ಬೆಳಗಾವಿ ಬಿಜೆಪಿ ನಾಯಕರ ನಡುವೆ ಅಸಮಾಧಾನವಿರುವುದು ನಿಜ: ಬಾಲಚಂದ್ರ ಜಾರಕಿಹೊಳಿ ಹೇಳಿದ್ದೇನು?

ಬೆಂಗಳೂರು, ಮಾರ್ಚ್‌ 31: ಮೇ ತಿಂಗಳಲ್ಲಿ ಕರ್ನಾಟಕ ವಿಧಾನಸಭೆ ಚುನಾವಣೆಗೆ ( Karnataka Assembly Elections 2023 ) ಮಹೂರ್ತ ನಿಗದಿಯಾಗಿದೆ. ಮೇ 10 ರಂದು ನಡೆಯಲಿರುವ ಚುನಾವಣೆಗೆ ರಾಜಕೀಯ ಪಕ್ಷಗಳು ಭಾರೀ ಸಿದ್ದತೆ ನಡೆಸಿವೆ. ಈ ಬಾರಿಯೂ ಬಿಜೆಪಿ, ಜೆಡಿಎಸ್‌ ಹಾಗೂ ಕಾಂಗ್ರೆಸ್‌ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಎರಡು ರಾಷ್ಟ್ರೀಯ ಪಕ್ಷಗಳಲ್ಲಿ ಬಂಡಾಯ ಹೊಗೆ ಆಡುತ್ತಿದೆ. ಅದರಲ್ಲೂ ಆಡಳಿತಾರೂಢ ಬಿಜೆಪಿಯಲ್ಲಿ ಬಂಡಾಯ ಜೋರಾಗಿಯೇ ಇದೆ.

ಬೆಳಗಾವಿ ಜಿಲ್ಲೆಯ ಬಿಜೆಪಿಯು ಒಡೆದ ಮನೆಯಂತಾಗಿದೆ. ಚಿಕ್ಕೋಡಿ ಸಂಸದ ಅಣ್ಣಾಸಾಹೇಬ ಜೊಲ್ಲೆ, ಎಂಎಲ್‌ಸಿ ಲಕ್ಷ್ಮಣ ಸವದಿ, ರಾಜ್ಯಸಭೆ ಸದಸ್ಯ ಈರಣ್ಣ ಕಡಾಡಿ ಹಾಗೂ ಗೋಕಾಕ ಶಾಸಕ ರಮೇಶ ಜಾರಕಿಹೊಳಿ ನಡುವೆ ಅಸಮಾಧಾನಗಳಿರುವುದು ಸಾರ್ವಜನಿಕವಾಗಿಯೇ ಕಂಡುಬಂದಿದೆ.

Karnataka Elections: Shall resolve differences of opinion of BJP leaders: Balachandra Jarkiholi

ಈ ಕುರಿತು ಮಾತನಾಡಿರುವ ಕೆಎಂಎಫ್‌ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು, ಸಂಸದ ಅಣ್ಣಾಸಾಹೇಬ ಜೊಲ್ಲೆ, ಎಂಎಲ್‌ಸಿ ಲಕ್ಷ್ಮಣ ಸವದಿ ಹಾಗೂ ಗೋಕಾಕ ಶಾಸಕ ರಮೇಶ ಜಾರಕಿಹೊಳಿ ನಡುವೆ ಅಸಮಾಧಾನಗಳಿರುವುದು ನಿಜ. ಅವರ ಜತೆ ಚರ್ಚೆ ನಡೆಸಿ, ವಿಧಾನಸಭೆ ಚುನಾವಣೆಗೆ 40 ದಿನ ಬಾಕಿ ಇರುವಾಗ ಜಿಲ್ಲೆಯಲ್ಲಿ ಗರಿಷ್ಠ ಸ್ಥಾನಗಳನ್ನು ಗೆಲ್ಲುವ ನಿಟ್ಟಿನಲ್ಲಿ ಕೆಲಸ ಮಾಡುವುದಾಗಿ ಹೇಳಿದರು.

ಶನಿವಾರ ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯ ಕೋರ್ ಕಮಿಟಿ ಸಭೆ ನಡೆಯಲಿದ್ದು, ಸಭೆಯ ಕೊನೆಯಲ್ಲಿ ಪಕ್ಷದ ಮುಖಂಡರ ಜತೆ ಮಾತುಕತೆ ನಡೆಸಿ ಭಿನ್ನಾಭಿಪ್ರಾಯ ಬದಿಗಿಡುವಂತೆ ಮನವರಿಕೆ ಮಾಡಿಕೊಡಲಾಗುವುದು ಎಂದು ಜಾರಕಿಹೊಳಿ ಶುಕ್ರವಾರ ಸುದ್ದಿಗಾರರಿಗೆ ತಿಳಿಸಿದರು.

Karnataka Elections: Shall resolve differences of opinion of BJP leaders: Balachandra Jarkiholi

ನಾಯಕರ ನಡುವಿನ ಭಿನ್ನಾಭಿಪ್ರಾಯವು ವಿಧಾನಸಭಾ ಚುನಾವಣೆಯಲ್ಲಿ ಅಭ್ಯರ್ಥಿಗಳ ಭವಿಷ್ಯದ ಮೇಲೆ ಪರಿಣಾಮ ಬೀರುವುದನ್ನು ನಾವು ಬಯಸುವುದಿಲ್ಲ ಎಂದೂ ಜಾರಕಿಹೊಳಿ ಸ್ಪಷ್ಟಪಡಿಸಿದರು.

