ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕರ್ನಾಟಕ ಬಜೆಟ್ 2021; ಬೆಳಗಾವಿ ಜಿಲ್ಲೆ ನಿರೀಕ್ಷೆಗಳು

By ಬೆಳಗಾವಿ ಪ್ರತಿನಿಧಿ
|
Google Oneindia Kannada News

ಬೆಂಗಳೂರು, ಮಾರ್ಚ್ 08: ಹಣಕಾಸು ಸಚಿವರು ಆಗಿರುವ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಇಂದು ಮಧ್ಯಾಹ್ನ 12 ಗಂಟೆಗೆ ಬಜೆಟ್ ಮಂಡನೆ ಮಾಡಲಿದ್ದಾರೆ. ಬಜೆಟ್‌ ಬಗ್ಗೆ ಬೆಳಗಾವಿ ಜಿಲ್ಲೆಯ ಜನರು ಸಾಕಷ್ಟು ನಿರೀಕ್ಷೆ ಹೊಂದಿದ್ದಾರೆ.

ಬೆಳಗಾವಿ ಜನರ ನಿರೀಕ್ಷೆಯಂತೆ ಈಗಾಗಲೇ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆ ಹಾಗೂ ಹೈಟೆಕ್ ಬಸ್ ನಿಲ್ದಾಣ ಕಾಮಗಾರಿ ತ್ವರಿತಗತಿಯಲ್ಲಿ ನಡೆಯುತ್ತಿವೆ. ಆದರೆ ಉತ್ತರ ಕರ್ನಾಟಕ ಭಾಗದಲ್ಲಿ ಅತಿವೇಗವಾಗಿ ಬೆಳೆಯುತ್ತಿರುವ ಜಿಲ್ಲೆಗಳ ಪೈಕಿ ಬೆಳಗಾವಿ ಕೂಡ ಒಂದು. ಆದ್ದರಿಂದ, ಅಪಾರ ನಿರೀಕ್ಷೆ ಇದೆ.

Karnataka Budget 2021 Live Updates; ಕರ್ನಾಟಕ ಬಜೆಟ್ 2021 ಕ್ಷಣ-ಕ್ಷಣದ ಮಾಹಿತಿ Karnataka Budget 2021 Live Updates; ಕರ್ನಾಟಕ ಬಜೆಟ್ 2021 ಕ್ಷಣ-ಕ್ಷಣದ ಮಾಹಿತಿ

ಬೆಳಗಾವಿಯಲ್ಲಿ ದಿನದಿಂದ ದಿನಕ್ಕೆ ಸಂಚಾರ ಸಮಸ್ಯೆ ಹೆಚ್ಚಾಗುತ್ತಲೇ ಇದೆ. ಈ ಸಮಸ್ಯೆ ನಿವಾರಣೆಗೆ ಬೆಳಗಾವಿ ನಗರಕ್ಕೆ ರಿಂಗ್ ರಸ್ತೆ ತುಂಬಾ ಅಗತ್ಯವಿದೆ. ಅಲ್ಲದೇ ಸ್ಥಳೀಯ ಶಾಸಕರಾದ ಅಭಯ ಪಾಟೀಲ ಮತ್ತು ಅನಿಲ್ ಬೆನಕೆ ರಿಂಗ್ ರಸ್ತೆ ಮಂಜೂರಾತಿ ಮಾಡಿ ಬಜೆಟ್ ನಲ್ಲಿ ಘೋಷಣೆ ಮಾಡುವಂತೆ ಮುಖ್ಯಂತ್ರಿಗಳನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದರು.

ಬಜೆಟ್ 2021; ಉತ್ತರ ಕನ್ನಡ ಜಿಲ್ಲೆಯ ನಿರೀಕ್ಷೆಗಳು ಬಜೆಟ್ 2021; ಉತ್ತರ ಕನ್ನಡ ಜಿಲ್ಲೆಯ ನಿರೀಕ್ಷೆಗಳು

