• search
  • Live TV
ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಬೆಳಗಾವಿ : ಮೊದಲ ದಿನದ ಕಲಾಪದ ಮುಖ್ಯಾಂಶಗಳು

|

ಬೆಳಗಾವಿ, ಡಿ. 9 : ಪತ್ರಿಪಕ್ಷಗಳ ಧರಣಿ, ಆಡಳಿತ ಪ್ರತಿಪಕ್ಷಗಳ ಸದಸ್ಯರ ವಾಕ್ಸಮರದಿಂದ ಬೆಳಗಾವಿಯಲ್ಲಿ ನಡೆಯುತ್ತಿರುವ 10 ದಿನಗಳ ಚಳಿಗಾಲದ ಅಧಿವೇಶನ ಆರಂಭವಾಯಿತು. ಮೊದಲ ದಿನದ ಕಲಾಪದಲ್ಲೇ ಕೋಲಾಹಲದ ವಾತಾವರಣ ನಿರ್ಮಾಣವಾಗಿ ಸದನವನ್ನು ಎರಡು ಬಾರಿ ಮುಂದೂಡಲಾಯಿತು.

ಕಬ್ಬು ಬೆಳೆಗಾರರ ಹಿತ ರಕ್ಷಣೆ ಮಾಡಿಲ್ಲ ಎಂದು ಆರೋಪಿಸಿ ಬಿಜೆಪಿ ನಿಲುವಳಿ ಸೂಚನೆಯಡಿ ಚರ್ಚೆಗೆ ಅವಕಾಶ ನೀಡಬೇಕೆಂದು ಒತ್ತಾಯಿಸಿತು. ಜೆಡಿಎಸ್ ಪ್ರಶ್ನೋತ್ತರ ಅವಧಿಯಲ್ಲಿ ಕೆಂಪೇಗೌಡ ಬಡಾವಣೆಯಲ್ಲಿ ನಡೆದಿರುವ ಅವ್ಯವಹಾರ ಕುರಿತು ಚರ್ಚೆಗೆ ಅವಕಾಶ ನೀಡಬೇಕೆಂದು ಧರಣಿ ನಡೆಸಿ, ಕಲಾಪವನ್ನು ಸುಮಾರು ಎರಡು ತಾಸು ಮುಂದೂಡುವಂತೆ ಮಾಡಿದರು.

ಮಂಗಳವಾರ ಬೆಳಗ್ಗೆ ಕಲಾಪ ಆರಂಭವಾಗುತ್ತಿದ್ದಂತೆ ಬಿಜೆಪಿ ಸದಸ್ಯರು ಸರ್ಕಾರದಲ್ಲಿರುವ ನಾಲ್ವರು ಭ್ರಷ್ಟ ಸಚಿವರನ್ನು ಸಂಪುಟದಿಂದ ಕೈಬಿಡಬೇಕು ಎಂದು ಆಗ್ರಹಿಸಿ ಸದನದ ಬಾವಿಗಿಳಿದು ಘೋಷಣೆಗಳನ್ನು ಕೂಗಲು ಆರಂಭಿಸಿದರು. ಸ್ಪೀಕರ್ ಕಾಗೋಡು ತಿಮ್ಮಪ್ಪ ಮತ್ತು ಬಿಜೆಪಿ ಸದಸ್ಯರ ನಡುವೆ ಮಾತಿನ ಚಕಮಕಿ ನಡೆಯಿತು.

ಹೆಬ್ಬಾಳ ಕ್ಷೇತ್ರದ ಬಿಜೆಪಿ ಶಾಸಕ ಜಗದೀಶ್ ಕುಮಾರ್ ಕೊರಳಿಗೆ ಮಹಾತ್ಮ ಗಾಂಧಿ ಫೋಟೋ ಹಾಕಿಕೊಂಡು ಕೈಯಲ್ಲಿ ತಾಳ ಹಿಡಿದು ಸದನಕ್ಕೆ ಬಂದಿದ್ದರು. 'ಸರ್ಕಾರಕ್ಕೆ ಒಳ್ಳೆ ಬುದ್ಧಿ ಕೊಡಪ್ಪ ದೇವರೇ' ಎಂದು ಭಜನೆ ಮಾಡಿ ಕಲಾಪದಲ್ಲಿ ಗಮನ ಸೆಳೆದರು. [ಬೆಳಗಾವಿಯಲ್ಲಿ ಬಿಜೆಪಿ ಪ್ರತಿಭಟನೆ]

