ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಯಡಿಯೂರಪ್ಪ ನಿರ್ಲಕ್ಷಿಸಿದರೆ ಬಿಜೆಪಿ ದಿವಾಳಿ: ಕೆಜೆಪಿ ಅಧ್ಯಕ್ಷ ಎಚ್ಚರಿಕೆ

|
Google Oneindia Kannada News

ಬೆಳಗಾವಿ, ಅಕ್ಟೋಬರ್ 5: ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಕೇಂದ್ರ ಸರ್ಕಾರವು ಕಡೆಗಣಿಸಿದರೆ ರಾಜ್ಯದಲ್ಲಿ ಬಿಜೆಪಿ ದಿವಾಳಿಯಾಗುತ್ತದೆ ಎಂದು ಕೆಜೆಪಿ ಸಂಸ್ಥಾಪಕ ಅಧ್ಯಕ್ಷ ಪದ್ಮನಾಭ ಪ್ರಸನ್ನಕುಮಾರ ಹೇಳಿದರು.

15 ವರ್ಷದಲ್ಲಿ ರಾಜ್ಯಕ್ಕೆ ಯುಪಿಎ ಮತ್ತು ಎನ್‌ಡಿಎ ಸರ್ಕಾರಗಳು ಬಿಡುಗಡೆ ಮಾಡಿದ ಪರಿಹಾರವೆಷ್ಟು?15 ವರ್ಷದಲ್ಲಿ ರಾಜ್ಯಕ್ಕೆ ಯುಪಿಎ ಮತ್ತು ಎನ್‌ಡಿಎ ಸರ್ಕಾರಗಳು ಬಿಡುಗಡೆ ಮಾಡಿದ ಪರಿಹಾರವೆಷ್ಟು?

ನಗರದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 'ಕೇಂದ್ರ ಸರ್ಕಾರವು ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ಕಡೆಗಣಿಸುತ್ತಿದೆ. ಇದೇ ರೀತಿ ಕೇಂದ್ರದ ಧೋರಣೆ ಮುಂದುವರಿದರೆ ರಾಜ್ಯದಲ್ಲಿ ಬಿಜೆಪಿ ದಿವಾಳಿಯಾಗುವುದು ನಿಶ್ಚಿತ ಎಂದು ಎಚ್ಚರಿಕೆ ನೀಡಿದರು.

ಭೀಕರ ಮಳೆ ಮತ್ತು ಪ್ರವಾಹದಿಂದ ರೈತರು ಕಷ್ಟಪಟ್ಟು ಬೆಳೆದ ಬೆಳೆಗಳು ನಾಶವಾಗಿವೆ. ನೆರೆಯಿಂದಾಗಿ ಲಕ್ಷಾಂತರ ಮಂದಿ ಸಂತ್ರಸ್ತರಾಗಿದ್ದಾರೆ. ಮನೆಗಳನ್ನು ಕಳೆದುಕೊಂಡು ಬೀದಿಗೆ ಬಂದಿದ್ದಾರೆ. ಅವರನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನಿರ್ಲಕ್ಷ್ಯ ಮಾಡಬಾರದು ಎಂದು ಒತ್ತಾಯಿಸಿದರು.

Karnataka BJP Will Be Pauper If Centre Neglects Yediyurappa KJP President

ಸರ್ಕಾರದ ಬೊಕ್ಕಸ ಖಾಲಿಯಾಗಿದೆ ಎಂದು ಮುಖ್ಯಮಂತ್ರಿ ಅವರೇ ಹೇಳಿಕೆ ನೀಡಿರುವುದು ದುರ್ದೈವದ ಸಂಗತಿ. ಇಷ್ಟೆಲ್ಲ ಅನಾಹುತಗಳು ಸಂಭವಿಸಿದ್ದರೂ ಕೇಂದ್ರ ಸರ್ಕಾರ 1,200 ಕೋಟಿ ರೂ. ಪರಿಹಾರ ನೀಡಿರುವುದು ಮೂಗಿಗೆ ತುಪ್ಪ ಸವರಿದಂತಾಗಿದೆಯಷ್ಟೇ. ಈ ಹಣ ಯಾವುದಕ್ಕೂ ಸಾಲುವುದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ನೆರೆ ಸಂತ್ರಸ್ತರ ಕುರಿತು ಮಾತನಾಡುವಾಗ ಅವರು ಭಾವುಕರಾದರು.

ಪರಿಹಾರ ಸಾಕಾಗಲ್ಲ ಹೆಚ್ಚಿನ ಪರಿಹಾರ ಕೊಡಿ: ಸಿದ್ದರಾಮಯ್ಯ ಒತ್ತಾಯಪರಿಹಾರ ಸಾಕಾಗಲ್ಲ ಹೆಚ್ಚಿನ ಪರಿಹಾರ ಕೊಡಿ: ಸಿದ್ದರಾಮಯ್ಯ ಒತ್ತಾಯ

ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲು ಯಡಿಯೂರಪ್ಪ ಅವರ ಪರಿಶ್ರಮವೇ ಕಾರಣ. ಅವರನ್ನು ಬಿಜೆಪಿ ಹೈಕಮಾಂಡ್ ಕಡೆಗಣಿಸಬಾರದು. ಯಡಿಯೂರಪ್ಪ ಅವರ ಮಗ ಬಿವೈ ರಾಘವೇಂದ್ರ ನಮ್ಮ ಪಕ್ಷದೊಂದಿಗೆ ಸಂಪರ್ಕದಲ್ಲಿದ್ದಾರೆ. ಯಡಿಯೂರಪ್ಪ ಅವರು ಕೆಜೆಪಿಗೆ ಮರಳಿದರೂ ಸ್ವಾಗತಿಸುತ್ತೇನೆ ಎಂದು ಹೇಳಿದರು.

English summary
KJP founder president Padmanabha Prasannakumar on Saturday said in Belagavi, if centre and high command neglects CM BS Yediyurappa, BJP will collapse in Karnataka.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X