ಡಿಸೆಂಬರ್ 5ರ ಕರ್ನಾಟಕ ಬಂದ್‌ಗೆ ಕಾಂಗ್ರೆಸ್ ಪಕ್ಷದ ಬೆಂಬಲವಿಲ್ಲ

ಬೆಳಗಾವಿ, ನವೆಂಬರ್ 26: ಡಿಸೆಂಬರ್ 5ರ ಕರ್ನಾಟಕ ಬಂದ್‌ಗೆ ಕಾಂಗ್ರೆಸ್ ಪಕ್ಷದ ಬೆಂಬಲವಿಲ್ಲ ಎಂದು ಬೆಳಗಾವಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

ಮರಾಠಾ ಸಮುದಾಯ ಅಭಿವೃದ್ಧಿಗಾಗಿ ನಿಗಮ ಮಂಡಳಿ ಸ್ಥಾಪನೆಗೆ ನಮ್ಮ ವಿರೋಧವಿಲ್ಲ, ರಾಜಕೀಯ ಲಾಭಕ್ಕಾಗಿ ನಿಗಮ ಮಂಡಳಿ ಮಾಡಿದ್ದಕ್ಕಷ್ಟೇ ನಾವು ವಿರೋಧಿಸುತ್ತೇವೆ ಎಂದು ತಿಳಿಸಿದರು.

ರಾಜ್ಯ ಬಜೆಟ್‌ನಲ್ಲಿ ನಿಗಮ ಮಂಡಳಿ ಸ್ಥಾಪಿಸಬೇಕಿತ್ತು, ಈಗ ಉಪ ಚುನಾವಣೆ ವೇಳೆ ಮಾಡಿದ್ದೇಕೆ ಎಂದು ಪ್ರಶ್ನಿಸಿದ ಸತೀಶ್ ಜಾರಕಿಹೊಳಿ, ಬಜೆಟ್‌ನಲ್ಲಿ ಇದ್ದರೆ ಸ್ಪಷ್ಟವಾಗಿ ಇರುತ್ತದೆ. ಈಗ ಬೇರೆ ಯೋಜನೆಗಳಿಗೆ ಕೊಡಲು ಹಣವಿಲ್ಲ, ನಿಗಮಗಳಿಗೆ ಹಣ ಎಲ್ಲಿಂದ ಕೊಡ್ತೀರಾ ಎಂಬುದು ನಮ್ಮ‌ ಪ್ರಶ್ನೆ ಎಂದರು.

The Karnataka Bandh Of December 5 Has No Congress Support: Satish Jarkiholi

ಬಿಜೆಪಿಯಲ್ಲಿ ಯಾರು ಮಂತ್ರಿ ಆಗುತ್ತಾರೆ, ಯಾರು ಸಿಎಂ ಆಗುತ್ತಾರೆ ಅದು ನಮಗೆ ಸಂಬಂಧಿಸಿದ ವಿಷಯವಲ್ಲ. ನಮಗೆ ಪಕ್ಷ ಕಟ್ಟಬೇಕಿದೆ, ನಮ್ಮ ಪಕ್ಷ ಸಂಘಟನೆ ಬಗ್ಗೆ ಮಾತ್ರ ವಿಚಾರ ಮಾಡುತ್ತೇವೆ ಎಂದು ಉತ್ತರಿಸಿದರು.

ಬೆಳಗಾವಿ ಜಿಲ್ಲೆಗೆ ಅತಿ ಹೆಚ್ಚು ಸಚಿವ ಹಾಗೂ ನಿಗಮ ಮಂಡಳಿ ಸ್ಥಾನ ವಿಚಾರವಾಗಿ ಪ್ರತಿಕ್ರಿಯಿಸಿದ ಕೆಪಿಸಿಸಿ ಕಾರ್ಯಾಧ್ಯಕ್ಷ, ಜಿಲ್ಲೆಯ ಅಭಿವೃದ್ಧಿ ಬಗ್ಗೆ ಬೆಳಗಾವಿ ಬಿಜೆಪಿ ನಾಯಕರಿಗೆ ಇಚ್ಚಾಶಕ್ತಿ‌ ಇಲ್ಲವೆಂದರು

ಸತೀಶ್ ಜಾರಕಿಹೊಳಿ ರಾಜ್ಯದಲ್ಲಿ ಸಕ್ರಿಯವಾಗಿದ್ದು, ಅವರನ್ನು ರಾಷ್ಟ್ರ ರಾಜಕಾರಣಕ್ಕೆ ಕಳಿಸಲು ರಾಜ್ಯ ಕಾಂಗ್ರೆಸ್ ನಾಯಕರು ಪ್ಲ್ಯಾನ್ ಮಾಡಿದ್ದಾರಾ ಎಂಬ ಪ್ರಶ್ನೆಗೆ, ರಾಷ್ಟ್ರ ರಾಜಕಾರಣಕ್ಕೆ ಹೋದರೆ ಇನ್ನೂ ಹೆಚ್ಚಿನ ಕಂಟ್ರೋಲ್ ಬರುತ್ತದೆ ಎಂದು ಉತ್ತರ ನೀಡಿದರು.

ನೋಡೋಣ, ಅಂತಿಮವಾಗಿ ಹೈಕಮಾಂಡ್ ಏನು ತೀರ್ಮಾನ ಮಾಡುತ್ತದೆ ಎಂದು ಬೆಳಗಾವಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಯಮಕನಮರಡಿ ಕಾಂಗ್ರೆಸ್ ಶಾಸಕ ಸತೀಶ್ ಜಾರಕಿಹೊಳಿ ಹೇಳಿಕೆ ನೀಡಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+