Karnataka Budget 2021 Belagavi District Expectations

ಬೆಳಗಾವಿ ನಗರದ ನಾಲೆಗಳನ್ನು ಅಭಿವೃದ್ಧಿಪಡಿಸಬೇಕಿದೆ. ಕಳೆದ ಎರಡು ವರ್ಷಗಳಿಂದ ಸುರಿಯುತ್ತಿರುವ ಮಳೆಯಿಂದ ನಗರದಲ್ಲಿ ಪ್ರವಾಹದ ವಾತಾವರಣ ನಿರ್ಮಾಣವಾಗುತ್ತಿದೆ. ನಾಲೆಗಳ ಅಭಿವೃದ್ಧಿಗೆ ಜಿಲ್ಲಾಡಳಿತ ಈಗಾಗಲೇ ಪ್ರಸ್ತಾವನೆ ಸಲ್ಲಿಸಿದೆ. ಅನುದಾನ ಘೋಷಣೆ ಮಾಡುವ ನಿರೀಕ್ಷೆ ಇದೆ.

ಕರ್ನಾಟಕ ರಾಜ್ಯ ಬಜೆಟ್ 2021: ಆಮ್ ಆದ್ಮಿ ಪಕ್ಷ ಬೇಡಿಕೆಗಳೇನು? ಕರ್ನಾಟಕ ರಾಜ್ಯ ಬಜೆಟ್ 2021: ಆಮ್ ಆದ್ಮಿ ಪಕ್ಷ ಬೇಡಿಕೆಗಳೇನು?

ಪ್ರಮುಖ ನಿರೀಕ್ಷೆಗಳು

  • ಬೆಳಗಾವಿ ನಗರಕ್ಕೆ ರಿಂಗ್ ರಸ್ತೆ ನಿರ್ಮಿಸಲು ಅನುದಾನ ನೀಡಬೇಕು
  • ಮಹಾದಾಯಿ ಯೋಜನೆ ಜಾರಿಗೆ ಇರುವ ಕಾನೂನು ತೊಡಕು ನಿವಾರಿಸಬೇಕು, ಕಾಮಗಾರಿಗೆ ಅನುದಾನ ಘೋಷಿಸಬೇಕು
  • ಬೆಳಗಾವಿ ನಗರದ ನಾಲೆಗಳ ಅಭಿವೃದ್ಧಿಗೆ ವಿಶೇಷ ಅನುದಾನ ನೀಡಬೇಕು
  • ಸವದತ್ತಿ ಯಲ್ಲಮ್ಮ ದೇವಾಲಯವನ್ನು ಶಿರಡಿ ಸಾಯಿ ಮಂದಿರದ ಮಾದರಿಯಲ್ಲಿ ಅಭಿವೃದ್ಧಿ ಮಾಡಬೇಕು
  • ಬೆಳಗಾವಿಯಲ್ಲಿ ಗಣಿ ಮತ್ತು ಭೂ ವಿಜ್ಞಾನ ಸಂಶೋಧನಾ ಕೇಂದ್ರ ಅಥವಾ ವಿಶ್ವವಿದ್ಯಾಲಯ ನಿರ್ಮಾಣ ಮಾಡಬೇಕು
  • ಬೆಳಗಾವಿಯ ಸುವರ್ಣ ವಿಧಾನಸೌಧಕ್ಕೆ ರಾಜ್ಯ ಮಟ್ಟದ ಕಚೇರಿಗಳನ್ನು ಸ್ಥಳಾಂತರ ಮಾಡಬೇಕು
  • ಬೆಳಗಾವಿ ಜಿಲ್ಲೆಯನ್ನು ವಿಭಜನೆ ಮಾಡಬೇಕು
  • ವೀರರಾಣಿ ಕಿತ್ತೂರು ಚೆನ್ನಮ್ಮ ಸಮಾಧಿ ಸ್ಥಳವನ್ನು ಅಭಿವೃದ್ಧಿ ಪಡಿಸಲು ವಿಶೇಷ ಅನುದಾನ ನೀಡಬೇಕು
  • ಕಿತ್ತೂರು ರಾಣಿ ಚೆನ್ನಮ್ಮ ಹಾಗೂ ಸಂಗೊಳ್ಳಿ ರಾಯಣ್ಣ ಅಭಿವೃದ್ಧಿ ಪ್ರಾಧಿಕಾರಕ್ಕೆ ಬಾಕಿ ಅನುದಾನ ನೀಡಬೇಕು
English summary
Chief minister B. S. Yediyurappa to present 2021 budget on March 8. Here are list of expectations of the Belagavi district.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X