ಸಿಎಂ ಸಿದ್ದರಾಮಯ್ಯ ಹೆಚ್ಚುದಿನ ಅಧಿಕಾರದಲ್ಲಿರೋಲ್ಲ!
ಬೆಳಗಾವಿ, ಡಿ. 9 : ನಾಲ್ವರು ಭ್ರಷ್ಟ ಸಚಿವರನ್ನು ಸಂಪುಟದಿಂದ ವಜಾಗೊಳಿಸಬೇಕು, ಕಬ್ಬು ಬೆಳೆಗಾರರ ಹಿತವನ್ನು ಕಾಪಾಡಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿ ನಾಯಕರನ್ನು ಬೆಳಗಾವಿಯ ಸುವರ್ಣ ವಿಧಾನಸೌಧದ ಬಳಿ ಪೊಲೀಸರು ಬಂಧಿಸಿದ್ದಾರೆ.
ಮಂಗಳವಾರ ಬಿ.ಎಸ್.ಯಡಿಯೂರಪ್ಪ, ಪ್ರಹ್ಲಾದ್ ಜೋಶಿ, ರಾಜ್ಯ ಬಿಜೆಪಿ ಉಸ್ತುವಾರಿ ಮುರಳೀಧರ ರಾವ್, ಶ್ರೀರಾಮುಲು, ಜಗದೀಶ್ ಶೆಟ್ಟರ್ ಮುಂತಾದವರು, ನಾಲ್ವರು ಭ್ರಷ್ಟ ಸಚಿವರನ್ನು ಸಂಪುಟದಿಂದ ಕೈಬಿಡಬೇಕು ಎಂದು ಆಗ್ರಹಿಸಿ ಸುವರ್ಣ ವಿಧಾನಸೌಧದ ಸಮೀಪ ಪ್ರತಿಭಟನೆ ನಡೆಸಿದರು. [ಮೊದಲ ದಿನದ ಕಲಾಪದ ಮುಖ್ಯಾಂಶಗಳು]

ಪ್ರತಿಭಟನಾ ಸ್ಥಳದಿಂದ ನೂರಾರು ಕಾರ್ಯಕರ್ತರೊಂದಿಗೆ ಬಿ.ಎಸ್.ಯಡಿಯೂರಪ್ಪ, ಪ್ರಹ್ಲಾದ್ ಜೋಶಿ, ಕೆ.ಎಸ್.ಈಶ್ವರಪ್ಪ, ಜಗದೀಶ್ ಶೆಟ್ಟರ್ ಮುಂತಾವರು ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ತೆರಳಿದರು. ಈ ಸಂದರ್ಭದಲ್ಲಿ ಅವರನ್ನು ತಡೆದ ಪೊಲೀಸರು, ಎಲ್ಲರನ್ನು ಬಂಧಿಸಿದರು.[ನಾಲ್ವರು ಸಚಿವರ ವಿರುದ್ಧ ಬಿಜೆಪಿ ಹೋರಾಟ]

ಸುವರ್ಣ ಸೌಧದಲ್ಲಿ ಸಾವಿರಾರು ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಮರಳೀಧರ ರಾವ್, ಸಿದ್ದರಾಮಯ್ಯ ಅವರ ಸರ್ಕಾರದ ವಿರುದ್ಧ ನಾವು ಅಧಿಕೃತ ಹೋರಾಟವನ್ನು ಆರಂಭಿಸಿದ್ದೇವೆ. ಸಿದ್ದರಾಮಯ್ಯ ಅವರು ಹೆಚ್ಚುದಿನ ಅಧಿಕಾರದಲ್ಲಿ ಮುಂದುವರೆಯುವುದಿಲ್ಲ ಎಂದು ಹೇಳಿದರು.

ಬಿಜೆಪಿ ಟಾರ್ಗೆಟ್ ಯಾರು : ಭೂ ಹಗರಣದ ಆರೋಪ ಎದುರಿಸುತ್ತಿರುವ ಸಚಿವರುಗಳಾದ ದಿನೇಶ ಗುಂಡೂರಾವ್, ಎಚ್.ಎಸ್. ಮಹದೇವ ಪ್ರಸಾದ್, ಖಮರುಲ್ ಇಸ್ಲಾಂ ಮತ್ತು ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ನಿಯಂತ್ರಿಸಲು ವಿಫಲರಾದ ಗೃಹ ಸಚಿವ ಕೆ.ಜೆ. ಜಾರ್ಜ್ ವಿರುದ್ಧ ಬಿಜೆಪಿ ಹೋರಾಟ ನಡೆಸುತ್ತಿದೆ. ನಾಲ್ವರು ರಾಜೀನಾಮೆ ನೀಡಬೇಕೆಂದು ನಾಯಕರು ಒತ್ತಾಯಿಸುತ್ತಿದ್ದಾರೆ.
#SeizeSuvarnaSoudha at Belagavi demanding sacking of tainted ministers,protection of women & farmers in state.. pic.twitter.com/wHaDhvK6kH
— BJP Karnataka (@bjpkarnataka) December 9, 2014 











Click it and Unblock the Notifications