ಬೆಳಗಾವಿ : ಪತಿ-ಪತ್ನಿ ಚುನಾವಣಾ ಕಣದಲ್ಲಿ, ಇಬ್ಬರೂ ಬಿಜೆಪಿ ಅಭ್ಯರ್ಥಿಗಳು!

Recommended Video

      Karnataka Elections 2018 : ಬೆಳಗಾವಿಯಲ್ಲಿ ಗಂಡ ಹೆಂಡತಿ ಒಂದೇ ಪಕ್ಷ ಬಿಜೆಪಿಯಿಂದ ಅಖಾಡಕ್ಕೆ| Oneindia Kannada

      ಬೆಳಗಾವಿ, ಏಪ್ರಿಲ್ 26 : ಕುಟುಂಬ ರಾಜಕಾರಣದ ಬಗ್ಗೆ ಭಾರೀ ಚರ್ಚೆ ನಡೆಯುತ್ತಿದೆ. ಅಪ್ಪ-ಮಕ್ಕಳು, ಸಹೋದರರು ಚುನಾವಣಾ ಕಣದಲ್ಲಿದ್ದಾರೆ. ಆದರೆ, ಕರ್ನಾಟಕ ಬಿಜೆಪಿ ಈ ಬಾರಿಯ ಚುನಾವಣೆಯಲ್ಲಿ ಗಂಡ-ಹೆಂಡತಿ ಇಬ್ಬರಿಗೆ ಟಿಕೆಟ್ ನೀಡಿದೆ.

      ಬೆಳಗಾವಿ ಜಿಲ್ಲೆಯಲ್ಲಿ ಪತಿ-ಪತ್ನಿ ಬಿಜೆಪಿಯಿಂದ ಕಣಕ್ಕಿಳಿದಿದ್ದಾರೆ. ನಿಪ್ಪಾಣಿ ಕ್ಷೇತ್ರದಿಂದ ಹಾಲಿ ಶಾಸಕಿ ಶಶಿಕಲಾ ಜೊಲ್ಲೆ ಅವರು ಅಭ್ಯರ್ಥಿ. ಅವರ ಪತಿ ಅಣ್ಣಾ ಸಾಹೇಬ್ ಜೊಲ್ಲೆ ಅವರು ಚಿಕ್ಕೋಡಿ-ಸದಲಗಾ ಕ್ಷೇತ್ರದಿಂದ ಅಭ್ಯರ್ಥಿಯಾಗಿದ್ದಾರೆ.

      ಶಶಿಕಲಾ ಜೊಲ್ಲೆ ಅವರಿಗೆ ಇದು ಮೂರನೇ ಚುನಾವಣೆ. ಅಣ್ಣಾ ಸಾಹೇಬ್ ಜೊಲ್ಲೆ ಅವರು ಮೊದಲ ಬಾರಿಗೆ ಕಾಂಗ್ರೆಸ್ ಭದ್ರಕೋಟೆಯಾಗಿರುವ ಕ್ಷೇತ್ರದಲ್ಲಿ ಕಣಕ್ಕಿಳಿದಿದ್ದಾರೆ. ಪತಿ-ಪತ್ನಿ ಇಬ್ಬರಿಗೂ ಒಟ್ಟಿಗೆ ಟಿಕೆಟ್ ನೀಡಿದ್ದು ಕರ್ನಾಟಕದ ಬಿಜೆಪಿ ಇತಿಹಾಸದಲ್ಲೇ ಪ್ರಥಮ.

      ಬೆಳಗಾವಿ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳ ಪರಿಚಯ

      ಶಿವಮೊಗ್ಗ ಜಿಲ್ಲೆಯ ಸೊರಬದಲ್ಲಿ ಕುಮಾರ್ ಬಂಗಾರಪ್ಪ ಮತ್ತು ಮಧು ಬಂಗಾರಪ್ಪ ಮುಖಾಮುಖಿಯಾಗಿದ್ದಾರೆ. ತುಮಕೂರಿನಲ್ಲಿಯೂ ಸಹೋದರರಿಬ್ಬರು ಎದುರಾಳಿಯಾಗಿದ್ದಾರೆ. ಆದರೆ, ಪತಿ ಮತ್ತು ಪತ್ನಿ ಒಂದೇ ಪಕ್ಷದಿಂದ ಚುನಾವಣೆಗೆ ಒಟ್ಟಿಗೆ ಸ್ಪರ್ಧಿಸುತ್ತಿರುವುದು ಇದೇ ಮೊದಲು....

      ಪತಿ, ಪತ್ನಿಗೆ ಟಿಕೆಟ್ ಕೊಟ್ಟ ಬಿಜೆಪಿ

      ಪತಿ, ಪತ್ನಿಗೆ ಟಿಕೆಟ್ ಕೊಟ್ಟ ಬಿಜೆಪಿ

      ಕರ್ನಾಟಕ ಬಿಜೆಪಿ ಮೊದಲ ಪಟ್ಟಿಯಲ್ಲಿ ನಿಪ್ಪಾಣಿ ಕ್ಷೇತ್ರದಿಂದ ಹಾಲಿ ಶಾಸಕಿ ಶಶಿಕಲಾ ಜೊಲ್ಲೆ ಅವರನ್ನು 2018ರ ಚುನಾವಣೆ ಅಭ್ಯರ್ಥಿ ಎಂದು ಘೋಷಣೆ ಮಾಡಿತ್ತು. ಅಣ್ಣಾ ಸಾಹೇಬ್ ಜೊಲ್ಲೆ ಅವರು ಚಿಕ್ಕೋಡಿ-ಸದಲಗಾ ಕ್ಷೇತ್ರದಿಂದ ಅಭ್ಯರ್ಥಿ ಎಂದು 2ನೇ ಪಟ್ಟಿಯಲ್ಲಿ ಘೋಷಣೆ ಮಾಡಲಾಗಿದೆ.

