Chikkodi-Sadalga Constituency: ಹುಕ್ಕೇರಿ ಕುಟುಂಬಕ್ಕೆ ಬಿಜೆಪಿ ಸವಾಲು- ವರದಿ, ವಿಶ್ಲೇಷಣೆ
ಲಿಂಗಾಯತರೇ ಅಧಿಕವಾಗಿರುವ ಖಾನಾಪುರ ವಿಧಾನಸಭಾ ಕ್ಷೇತ್ರದಲ್ಲಿ ಈ ಬಾರಿಯೂ ಎರಡು ರಾಷ್ಟ್ರೀಯ ಪಕ್ಷಗಳ ನಡುವೆ ಜಿದ್ದಾಜಿದ್ದಿ ಏರ್ಪಡುವ ಸಾಧ್ಯತೆಗಳು ಹೆಚ್ಚಿವೆ. ವರದಿ, ವಿಶ್ಲೇಷಣೆ ಓದಿ
ಬೆಳಗಾವಿ, ಮಾರ್ಚ್ 16: ರಾಜ್ಯದ ಪ್ರತಿಷ್ಠಿತ ವಿಧಾನಸಭೆ ಕ್ಷೇತ್ರಗಳಲ್ಲಿ ಚಿಕ್ಕೋಡಿ- ಸದಲಗಾ ವಿಧಾನಸಭೆ ಕ್ಷೇತ್ರವೂ ಒಂದು. ಈ ಕ್ಷೇತ್ರವು ಬೆಳಗಾವಿ ಜಿಲ್ಲೆಯಲ್ಲಿ ಬರುತ್ತದೆ. ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಭಾಗವಾಗಿದೆ. 2008ರಲ್ಲಿ ಚಿಕ್ಕೋಡಿ ಮತ್ತು ಸದಲಗಾ ವಿಧಾನಸಭಾ ಕ್ಷೇತ್ರಗಳನ್ನು ವಿಲೀನಗೊಳಿಸಿ ಚಿಕ್ಕೋಡಿ-ಸದಲಗಾ ವಿಧಾನಸಭಾ ಕ್ಷೇತ್ರವನ್ನು ರಚಿಸಲಾಯಿತು. ಈ ಕ್ಷೇತ್ರದ ಪರಿಚಯವನ್ನು ಇಲ್ಲಿ ತಿಳಿಯಿರಿ.
ಚಿಕ್ಕೋಡಿ ಸದಲಗಾ ವಿಧಾನಸಭಾ ಕ್ಷೇತ್ರದ ಒಟ್ಟು ಜನಸಂಖ್ಯೆ 2,64,207. ಈ ಕ್ಷೇತ್ರದಲ್ಲಿ 2,06,262 ಮತದಾರರಿದ್ದಾರೆ. ಅದರಲ್ಲಿ 1,04,355 ಪುರುಷರು ಇದ್ದಾರೆ. 1,01,292 ಮಹಿಳೆಯರಿದ್ದಾರೆ. ಚಿಕ್ಕೋಡಿ ತಾಲೂಕಿನಲ್ಲಿ ಶೇ.83.54ರಷ್ಟು ಹಿಂದೂಗಳು, ಶೇ.8.81ರಷ್ಟು ಮುಸ್ಲಿಮರು ಹಾಗೂ ಶೇ.0.1ರಷ್ಟು ಕ್ರೈಸ್ತರಿದ್ದಾರೆ. ಈ ಕ್ಷೇತ್ರವು ಲಿಂಗಾಯತ ಸಮುದಾಯದ ಪ್ರಾಬಲ್ಯವಿದೆ.

ಚಿಕ್ಕೋಡಿ ಸದಲಗಾ ಕ್ಷೇತ್ರವು 2008ರಲ್ಲಿ ರಚನೆಯಾಯಿತು. ಕಳೆದ ಮೂರು ಚುನಾವಣೆಗಳಲ್ಲಿ ( 2008, 2013 ಹಾಗೂ 2018) ಕಾಂಗ್ರೆಸ್ ಪಕ್ಷವು ಜಯಭೇರಿ ಬಾರಿಸಿದೆ. ಇಲ್ಲಿ ಹುಕ್ಕೇರಿ ಮನೆತನದ ಹಿಡಿತವಿದೆ. 2008 ರಲ್ಲಿ ಈ ಕ್ಷೇತ್ರದಿಂದ ಸ್ಪರ್ಧಿಸಿದ್ದ ಪ್ರಕಾಶ್ ಹುಕ್ಕೇರಿ ಅವರು ಜಯಗಳಿಸಿದ್ದರು. 2013ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಮರು ಆಯ್ಕೆಯಾದರು. 2014ರಲ್ಲಿ ನಡೆದು ಉಪಚುನಾವಣೆಯಲ್ಲಿ ಅವರ ಪುತ್ರ ಗಣೇಶ್ ಪ್ರಕಾಶ್ ಹುಕ್ಕೇರಿ ಅವರು ಸ್ಪರ್ಧಿಸಿದ ಜಯ ಗಳಿಸಿದರು. ಆ ನಂತರ 2018ರ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಕಣಕ್ಕಿಳಿದ ಗಣೇಶ್ ಹುಕ್ಕೇರಿ ಅವರು ಮರು ಆಯ್ಕೆಯಾದರು.
ಪ್ರಸ್ತುತ, ಪ್ರಕಾಶ್ ಹುಕ್ಕೇರಿ ಅವರು ವಾಯವ್ಯ ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿನ ಸದಸ್ಯರಾಗಿದ್ದಾರೆ. ಅವರು ಜೂನ್ 2022 ರಲ್ಲಿ ಆಯ್ಕೆಯಾದರು. 2014ರಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಚಿಕ್ಕೋಡಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಜಯಗಳಿಸಿದರು. ಲೋಕಸಭೆಯಲ್ಲಿ 2014 ರಿಂದ 19ರ ವರೆಗೆ ಸಂಸದರಾಗಿ ಸೇವೆ ಸಲ್ಲಿಸಿದ್ದಾರೆ.

