿ
2018 ರಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ತೀವ್ರ ಹಣಾಹಣಿ ಏರ್ಪಟ್ಟಿತ್ತು. ಬಿಜೆಪಿಯ ಲಕ್ಷ್ಮಣ ಸವದಿ ಹಾಗೂ ಕಾಂಗ್ರೆಸ್ ಪಕ್ಷದ ಮಹೇಶ ಕುಮಟಳ್ಳಿ ನಡುವೆ ನೇರ ಸ್ಪರ್ಧೆ ಉಂಟಾಗಿತ್ತು. ಮಹೇಶ ಕುಮಟಳ್ಳಿ ಅವರು 2,331 ಮತಗಳ ಅಂತರದಿಂದ ಜಯಗಳಿಸಿದ್ದರು.

ರಮೇಶ್ ಆಪ್ತ ಕುಮಟಳ್ಳಿ ಬಿಜೆಪಿ ಸೇರ್ಪಡೆ
2019 ರಲ್ಲಿ ಮಹೇಶ ಕುಮಟಳ್ಳಿ ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಜೊತೆಗೆ ಬಿಜೆಪಿ ಸೇರ್ಪಡೆಯಾದರು. ಅಂದಿನ ಕುಮಾರಸ್ವಾಮಿ ನೇತೃತ್ವದ ಜೆಡಿಎಸ್- ಕಾಂಗ್ರೆಸ್ ಸರ್ಕಾರದ ಪತನಕ್ಕೆ ರಮೇಶ ಜಾರಕಿಹೊಳಿ ತಂಡವು ನೇರ ಹೊಣೆಯಾಗಿದೆ. ಕುಮಟಳ್ಳಿ ಅವರು ಜಾರಕಿಹೊಳಿ ಆಪ್ತವಲಯದಲ್ಲಿ ಗುರುತಿಸಿಕೊಂಡಿದ್ದಾರೆ.

ಬಿಜೆಪಿ ಟಿಕೆಟ್‌ಗಾಗಿ ಭಾರೀ ಪೈಪೋಟಿ
ಕರ್ನಾಟಕ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದೆ. ಈ ಬಿಜೆಪಿ ಟಿಕೆಟ್‌ಗಾಗಿ ಸಚಿವ ಲಕ್ಷ್ಮಣ ಸವದಿ ಹಾಗೂ ಶಾಸಕ ಮಹೇಶ ಕುಮಟಳ್ಳಿ ನಡುಗೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಮಹೇಶ ಕುಮಟಳ್ಳಿಗೆ ಬಿಜೆಪಿ ಟಿಕೆಟ್ ನೀಡದಿದ್ದರೆ, ಗೋಕಾಕದ ಪ್ರಭಾವಿ ಸಚಿವ ರಮೇಶ ಜಾರಕಿಹೊಳಿ ಬಂಡಾಯ ಏಳುವ ಸಾಧ್ಯತೆ ಹೆಚ್ಚಿದೆ. ಅತ್ತ ಲಕ್ಷ್ಮಣ ಸವದಿ ಅವರು ಟಿಕೆಟ್‌ಗಾಗಿ ಪಟ್ಟು ಹಿಡಿಯುವ ಸಾಧ್ಯತೆ ಇದೆ. ಅಥಣಿ ಟಿಕೆಟ್ ಅನ್ನು ಬಿಟ್ಟು ಕೊಡಲ್ಲ ಎಂದು ಲಕ್ಷ್ಮಣ ಸವದಿ ಅವರ ಪುತ್ರ ಬಹಿರಂಗವಾಗಿಯೇ ಹೇಳಿದ್ದಾರೆ. ಈ ಹೇಳಿಕೆಯಿಂದ ರಮೇಶ ಜಾರಕಿಹೊಳಿ ಕೆರಳಿದ್ದಾರೆ ಎನ್ನಲಾಗಿದೆ. ಕುಮಟಳ್ಳಿಗೆ ಟಿಕೆಟ್ ನೀಡದೇ ಹೋದರೆ, ನಾನು ಸ್ಪರ್ಧಿಸುವುದಿಲ್ಲ ಎನ್ನುವ ಮಾತನ್ನೂ ರಮೇಶ ಜಾರಿಕಿಹೊಳಿ ಹೇಳಿರುವುದು ಬಿಜೆಪಿಗೆ ಹಿನ್ನಡೆ ಮಾಡಲಿದೆ.

ಕಾಂಗ್ರೆಸ್ ಟಿಕೆಟ್‌ಗೆ ಹಲವು ಆಕಾಂಕ್ಷಿಗಳು
ಕೇವಲ ಬಿಜೆಪಿಯಲ್ಲಿ ಮಾತ್ರವಲ್ಲದೇ ಕಾಂಗ್ರೆಸ್ ಟಿಕೆಟ್‌ಗಾಗಿಯೂ ತೀವ್ರ ಹಣಾಹಣಿ ಏರ್ಪಟಿದೆ. ಅಥಣಿ ಕ್ಷೇತ್ರದ ಟಿಕೆಟ್‌ಗಾಗಿ 13 ಜನರು ಅರ್ಜಿಗಳನ್ನು ಹಾಕಿದ್ದಾರೆ. ಅರ್ಜಿ ಹಾಕಿದ 13 ಜನರಲ್ಲಿ ನಾಲ್ಕು ಮುಖಂಡರನ್ನು ಕಾಂಗ್ರೆಸ್ ಸ್ಕ್ರೀನಿಂಗ್ ಕಮಿಟಿ ಆಯ್ಕೆ ಮಾಡಿದೆ ಎಂದು ವರದಿಯಾಗಿದೆ. ಎಸ್ ಕೆ ಭೂತಾಳೆ, ಧರೆಪ್ಪ ಟಕ್ಕಣ್ಣವರ, ಗಜಾನನ ಮಂಗಸೂಳಿ ಮತ್ತು ಬಸವರಾಜ ಭೂತಾಳೆ ಅವರನ್ನು ಆಯ್ಕೆ ಮಾಡಲಾಗಿರುವುದು ಗೊತ್ತಾಗಿದೆ.

ಸತೀಶ್ ಜಾರಕಿಹೊಳಿ ಆಪ್ತನಿಗೆ ಟಿಕೆಟ್?
ಈ ನಾಲ್ವರಲ್ಲಿ ಎಸ್ ಕೆ ಭೂತಾಳೆ ಅವರಿಗೆ ಟಿಕೆಟ್ ದೊರೆಯುವ ಸಾಧ್ಯತೆಗಳು ಹೆಚ್ಚಿವೆ ಎಂದು ಮೂಲಗಳು ಹೇಳಿವೆ. ಕಾರಣ, ಭೂತಾಳೆ ಅವರು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಹತ್ತಿರವಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ, ಜಾತಿ ಆಧಾರದಲ್ಲಿ ನೋಡುವುದಾದರೆ, ಪಂಚಮಸಾಲಿ ಲಿಂಗಾಯತರ ಬೆಂಬಲ ಹೊಂದಿರುವ ಧರೆಪ್ಪ ಟಕ್ಕಣ್ಣನವರ್ ಅವರಿಗೂ ಟಿಕೆಟ್ ದೊರೆಯುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications