ಪತ್ರಕರ್ತ ರವಿ ಬೆಳಗೆರೆ, ಅನಿಲ್ ರಾಜ್ ಬಂಧನಕ್ಕೆ ಗೃಹ ಇಲಾಖೆಗೆ ಪತ್ರ

ಬೆಳಗಾವಿ, ನವೆಂಬರ್ 22: ಹಾಯ್ ಬೆಂಗಳೂರ್ ವಾರಪತ್ರಿಕೆ ಸಂಪಾದಕ- ಪತ್ರಕರ್ತ ರವಿ ಬೆಳಗೆರೆ ಹಾಗೂ ಯಲಹಂಕ ವಾಯ್ಸ್ ಸಂಪಾದಕ ಅನಿಲ್ ರಾಜ್ ಗೆ ಬಂಧನದ ಭೀತಿ ಎದುರಾಗಿದೆ. ಇಬ್ಬರನ್ನೂ ಕೂಡಲೇ ಬಂಧಿಸಲು ಕ್ರಮ ಕೈಗೊಳ್ಳುವಂತೆ ವಿಧಾನಸಭಾ ಸಚಿವಾಲಯದಿಂದ ಗೃಹ ಇಲಾಖೆಗೆ ಪತ್ರ ಕಳುಹಿಸಲಾಗಿದೆ.

ಈ ಹಿಂದೆ ಹಕ್ಕುಬಾಧ್ಯತಾ ಸಮಿತಿಯಿಂದ ಶಿಫಾರಸು ಮಾಡಿದ್ದ ಒಂದು ವರ್ಷದ ಜೈಲು ಶಿಕ್ಷೆ ಹಾಗೂ ದಂಡ ವಿಧಿಸುವ ತೀರ್ಮಾನವನ್ನು ವಿಧಾನಸಭೆಯಲ್ಲಿ ಮಂಗಳವಾರ ಎತ್ತಿ ಹಿಡಿಯಲಾಗಿದೆ. ಸದನದ ನಿರ್ಣಯವನ್ನು ತಕ್ಷಣವೇ ಜಾರಿಗೆ ತರಬೇಕು ಎಂದು ಗೃಹ ಇಲಾಖೆಗೆ ಪತ್ರ ಬರೆಯಲಾಗಿದೆ ವಿಧಾನಸಭೆ ಕಾರ್ಯದರ್ಶಿ ಎಸ್.ಮೂರ್ತಿ ತಿಳಿಸಿದ್ದಾರೆ.

Karnataka assembly writes letter to arrest journalist Ravi Belagare

ಅಂದಹಾಗೆ, ಪತ್ರಕರ್ತರಾದ ರವಿ ಬೆಳಗೆರೆ ಹಾಗೂ ಅನಿಲ್ ರಾಜ್ ಗೆ ಹಕ್ಕುಬಾಧ್ಯತಾ ಸಮಿತಿಯು ಒಂದು ವರ್ಷ ಜೈಲು ಶಿಕ್ಷೆ ಹಾಗೂ ಹತ್ತು ಸಾವಿರ ರುಪಾಯಿ ದಂಡ ವಿಧಿಸಿತ್ತು. ಈ ತೀರ್ಮಾನದ ವಿರುದ್ಧ ಇಬ್ಬರೂ ಪತ್ರಕರ್ತರು ಹೈಕೋರ್ಟ್ ಮೆಟ್ಟಿಲೇರಿದ್ದರು. ಆ ನಂತರ ಈ ಪ್ರಕರಣದ ಮರುಪರಿಶೀಲಿಸುವಂತೆ ವಿಧಾನಸಭೆ ಅಧ್ಯಕ್ಷ ಕೆ.ಬಿ.ಕೋಳಿವಾಡ ಅವರಿಗೆ ಮನವಿ ಮಾಡಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+