BPL Card: ಬಿಪಿಎಲ್ ಪಡಿತರ ಚೀಟಿದಾರರಿಗೆ ₹1,39,27,221 ದಂಡ
BPL Card: ಪಡಿತರ ಚೀಟಿಯು ಪ್ರಮುಖ ದಾಖಲೆಗಳಲ್ಲಿ ಒಂದಾಗಿದೆ. ಇದರಲ್ಲಿ ಹಲವು ವಿಧಗಳಿದ್ದು, ಈ ಪೈಕಿ ಬಿಪಿಎಲ್ ಕಾರ್ಡ್‌ಗೆ ಹೆಚ್ಚು ಸರ್ಕಾರಿ ಸೌಲಭ್ಯಗಳು ಸಿಗಲಿವೆ. ಇನ್ನು ಇದೀಗ ರಾಜ್ಯ ಸರ್ಕಾರ ಬಿಪಿಎಲ್ ಕಾರ್ಡ್ ಸಂಬಂಧ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದ್ದು, ಇಂತಹ ಪಡಿತರ ಚೀಟಿದಾರರಿಗೆ ಒಂದಲ್ಲ.. ಎರಡಲ್ಲ ಬರೋಬ್ಬರಿ ಕೋಟಿ ಲೆಕ್ಕದಲ್ಲಿ ದಂಡ ವಿಧಿಸಿದೆ. ಹಾಗಾದ್ರೆ ಈ ನಿರ್ಧಾರ ಯಾಕೆ ಹಾಗೂ ಯಾರಿಗೆಲ್ಲ ದಂಡ ಎನ್ನುವ ಅಸಲಿ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ರಾಜ್ಯದಲ್ಲಿ ಸರ್ಕಾರವು ಒಂದೆಡೆ ಅನರ್ಹರ ಬಳಿ ಇರುವ ಪಡಿತರ ಚೀಟಿಯನ್ನು ರದ್ದುಪಡಿಸಿ ಅಂತಹರನ್ನು ಎಪಿಎಲ್‌ಗೆ ವರ್ಗಾವಣೆ ಮಾಡುವ ಕೆಲಸವನ್ನು ಮಾಡುತ್ತಿದೆ. ಮತ್ತೊಂದೆಡೆ ನಕಲಿ ದಾಖಲೆ ಸೃಷ್ಟಿಸಿ ಬಿಪಿಎಲ್ ಕಾರ್ಡ್‌ಗಳನ್ನು ಪಡೆದು ಬಡವರಿಗೆ ಸೇರಬೇಕಾದ ಪಡಿತರ ಕಿತ್ತುಕೊಂಡವರಿಗೆ ಮುಟ್ಟಿ ನೋಡಿಕೊಳ್ಳುವ ಹಾಗೆ ಭರ್ಜರಿ ದಂಡದ ಶಾಕ್ ಕೊಟ್ಟಿದೆ.

ಸಾಮಾನ್ಯವಾಗಿ ಬಿಪಿಎಲ್ ಕಾರ್ಡ್‌ಗಳನ್ನು ಬಡತನ ರೇಖೆಗಿಂತ ಕೆಳಗಿನವರಿಗೆ ನೀಡಲಾಗುತ್ತದೆ. ಆದರೆ, ರಾಜ್ಯದಲ್ಲಿ ಅನರ್ಹರು ಕೂಡ ಬಿಪಿಎಲ್ ಕಾರ್ಡ್‌ಗಳನ್ನು ಹೊಂದುವ ಮೂಲಕ ಪಡಿತರ ಪಡೆಯುತ್ತಿದ್ದರು. ಇಂತಹವರಿಗೆ ಬಿಪಿಎಲ್ ಕಾರ್ಡ್‌ಗಳನ್ನು ಸ್ವಇಚ್ಚೆಯಿಂದ ವಾಪಾಸ್ ನೀಡುವಂತೆ ಮೊದನಿಂದಲೂ ಸರ್ಕಾರ ಮನವಿ ಮಾಡಿಕೊಳ್ಳುತ್ತಲೇ ಬಂದಿತ್ತು. ಆದರೂ ಎಚ್ಚೆತ್ತುಕೊಳ್ಳದ ಕಾರಣ ಇದೀಗ ಭಾರೀ ದಂಡವನ್ನು ವಿಧಿಸಿದ ಘಟನೆ ರಾಜ್ಯದ ಜಿಲ್ಲೆಯೊಂದರಲ್ಲಿ ನಡೆದಿದೆ.
