'ರಾಹುಕಾಲದಲ್ಲಿ ನಾಮಪತ್ರ ಸಲ್ಲಿಸುವೆ, ಗೆಲ್ಲುವುದು ಖಚಿತ'

ಬೆಳಗಾವಿ, ಏಪ್ರಿಲ್ 18 : ಚುನಾವಣೆ ಹತ್ತಿರವಾಗುತ್ತಿದೆ. ವಿವಿಧ ಪಕ್ಷದ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಲು ಸರಿಯಾದ ಸಮಯ ಯಾವುದು? ಎಂದು ಜ್ಯೋತಿಷಿಗಳ ಬಳಿ ಕೇಳುತ್ತಿದ್ದಾರೆ. ಆದರೆ, ಬೆಳಗಾವಿಯ ಕಾಂಗ್ರೆಸ್ ನಾಯಕರೊಬ್ಬರು ರಾಹುಕಾಲದಲ್ಲಿ ನಾಮಪತ್ರ ಸಲ್ಲಿಸುವುದಾಗಿ ಘೋಷಣೆ ಮಾಡಿದ್ದಾರೆ.

ಬೆಳಗಾವಿಯಲ್ಲಿ ಮಾತನಾಡಿದ ಮಾಜಿ ಸಚಿವ ಸತೀಶ್‌ ಜಾರಕಿಹೊಳಿ ಅವರು, 'ಎಲ್ಲರೂ ಮೂಹರ್ತ ನೋಡಿ ನಾಮಪತ್ರ ಸಲ್ಲಿಸುತ್ತಾರೆ. ನಾನು ರಾಹುಕಾಲದಲ್ಲಿ ನಾಮಪತ್ರ ಸಲ್ಲಿಸುವೆ. ಈ ಬಾರಿ ಹೆಚ್ಚಿನ ಮತಗಳ ಅಂತರದಲ್ಲಿ ಗೆದ್ದು ಬರುತ್ತೇನೆ' ಎಂದರು.

ಅಭ್ಯರ್ಥಿಗಳ ಪಟ್ಟಿ : ಕಾಂಗ್ರೆಸ್ | ಬಿಜೆಪಿ | ಜೆಡಿಎಸ್

'ನಾಮಪತ್ರ ಸಲ್ಲಿಕೆ ಮಾಡಲು ಮಾತ್ರ ಯಮಕನಮರಡಿ ಮತ ಕ್ಷೇತ್ರಕ್ಕೆ ಹೋಗುವೆ. ಆ ಬಳಿಕ ಯಮಕನಮರಡಿ ಕ್ಷೇತ್ರದಲ್ಲಿ ನಾನು ಪ್ರಚಾರ ಮಾಡುವುದಿಲ್ಲ. ಆದರೂ ಹೆಚ್ಚು ಮತಗಳ ಅಂತರದಿಂದ ಗೆದ್ದು ಬರುತ್ತೇನೆ' ಎಂದು ವಿಶ್ವಾಸ ವ್ಯಕ್ತಪಡಿಸಿದರು.

Karnataka elections : I will file nomination on Rahu Kala says Satish Jarkiholi

ಈಗಾಗಲೇ ಮಾನವ ಬಂಧುತ್ವ ವೇದಿಕೆಯನ್ನು ಸ್ಥಾಪನೆ ಮಾಡಿರುವ ಸತೀಶ್ ಜಾರಕಿಹೊಳಿ ಅವರು ಮೂಡನಂಬಿಕೆಗಳ ವಿರುದ್ಧ ಜನಜಾಗೃತಿಯನ್ನು ಮೂಡಿಸುತ್ತಿದ್ದಾರೆ. ಅದಕ್ಕಾಗಿಯೇ ರಾಹುಕಾಲದಲ್ಲಿ ನಾಮಪತ್ರವನ್ನು ಸಲ್ಲಿಕೆ ಮಾಡುತ್ತಿದ್ದಾರೆ.

ಬಂಡಾಯ ಶಮನವಾಗಲಿದೆ : 'ಕಾಂಗ್ರೆಸ್ ಪಕ್ಷದಲ್ಲಿ ಉಂಟಾಗಿರುವ ಬಂಡಾಯವನ್ನು ಶಮನ ಮಾಡುತ್ತೇವೆ. ಕಿತ್ತೂರು ಕ್ಷೇತ್ರದಲ್ಲಿ ಹೊಸಬರಿಗೆ ಟಿಕೆಟ್ ನೀಡಬೇಕಾ?, ಬೇಡವಾ? ಎಂಬ ಗೊಂದಲವಿದೆ' ಎಂದು ಸತೀಶ್ ಜಾರಕಿಹೊಳಿ ಹೇಳಿದರು.

'ಶಾಸಕ ಡಿ.ಬಿ.ಇನಾಮದಾರ್ ಮತ್ತು ಬಾಬಾ ಸಾಹೇಬ್ ಪಾಟೀಲ್ ಇಬ್ಬರಿಗೂ ಟಿಕೆಟ್ ಅಂತಿಮವಾಗಿಲ್ಲ. ಶಾಸಕರ ಮಟ್ಟದಲ್ಲಿ ಇರುವ ಬಂಡಾಯವನ್ನು ಮುಖ್ಯಮಂತ್ರಿಗಳು ಶಮನ ಮಾಡುತ್ತಾರೆ' ಎಂದು ತಿಳಿಸಿದರು.

'ಬೆಳಗಾವಿ ಜಿಲ್ಲಾ ಮಟ್ಟದಲ್ಲಿ ಉಂಟಾಗಿರುವ ಭಿನ್ನಮತವನ್ನು ನಾವು ಬಗೆಹರಿಸುತ್ತೇವೆ. ರಾಜ್ಯದಲ್ಲಿ ಬಿಜೆಪಿ 70 ಕ್ಕಿಂತ ಹೆಚ್ಚು ಸ್ಥಾನಗಳಲ್ಲಿ ಜಯಗಳಿಸುವುದಿಲ್ಲ. ಮತ್ತೆ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ' ಎಂದು ಸತೀಶ್ ಜಾರಕಿಹೊಳಿ ವಿಶ್ವಾಸ ವ್ಯಕ್ತಪಡಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+