ಕಬ್ಬು ಬೆಳೆಗಾರರ ಹಿತ ರಕ್ಷಣೆ ಮಾಡಿಲ್ಲ ಎಂದು ಆರೋಪಿಸಿ ಬಿಜೆಪಿ ನಿಲುವಳಿ ಸೂಚನೆಯಡಿ ಚರ್ಚೆಗೆ ಅವಕಾಶ ನೀಡಬೇಕೆಂದು ಒತ್ತಾಯಿತು. ನಾಲ್ವರು ಸಚಿವರು ರಾಜೀನಾಮೆ ನೀಡಬೇಕು ಎಂದು ಧರಣಿ ನಡೆಸಿದರು ಸ್ಪೀಕರ್ ಮಾತನ್ನು ಯಾವ ಸದಸ್ಯರು ಕೇಳಿಸಿಕೊಳ್ಳದ ಕಾರಣ ಕೆಲವು ಕಾಲ ಕಲಾಪವನ್ನು ಮುಂದೂಡಲಾಯಿತು. [ನಡೆಯಲಿಲ್ಲ ಮರಾಠಿಗರ ಮಹಾಮೇಳವ]

ನಂತರ ಕಲಾಪ ಪುನಃ ಆರಂಭವಾದಾಗ ಜೆಡಿಎಸ್ ಪ್ರಶ್ನೋತ್ತರ ಅವಧಿಯಲ್ಲಿ ಕೆಂಪೇಗೌಡ ಬಡಾವಣೆಯಲ್ಲಿ ನಡೆದಿರುವ ಅವ್ಯವಹಾರ ಕುರಿತು ಚರ್ಚೆಗೆ ಅವಕಾಶ ನೀಡಬೇಕೆಂದು ಧರಣಿ ನಡೆಸಿದರು, ಇದರಿಂದ ಮಧ್ಯಾಹ್ನ 12.30ಕ್ಕೆ ಕಲಾಪವನ್ನು 3 ಗಂಟೆಗೆ ಮುಂದೂಡಲಾಯಿತು.

ಸಮಯ ವ್ಯರ್ಥ ಮಾಡಬೇಡಿ : ಸುವರ್ಣ ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ 'ಬೆಳಗಿನ ಒಂದೂವರೆ ಗಂಟೆಯ ಕಲಾಪ ವ್ಯರ್ಥವಾಗಿದೆ. ಮೊದಲು ಪ್ರಶ್ನೋತ್ತರ ಕಲಾಪ ನಡೆಸಿ ನಂತರ ಕಬ್ಬು ಬೆಳೆಗಾರರ ಸಮಸ್ಯೆ ಬಗ್ಗೆ ಚರ್ಚೆ ಮಾಡಬಹುದಾಗಿತ್ತು. ವಿರೋಧ ಪಕ್ಷಗಳು ಮತ್ತು ಸರ್ಕಾರ ಅಧಿವೇಶನದಲ್ಲಿ ಸಮಯವನ್ನು ವ್ಯರ್ಥ ಮಾಡಬಾರದು' ಎಂದು ಹೇಳಿದರು.

ಅಗಲಿದ ಗಣ್ಯರಿಗೆ ಶ್ರದ್ಧಾಂಜಲಿ : ಇಂದು ಬೆಳಗ್ಗೆ ವಂದೇ ಮಾತರಂ ಗೀತಗಾಯನದ ಮೂಲಕ ಸದನ ಆರಂಭವಾಯಿತು. ಸ್ಪೀಕರ್ ಕಾಗೋಡು ತಿಮ್ಮಪ್ಪ ಇತ್ತೀಚೆಗೆ ನಿಧನರಾದ ಮಾಜಿ ಸಚಿವರು, ಮಾಜಿ ಶಾಸಕರು, ಸಾಹಿತಿಗಳು ಹಾಗೂ ಗಣ್ಯರಿಗೆ ಸಂತಾಪ ಸೂಚಕ ನಿರ್ಣಯ ಮಂಡಿಸಿ ವಿವರಣೆ ನೀಡಿದರು. ಮೂರು ನಿಮಿಷ ಕಾಲ ಮೌನಾಚರಣೆ ಮಾಡಿ ಗಣ್ಯರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
10 days Karnataka Assembly winter session in Belagavi. Day one Tuesday, December 9 highlights. What happened in the Assembly today?.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more