Kiccha Sudeep: ಬೆಳಗಾವಿ ಜಿಲ್ಲೆಯಲ್ಲಿ ಇಂದು ಸುದೀಪ್ ಪ್ರಚಾರ: ಎಲ್ಲೆಲ್ಲಿ ತಿಳಿಯಿರಿ
ಚಲನಚಿತ್ರ ನಟ ಕಿಚ್ಚ ಸುದೀಪ್ ಇಂದು ಕುಂದಾ ನಗರಿ ಬೆಳಗಾವಿ ಜಿಲ್ಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಭರ್ಜರಿ ಪ್ರಚಾರ ನಡೆಸಲಿದ್ದಾರೆ. ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರಚಾರದಲ್ಲಿ ಭಾಗಿಯಾಗಲಿದ್ದು, ಬಿಜೆಪಿ ಅಭ್ಯರ್ಥಿಗಳ ಪರ ಮತ ಯಾಚನೆ ಮಾಡಲಿದ್ದಾರೆ.
ಬೆಳಗಾವಿ ಜಿಲ್ಲೆಯ ಬೆಳಗಾವಿ ಉತ್ತರ, ಬೆಳಗಾವಿ ದಕ್ಷಿಣ, ಕಿತ್ತೂರು, ಬೆಳಗಾವಿ ಗ್ರಾಮೀಣ, ಯಮಕನಕರಡಿ ಕ್ಷೇತ್ರದಲ್ಲಿ ಕಿಚ್ಚ ಸುದೀಪ್ ರೋಡ್ ಶೋಗಳಲ್ಲಿ ಭಾಗವಹಿಸಲಿದ್ದಾರೆ. ಸೋಮವಾರ ಬೆಳಗ್ಗೆ 10.40ಕ್ಕೆ ಬೆಂಗಳೂರಿನಿಂದ ವಿಶೇಷ ವಿಮಾನದಲ್ಲಿ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ.

11.20ಕ್ಕೆ ಕಿತ್ತೂರು ವಿಧಾನಸಭಾ ಕ್ಷೇತ್ರದ ನೇಸರಗಿಯಲ್ಲಿ ರೋಡ್ ಶೋನಲ್ಲಿ ಭಾಗವಹಿಸಲಿದ್ದಾರೆ. ನಂತರ ನೇಸರಗಿಯಲ್ಲಿ 11.20 ರಿಂದ 12.30 ರವರೆಗೆ ರೋಡ್ ಶೋನಲ್ಲಿ ಭಾಗವಹಿಸಲಿದ್ದು, ಕಿತ್ತೂರು ಬಿಜೆಪಿ ಅಭ್ಯರ್ಥಿ ಮಹಾಂತೇಶ ದೊಡ್ಡ ಗೌಡರ ಪರವಾಗಿ ಮತಯಾಚನೆ ಮಾಡಲಿದ್ದಾರೆ.
ಮಧ್ಯಾಹ್ನ 1 ಗಂಟೆಗೆ ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಸುಳೇಭಾವಿಗೆ ತೆರಳಲಿಸದ್ದು, 1.50 ರವರೆಗೆ ಸುಳೇಭಾವಿ ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ನಾಗೇಶ್ ಮನ್ನೋಳಕರ್ ಪರ ಪ್ರಚಾರ ನಡೆಸಲಿದ್ದಾರೆ. ಸುಳೇಭಾವಿಯಲ್ಲಿ ಪ್ರಚಾರ ಮುಗಿಸಿದ ನಂತರ ಮಧ್ಯಾಹ್ನ 2.15ಕ್ಕೆ ಬೆಳಗಾವಿಯ ಖಾಸಗಿ ಹೋಟೆಲ್‌ಗೆ ತೆರಳಲಿದ್ದಾರೆ. ಅಲ್ಲೇ ಊಟ ಮಾಡಲಿದ್ದು, ಕೆಲ ಹೊತ್ತು ವಿಶ್ರಾಂತಿ ಪಡೆಯಲಿದ್ದಾರೆ.
ಸಂಜೆ 4 ಗಂಟೆಗೆ ಯಮನಕರಡಿ ವಿಧಾನಸಭಾ ಕ್ಷೇತ್ರದಲ್ಲಿ ಮತಪ್ರಚಾರ ನಡೆಸಲಿದ್ದಾರೆ. ಸಂಜೆ 4 ರಿಂದ 5 ಗಂಟೆಯವರೆಗೆ ಬಿಜೆಪಿ ಅಭ್ಯರ್ಥಿ ಬಸವರಾಜ ಹುಂದ್ರಿ ಪರವಾಗಿ ಮತಯಾಚನೆ ಮಾಡಲಿದ್ದಾರೆ. 5.30ಕ್ಕೆ ಬೆಳಗಾವಿ ನಗರಕ್ಕೆ ಆಗಮಿಸಲಿದ್ದು, 6.30ರವರೆಗೆ ಬೆಳಗಾವಿ ಉತ್ತರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ರವಿ ಪಾಟೀಲ್ ಪರವಾಗಿ ಚುನಾವಣಾ ಪ್ರಚಾರ ಮಾಡಲಿದ್ದಾರೆ.
ಸಂಜೆ 6.40ಕ್ಕೆ ಬೆಳಗಾವಿ ದಕ್ಷಿಣ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಅಭಯ್ ಪಾಟೀಲ್ ಪರ ಪ್ರಚಾರ ಮಾಡಲಿದ್ದಾರೆ. ಇಲ್ಲಿ ಪ್ರಚಾರ ಮುಕ್ತಾಯವಾದ ಬಳಿಕ ಬೆಳಗಾವಿಯ ಖಾಸಗಿ ಹೋಟೆಲ್‌ಗೆ ತೆರಳಲಿದ್ದು, ಸೋಮವಾರ ರಾತ್ರಿ ಕುಂದಾ ನಗರಿಯಲ್ಲೇ ವಾಸ್ತವ್ಯ ಹೂಡಲಿದ್ದಾರೆ.












Click it and Unblock the Notifications