ದಂಡದ ಬರೆ: ಬಡ ಕುಟುಂಬಗಳಿಗೆ ಸೇರಬೇಕಾದ ಬಿಪಿಎಲ್ ಪಡಿತರ ಚೀಟಿ ಪಡೆದುಕೊಂಡಿದ್ದ 1,600ಕ್ಕೂ ಹೆಚ್ಚು ಸರ್ಕಾರಿ ನೌಕರರಿಗೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಒಂದಲ್ಲ.. ಎರಡಲ್ಲ.. ಬರೋಬ್ಬರಿ 1.39 ಕೋಟಿ ರೂಪಾಯಿ ದಂಡವನ್ನು ವಿಧಿಸುವ ಮೂಲಕ ಬಿಸಿ ಮುಟ್ಟಿಸುವ ಕೆಲಸವನ್ನು ಮಾಡಿದೆ.
ಬೆಳಗಾವಿ ಜಿಲ್ಲೆಯಲ್ಲಿ ಇದೀಗ 67,667 ಅಂತ್ಯೋದಯ, 10,72,692 ಬಿಪಿಎಲ್ ಹಾಗೂ 3,30,455 ಎಪಿಎಲ್ ರೇಷನ್ ಕಾರ್ಡ್‌ಗಳು ಚಾಲ್ತಿಯಲ್ಲಿ ಇದ್ದು, ಒಟ್ಟು 50,79,707 ಫಲಾನುಭವಿಗಳಿದ್ದಾರೆ. ಬಿಪಿಎಲ್ ಕಾರ್ಡ್ ಪಡೆದ ಅನರ್ಹರ ಪತ್ತೆಹಚ್ಚಿ 2022ರಲ್ಲಿ 1,316 ಸರ್ಕಾರಿ ನೌಕರರು ಪಡೆದುಕೊಂಡಿದ್ದ ಬಿಪಿಎಲ್ ಕಾರ್ಡ್‌ಗಳನ್ನು ಪತ್ತೆಹಚ್ಚಿ 1.22 ಕೋಟಿ ರೂಪಾಯಿ ವಿಧಿಸಲಾಗಿತ್ತು.
ಇನ್ನು 2024-25ನೇ ಸಾಲಿನಲ್ಲಿ ಮತ್ತೆ ಪರಿಶೀಲನೆ ಮುಂದುವರೆಸಿದ ವೇಳೆ ಬಿಪಿಎಲ್ ಪಡಿತರ ಚೀಟಿದ ಪಡೆದ 363 ನೌಕರರನ್ನು ಗುರುತಿಸಿದ್ದು, 17.10 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ. ಎಚ್‌ಆರ್‌ಎಂಎಸ್ ದತ್ತಾಂಶದ ಮೂಲಕ ಸಂಗ್ರಹ ಮಾಡಿದ ಮಾಹಿತಿಯ ಮೇರೆಗೆ ಇಲ್ಲಿವರೆಗೆ ಬಿಪಿಎಲ್ ರೇಷನ್ ಕಾರ್ಡ್ ಪಡೆದಿರುವ ಜಿಲ್ಲೆಯ ಒಟ್ಟು 1,679 ಸರ್ಕಾರಿ ನೌಕರರಿಗೆ ನೋಟಿಸ್ ಜಾರಿಗೊಳಿಸಿ ಅವರಿಗೆ ಬರೋಬ್ಬರಿ 1,39,27,221 ರೂಪಾಯಿ ದಂಡ ವಿಧಿಸಿ ಶಾಕ್ ನೀಡಲಾಗಿದೆ.