ಲಕ್ಷ್ಮಣ ಸವದಿ ಮತ್ತು ರಮೇಶ್ ಜಾರಕಿಹೊಳಿ ಅವರ ಅಭಿಪ್ರಾಯ, ಭಿನ್ನಾಭಿಪ್ರಾಯ ಮತ್ತು ಬಹಿರಂಗ ಹೇಳಿಕೆಗಳ ಬಗ್ಗೆ ಹೈಕಮಾಂಡ್ ಮಾತುಕತೆ ನಡೆಸಿದೆಯಂತೆ. ವಿಧಾನಸಭಾ ಚುನಾವಣೆಗೆ ಕಣದಲ್ಲಿರುವ ಅಭ್ಯರ್ಥಿಗಳನ್ನು ಹೈಕಮಾಂಡ್ ನಿರ್ಧರಿಸಲಿದ್ದು, ಜಿಲ್ಲೆಯಲ್ಲಿ ಗರಿಷ್ಠ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸುತ್ತೇವೆ ಎಂದರು.

ಆಯಾ ವಿಧಾನಸಭಾ ಕ್ಷೇತ್ರಗಳಲ್ಲಿ ಎಲ್ಲರೂ ತಮ್ಮದೇ ಆದ ಪ್ರಭಾವವನ್ನು ಹೊಂದಿದ್ದು, ಅವರನ್ನು ಸೋಲಿಸಲು ಪಕ್ಷದಿಂದ ಬೇರೆ ಯಾರೂ ಕೆಲಸ ಮಾಡಲು ಸಾಧ್ಯವಿಲ್ಲ. ಪಕ್ಷದಲ್ಲಿನ ಗುಂಪುಗಾರಿಕೆಯ ವರದಿಗಳು ವದಂತಿಗಳಾಗಿವೆ ಎಂದು ಬಾಲಚಂದ್ರ ಜಾರಕಿಹೊಳಿ ಹೇಳಿದರು.

ನಾಯಕರ ನಡುವಿನ ಪ್ರತಿಷ್ಠೆಯ ಸಮಸ್ಯೆಗಳಿಂದ ಪಕ್ಷ ಸೋಲಬಾರದು ಮತ್ತು ನಾವು ಅವುಗಳನ್ನು ಗಂಭೀರವಾಗಿ ಪರಿಹರಿಸುತ್ತೇವೆ ಎಂದು ಜಾರಕಿಹೊಳಿ ಹೇಳಿದರು.

2018 ರ ವಿಧಾನಸಭಾ ಚುನಾವಣೆಯಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಬಿಜೆಪಿ 10 ಸ್ಥಾನಗಳನ್ನು ಗೆದ್ದಿತ್ತು. ಆಪರೇಷನ್ ಕಮಲದ ನಂತರ 3 ಸ್ಥಾನಗಳನ್ನು ಬಿಜೆಪಿಗೆ ಸೇರಿಸಲಾಯಿತು. ನಾವು ಎಲ್ಲಾ 13 ಸ್ಥಾನಗಳನ್ನು ಉಳಿಸಿಕೊಳ್ಳಲು ಬಯಸುತ್ತೇವೆ ಮತ್ತು ಮೇ 10 ರಂದು ಮತದಾನ ನಡೆಯಲಿರುವ ಚುನಾವಣೆಯಲ್ಲಿ ಸೀಟುಗಳ ಸಂಖ್ಯೆಯನ್ನು ಹೆಚ್ಚಿಸಲು ಪ್ರಯತ್ನಿಸುತ್ತೇವೆ ಎಂಬುದಾಗಿ ಜಾರಕಿಹೊಳಿ ಹೇಳಿದರು.

ಬಿಜೆಪಿಯ ಹಿರಿಯ ನಾಯಕ ಬಿ ಎಸ್ ಯಡಿಯೂರಪ್ಪ ಅವರನ್ನು ಪಕ್ಷದಿಂದ ದೂರವಿಡದೆ ಪಕ್ಷದ ಸಂಸದೀಯ ಮಂಡಳಿಗೆ ಸೇರ್ಪಡೆಗೊಳಿಸಲಾಗಿದೆ. ಅವರ ಪುತ್ರ ವಿಜಯೇಂದ್ರ ಯಡಿಯೂರಪ್ಪನವರ ಉತ್ತರಾಧಿಕಾರಿಯಾಗಿದ್ದಾರೆ. ವಯೋಸಹಜ ಕಾರಣದಿಂದ ಮುಖ್ಯಮಂತ್ರಿ ಸ್ಥಾನ ತ್ಯಜಿಸಿರುವುದಾಗಿ ಮಾಜಿ ಮುಖ್ಯಮಂತ್ರಿಗಳೇ ಸ್ಪಷ್ಟಪಡಿಸಿದ್ದಾರೆ ಎಂದರು.

ರಾಜ್ಯದಲ್ಲಿ ಬಿಜೆಪಿ ಗೆದ್ದು ಅಧಿಕಾರ ಉಳಿಸಿಕೊಳ್ಳಲಿದೆ. ಕಾಂಗ್ರೆಸ್‌ನಿಂದ ಬಂದು ವಾಪಸಾಗುತ್ತಿರುವ ಶಾಸಕ ಎನ್‌ ವೈ ಗೋಪಾಲಕೃಷ್ಣ ಅವರನ್ನು ಹೊರತುಪಡಿಸಿ ಪಕ್ಷಕ್ಕೆ ಸೇರ್ಪಡೆಗೊಂಡ ಯಾವುದೇ ಶಾಸಕರು ರಾಜೀನಾಮೆ ನೀಡುವುದಿಲ್ಲ ಅಥವಾ ಬಿಜೆಪಿಯನ್ನು ತೊರೆಯುವುದಿಲ್ಲ ಎಂದು ಅವರು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+