ಕರ್ನಾಟಕ ಬಂದ್: ತಡರಾತ್ರಿ ಬಸ್ ಗೆ ತಡೆಯೊಡ್ಡಿದ ಕಾರ್ಯಕರ್ತರ ಬಂಧನ

Recommended Video

      ಕರ್ನಾಟಕ ಬಂದ್: ತಡರಾತ್ರಿ ಬಸ್ ಗೆ ತಡೆಯೊಡ್ಡಿದ ಕಾರ್ಯಕರ್ತರ ಬಂಧನ | Oneindia Kannada

      ಬೆಳಗಾವಿ, ಜನವರಿ 25: ಮಹಾದಾಯಿ ನದಿ ನೀರಿನ ಇತ್ಯರ್ಥಕ್ಕಾಗಿ ಕನ್ನಡ ಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಗೆ ಬೆಳಗಾವಿಯಲ್ಲಿ ಉತ್ತಮ ಪ್ರತಿಕ್ರಿಯೆ ಲಭ್ಯವಾಗಿದೆ.

      ಚಿತ್ರಗಳು : ಮಹದಾಯಿಗಾಗಿ ಕರ್ನಾಟಕ ಬಂದ್

      ಬೆಳಗ್ಗೆಯಿಂದಲೇ ಬೆಳಗಾವಿ ಜಿಲ್ಲೆಯಯಲ್ಲಿ ಕೆಎಸ್ ಆರ್ ಟಿಸಿ ಬಸ್ ಸೇವೆ ಸ್ಥಗಿತಗೊಳಿಸಲಾಗಿದೆ, ಜತೆಗೆ ಗೋವಾ, ಮಹಾರಾಷ್ಟ್ರ ಹಾಗೂ ರಾಜ್ಯದ ವಿವಿಧ ಭಾಗಕ್ಕೆ ತೆರಳುವ ಬಸ್ ಸೇವೆಯನ್ನೂ ಕೂಡ ಸ್ಥಗಿತಗೊಳಿಸಲಾಗಿದೆ. ಬೆಳಗಾವಿಯ ಜಿಲ್ಲೆಯ ಐದು ತಾಲೂಕುಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಬಳಗಾವಿ ಡಿಸಿ ಜಿಯಾವುಲ್ಲಾ ತಿಳಿಸಿದ್ದಾರೆ.

      ಬೆಳಗಾವಿ ಜಿಲ್ಲೆ, ಬೈಲಹೊಂಗಲ, ಕಿತ್ತೂರು, ಖಾನಾಪುರ, ರಾಮದುರ್ಗ, ಸವದತ್ತಿ ತಾಲೂಕಿನಲ್ಲಿ ರಜೆ ಘೋಷಿಸಲಾಗಿದೆ. ಬಂದ್ ಗೆ ಕನ್ನಡ ಪರ ಹಾಗೂ ರೈತ ಸಂಘಟನೆಗಳಿಂದ ಬೆಂಬಲ ದೊರೆತಿದೆ. ಬೆಳಗಾವಿ ಜಿಲ್ಲೆಯಾದ್ಯಂತ ಬಿಗಿ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ.

      Karnataka bandh: Bus service hits in Belgaum

      ಒಟ್ಟು 1500 ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. 10 ಕೆ.ಎಸ್.ಆರ್.ಪಿ, 15 ಕ್ಕೂ ಹೆಚ್ಚು ಡಿ.ಆರ್. ವಾಹನಗಳನ್ನು ನಿಯೋಜಿಸಲಾಗಿದೆ. ಮಹಾದಾಯಿ ಉಗಮ ಸ್ಥಾನವಾದ ಕಣಕುಂಬಿ ಮತ್ತು ಕಾಮಗಾರಿ ಪ್ರದೇಶದಲ್ಲಿ ಸಂಚಾರವನ್ನು ನಿರ್ಬಂಧಿಸಲಾಗಿದೆ. ತಡರಾತ್ರಿ ಗೋವಾ ಹೋಗುವ ಬಸ್ ತಡೆಯಲು ಯತ್ನಿಸಿದ ಕರ್ನಾಟಕ ನವ ನಿರ್ಮಾಣ ಸೇನೆಯ ಕಾರ್ಯಕರ್ತರನ್ನು ಕಳೆದ 8 ಗಂಟೆಯಿಂದ ಪೊಲೀಸರು ಬಂಧನದಲ್ಲಿಟ್ಟಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+