ಮೊದಲಿಗೆ ಅನರ್ಹರು ಯಾರದರೂ ಬಿಪಿಎಲ್ ಕಾರ್ಡ್ ಹೊಂದಿದ್ದರೆ, ಅವುಗಳನ್ನು ಹಿಂತಿರುಗಿಸಿ ಯಾವುದೇ ದಂಡ, ಕ್ರಮ ಕೈಗೊಳ್ಳುವುದಿಲ್ಲ ಎಂದು ಮನವಿ ಮಾಡಿತ್ತು. ಆದರೂ ಎಚ್ಚೆತ್ತುಕೊಳ್ಳದ ಕಾರಣ ಇದೀಗ ಕೊನೆ ಸರ್ಕಾರ ದಂಡಾಸ್ತ್ರದ ಮೊರೆ ಹೋಗಿದೆ. ಇದು ಹೇಗಿದೆ ಅಂದ್ರೆ ಜಾಣನಿಗೆ ಮಾತಿನ ಪಟ್ಟು, ದಡ್ಡನಿಗೆ ದೊಣ್ಣೆ ಪೆಟ್ಟು ಎನ್ನುವಂತಾಗಿದೆ.
ಇನ್ನು 2025-26ರಲ್ಲಿ ನಡೆಸಲಾದ ಪರಿಶೀಲನೆಯಲ್ಲಿ 1,407 ಅನರ್ಹ ಕುಟುಂಬಗಳು ಪಡೆದಿರುವ ಬಿಪಿಎಲ್ ಕಾರ್ಡ್‌ಗಳನ್ನು ಪತ್ತೆ ಹಚ್ಚಿ ಅವರಿಗೆ 7,55,177 ರೂಪಾಯಿ ದಂಡ ವಿಧಿಸಲಾಗಿದೆ. ಸ್ವಯಂ ಪ್ರೇರಿತರಾಗಿ 932 ಅನರ್ಹರು ತಾವು ಪಡೆದಿದ್ದ ಬಿಪಿಎಲ್ ಕಾರ್ಡ್‌ಗಳನ್ನು ವಾಪಾಸ್ ನೀಡಿದ್ದಾರೆ.
ಮತ್ತೊಂದೆಡೆ, ಆದಾಯ ತೆರಿಗೆ ಪಾವತಿ ಮಾಡುತ್ತಿದ್ದ 591 ಜನರ ಬಿಪಿಎಲ್ ಕಾರ್ಡ್‌ಗಳನ್ನು ರದ್ದು ಮಾಡಲಾಗಿದೆ. ಒಟ್ಟಿನಲ್ಲಿ ಜಿಲ್ಲೆಯಲ್ಲಿ 2022ರ ಏಪ್ರಿಲ್‌ನಿಂದ 2025ರ ಆಗಸ್ಟ್‌ವರೆಗೆ 48,153 ಅನರ್ಹರು ಪಡೆದಿದ್ದ ಬಿಪಿಎಲ್ ಕಾರ್ಡ್‌ಗಳನ್ನು ಪತ್ತೆಹಚ್ಚಿದ್ದು, ಇವರಿಗೆ 1.75 ಕೋಟಿ ರೂಪಾಯಿ ದಂಡ ವಿಧಿಸಲಾಗಿದೆ. ಇನ್ನು ಸರ್ಕಾರಿ ನೌಕರರು ಪಡೆದಿದ್ದ 1,679 ಬಿಪಿಎಲ್ ಕಾರ್ಡ್‌ಗಳನ್ನು ಎಪಿಎಲ್‌ಗೆ ವರ್ಗಾಹಿಸಲಾಗಿದೆ ಎಂದು ತಿಳಿದುಬಂದಿದೆ.