ಪ್ರಕಾಶ್ ಹುಕ್ಕೇರಿ ಅವರು ಕಾಂಗ್ರೆಸ್‌ನ ಕರ್ನಾಟಕದ ರಾಜ್ಯ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ. ಸಣ್ಣ ಕೈಗಾರಿಕೆಗಳು, ಸಕ್ಕರೆ ಮತ್ತು ದತ್ತಿ ಸಚಿವರಾಗಿ ಪ್ರಕಾಶ್ ಹುಕ್ಕೇರಿ ಕಾರ್ಯನಿರ್ವಹಿಸಿದ್ದಾರೆ. ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದಾರೆ. 2013 ರ ಚುನಾವಣೆಯಲ್ಲಿ ಚಿಕ್ಕೋಡಿ- ಸದಲಗಾ ಕ್ಷೇತ್ರದಿಂದ 1,02,237 ಮತಗಳನ್ನು ಪಡೆಯುವ ಮೂಲಕ ಭರ್ಜರಿಯಾಗಿ ಜಯಗಳಿಸಿದ್ದರು.
2018ರಲ್ಲಿ ಜಯಗಳಿಸಿರುವ ಗಣೇಶ್ ಹುಕ್ಕೇರಿ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡುವುದು ಬಹುತೇಕ ಖಚಿತವಾಗಿದೆ. ಇಲ್ಲಿ ಕಾಂಗ್ರೆಸ್ ಟಿಕೆಟ್‌ಗಾಗಿ ಅವರೊಬ್ಬರನ್ನು ಬಿಟ್ಟರೆ ಬೇರೆ ಯಾರೂ ಅರ್ಜಿಯನ್ನು ಸಲ್ಲಿಸಿಲ್ಲ. ಚಿಕ್ಕೋಡಿ- ಸದಲಗಾ ಕ್ಷೇತ್ರದಲ್ಲಿ ತಮ್ಮದೇ ಆದ ವರ್ಚಸ್ಸನ್ನು ಹೊಂದಿರುವ ಹುಕ್ಕೇರಿ ಕುಟುಂಬ ಮತ್ತೆ ಕ್ಷೇತ್ರವನ್ನು ಗೆಲ್ಲುವ ನಿಟ್ಟಿನಲ್ಲಿ ಕಾರ್ಯಗತವಾಗಿದೆ. ಯುವ ಮುಖಂಡ ಗಣೇಶ್ ಹುಕ್ಕೇರಿ ಅವರು ಕ್ಷೇತ್ರದಲ್ಲಿ ಹೆಸರು ಕೆಡಿಸಿಕೊಂಡಲ್ಲವೆಂಬುದು ಅವರಿಗೆ ಪ್ಲಸ್ ಪಾಯಿಂಟ್ ಆಗಲಿದೆ ಎಂದು ರಾಜಕೀಯ ತಜ್ಞರು ಹೇಳಿದ್ದಾರೆ.
ಗಣೇಶ್ ಹುಕ್ಕೇರಿ ವಿರುದ್ಧ ಪ್ರಬಲ ಮುಖಂಡನನ್ನು ಕಣಕ್ಕಿಳಿಸಲು ಬಿಜೆಪಿ ಯತ್ನ ನಡೆಸಿದೆ. ಇಂತಹ ಅಭ್ಯರ್ಥಿಗಾಗಿ ಕೇಸರಿ ಪಡೆ ಹುಡುಕಾಟ ನಡೆಸುತ್ತಿದೆ. ಮೂಲಗಳ ಪ್ರಕಾರ, ಚಿಕ್ಕೋಡಿ- ಸದಲಗಾ ಕ್ಷೇತ್ರದಲ್ಲಿ ಜಗದೀಶ್ ಕವಟಗಿಮಠ ಓಡಾಟ ನಡೆಸಿದ್ದಾರೆ. ಟಿಕೆಟ್‌ಗಾಗಿಯೂ ಪ್ರಯತ್ನ ನಡೆಸಿದ್ದಾರೆ. ಇವರನ್ನು ಬಿಟ್ಟರೆ, ಕೆಎಲ್‌ಇ ಸೊಸೈಟಿಯ ಮುಖ್ಯಸ್ಥರಾದ ಪ್ರಭಾಕರ ಕೋರೆ ಅವರ ಪುತ್ರ ಅಮಿತ್ ಕೋರೆ ಅವರನ್ನು ಕಣಕ್ಕಿಳಿಸುವ ಬಗ್ಗೆಯೂ ಮಾತುಗಳು ಕೇಳಿಬಂದಿವೆ. ಈ ಇಬ್ಬರೂ ಮುಖಂಡರು ಲಿಂಗಾಯತ ಸಮುದಾಯಕ್ಕೆ ಸೇರಿದವರು. ಈ ಕ್ಷೇತ್ರವು ಕಾಂಗ್ರೆಸ್‌ನ ಭದ್ರಕೋಟೆಯಾಗಿದ್ದು, ಬಿಜೆಪಿಗೆ ಸವಾಲಿನ ವಿಚಾರವೇ ಸರಿ. ಇಲ್ಲಿ ಜೆಡಿಎಸ್ ಆಟಕ್ಕುಂಟು ಲೆಕ್ಕಕ್ಕೆ ಇಲ್ಲದಂತಾಗಿದೆ.
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Nuwan Thushara: ಆರ್ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ












Click it and Unblock the Notifications