      ಶಶಿಕಲಾ ಜೊಲ್ಲೆ ಅವರಿಗೆ ಇದು ಮೂರನೇ ಚುನಾವಣೆ. ಆದರೆ, ಜೊಲ್ಲೆ ಉದ್ಯೋಗ ಸಮೂಹ ಹಾಗೂ ಸಂಘ ಸಂಸ್ಥೆಗಳ ಮೂಲಕ ಸಮಾಜ ಸೇವಾ ಕಾರ್ಯಗಳನ್ನು ಮಾಡುತ್ತಿರುವ ಅಣ್ಣಾ ಸಾಹೇಬ್ ಜೊಲ್ಲೆ ಅವರು ಸಹ ಬಿಜೆಪಿ ಟಿಕೆಟ್ ಪಡೆದಿದ್ದಾರೆ.

      ಶಶಿಕಲಾ ಜೊಲ್ಲೆ ಅವರ ಗೆಲುವು

      ಶಶಿಕಲಾ ಜೊಲ್ಲೆ ಅವರ ಗೆಲುವು

      ಶಶಿಕಲಾ ಜೊಲ್ಲೆ ಅವರು 2008ರಲ್ಲಿ ಮೊದಲ ಬಾರಿಗೆ ನಿಪ್ಪಾಣಿ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿದ್ದರು. 38,583 ಮತಗಳನ್ನು ಪಡೆದು ಕಾಂಗ್ರೆಸ್‌ನ ಪಾಂಡುರಂಗ ಪಾಟೀಲ್ ವಿರುದ್ಧ ಸೋಲು ಅನುಭವಿಸಿದರು.

      ನಂತರ ಕ್ಷೇತ್ರದಲ್ಲಿ ಪಕ್ಷವನ್ನು ಸಂಘಟಿಸುವ ಕೆಲಸ ಮಾಡಿದರು. 2013ರ ಚುನಾವಣೆಯಲ್ಲಿ 81,860 ಮತಗಳನ್ನು ಪಡೆದು ಪಾಂಡುರಂಗ ಪಾಟೀಲ್ ಅವರನ್ನು ಸೋಲಿಸಿ, ಮೊದಲ ಬಾರಿಗೆ ವಿಧಾನಸಭೆ ಪ್ರವೇಶಿಸಿದರು.

      ಅದೃಷ್ಟ ಪರೀಕ್ಷೆಗೆ ಮುಂದಾದ ಅಣ್ಣಾ ಸಾಹೇಬ್ ಜೊಲ್ಲೆ

      ಅದೃಷ್ಟ ಪರೀಕ್ಷೆಗೆ ಮುಂದಾದ ಅಣ್ಣಾ ಸಾಹೇಬ್ ಜೊಲ್ಲೆ

      ಜೊಲ್ಲೆ ಉದ್ಯೋಗ ಸಮೂಹ ಹಾಗೂ ಸಂಘ ಸಂಸ್ಥೆಗಳ ಮೂಲಕ ಸಮಾಜ ಸೇವಾ ಕಾರ್ಯಗಳನ್ನು ಮಾಡುತ್ತಿರುವ ಅಣ್ಣಾ ಸಾಹೇಬ್ ಜೊಲ್ಲೆ ಅವರು ಚಿಕ್ಕೋಡಿ-ಸದಲಗಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ.

      ಚಿಕ್ಕೋಡಿ-ಸದಲಗಾ ಕ್ಷೇತ್ರದ ಹಾಲಿ ಶಾಸಕರು ಗಣೇಶ್ ಹುಕ್ಕೇರಿ. 30 ವರ್ಷಗಳಿಂದ ಈ ಕ್ಷೇತ್ರ ಕಾಂಗ್ರೆಸ್ ಪಕ್ಷದ ಭದ್ರಕೋಟೆ. ಕಾಂಗ್ರೆಸ್ ಭದ್ರಕೋಟೆಯಲ್ಲಿ ಗೆಲುವು ಸಾಧಿಸಲು ಬಿಜೆಪಿ ಅಣ್ಣಾ ಸಾಹೇಬ್ ಜೊಲ್ಲೆ ಅವರನ್ನು ಕಣಕ್ಕಿಳಿಸಿದೆ.

      ಎಲ್ಲಿ, ಯಾರು ಅಭ್ಯರ್ಥಿಗಳು?

      ಎಲ್ಲಿ, ಯಾರು ಅಭ್ಯರ್ಥಿಗಳು?

      ನಿಪ್ಪಾಣಿಯಲ್ಲಿ ಕಾಕಾಸಾಹೇಬ್ ಪಾಟೀಲ್ ಕಾಂಗ್ರೆಸ್ ಅಭ್ಯರ್ಥಿ. ಶಶಿಕಲಾ ಜೊಲ್ಲೆ ಅವರು ಬಿಜೆಪಿ ಅಭ್ಯರ್ಥಿ.

      ಚಿಕ್ಕೋಡಿ-ಸದಲಗಾ ಕ್ಷೇತ್ರದಲ್ಲಿ ಅಣ್ಣಾ ಸಾಹೇಬ್ ಜೊಲ್ಲೆ ಅವರು ಬಿಜೆಪಿಯಿಂದ, ಗಣೇಶ್ ಹುಕ್ಕೇರಿ ಅವರು ಕಾಂಗ್ರೆಸ್‌ನಿಂದ ಕಣಕ್ಕಿಳಿದಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+