ಅಲ್ಲದೆ, 3 ಹೆಕ್ಟೇರ್‌ಗಿಂತ ಹೆಚ್ಚಿನ ಜಮೀನು ಹೊಂದಿರುವ 7,544 ಕುಟುಂಬ ಹಾಗೂ ಸ್ವಯಂ ಪ್ರೇರಿತರಾಗಿ ಮಾಡಿರುವ ಅನರ್ಹರ ಪಡಿತರ ಚೀಟಿಗಳನ್ನು ಸಹ ಎಪಿಎಲ್‌ಗೆ ವರ್ಗಾವಣೆ ಮಾಡಲಾಗಿದೆ. ಒಟ್ಟು ಜಿಲ್ಲೆಯಲ್ಲಿ 10,746 ಬಿಪಿಎಲ್ ರೇಷನ್ ಕಾರ್ಡ್‌ಗಳನ್ನು ಎಪಿಎಲ್ ಆಗಿ ಬದಲಾವಣೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಯಾರೆಲ್ಲಾ ಬಿಪಿಎಲ್ ಕಾರ್ಡ್‌ಗೆ ಅನರ್ಹರು?
* ಕುಟುಂಬದ ವಾರ್ಷಿಕ ಆದಾಯ 1.20 ಲಕ್ಷ ರೂಪಾಗಿಂತ ಹೆಚ್ಚಿರುವವರು
* ವೈಟ್ ಬೋರ್ಡ್‌ನ ನಾಲ್ಕು ಚಕ್ರದ ವಾಹನ ಉಳ್ಳವರು
* ಆದಾಯ ತೆರಿಗೆ ಪಾವತಿಸುವವರು
* 3 ಹೆಕ್ಟೇರ್‌ಗೂ ಅಧಿಕ ಭೂಮಿ ಹೊಂದಿರುವವರು
* ನಗರ ಪ್ರದೇಶಗಳಲ್ಲಿ1,000 ಚದರ ಅಡಿ ವಿಸ್ತೀರ್ಣದ ಸ್ವಂತ ಮನೆ ಹೊಂದಿರುವವರು
* ಸರ್ಕಾರಿ, ದೊಡ್ಡ ಕಂಪನಿಗಳಲ್ಲಿ ಉದ್ಯೋಗದಲ್ಲಿ ಇರುವವರು
ಅನರ್ಹರು ಬಿಪಿಎಲ್ ಕಾರ್ಡ್‌ಗಳನ್ನು ಹೊಂದಿದ್ದರಿಂದ ಬಡವರಿಗೆ ಸಿಗಬೇಕಾದ ಪಡಿತರ ಸರಿಯಾಗಿ ಸರಿಯಾದ ಸಮಯಕ್ಕೆ ಸಿಗುತ್ತಿರಲಿಲ್ಲ. ಆದ್ದರಿಂದ ಸರ್ಕಾರ ಈ ಮಹತ್ವದ ನಿರ್ಧಾರಕ್ಕೆ ಕೈಹಾಕುವ ಮೂಲಕ ಅರ್ಹ ಫಲಾನುಭವಿಗಳಿಗೆ ಅನುಕೂಲ ಮಾಡಿಕೊಡುವ ಕೆಲಸ ಮುಂದುವರೆಸಿದೆ. ಇನ್ನು ಮುಂದಿನ ದಿನಗಳಲ್ಲಿ ಇನ್ನೆಷ್ಟು ಅನರ್ಹರು ಬಳಿ ಇರುವ ಬಿಪಿಎಲ್ ಕಾರ್ಡ್‌ಗಳು ಹೊರಬರಲಿವೆ ಎಂದು ಕಾದುನೋಡಬೇಕಿದೆ.
-
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ












Click it and Unblock the Notifications