ಮಳೆ ಕೊರತೆ ಹಿನ್ನೆಲೆ ಬೆಳಗಾವಿಯಲ್ಲಿ ಮೋಡ ಬಿತ್ತನೆಗೆ ಅನುಮೋದನೆ ನೀಡಿದ ಕರ್ನಾಟಕ ಸರ್ಕಾರ

ಬೆಂಗಳೂರು, ಸೆಪ್ಟೆಂಬರ್‌ 16: ಬೆಳಗಾವಿ ಜಿಲ್ಲೆಯಲ್ಲಿ ತೀವ್ರ ಮಳೆ ಕೊರತೆಯಿಂದಾಗಿ ಮೋಡ ಬಿತ್ತನೆಗೆ ಎರಡು ಖಾಸಗಿ ಕಂಪನಿಗಳ ಪ್ರಸ್ತಾವನೆಗೆ ಕರ್ನಾಟಕ ಸರ್ಕಾರ ಅನುಮೋದನೆ ನೀಡಿದೆ.

ಬೆಳಗಾವಿ ಜಿಲ್ಲೆಯ ಹಲವು ತಾಲೂಕುಗಳಲ್ಲಿ ಈಗಾಗಲೇ ಬರ ಘೋಷಣೆ ಮಾಡಲಾಗಿದೆ. ಎರಡು ಖಾಸಗಿ ಕಂಪನಿಗಳು- Kyathi Climate Modification Consultants (LLP) ಮತ್ತು Belgaum Sugars Private Limited ತಮ್ಮ ಸ್ವಂತ ವೆಚ್ಚದಲ್ಲಿ ಮೋಡ ಬಿತ್ತನೆಗೆ ಅನುಮತಿ ಕೋರಿ ಜಿಲ್ಲಾಡಳಿತವನ್ನು ಸಂಪರ್ಕಿಸಿದ್ದು, ಅದನ್ನು ಬೆಂಗಳೂರಿನ ಕಂದಾಯ ಇಲಾಖೆಗೆ ರವಾನಿಸಲಾಗಿದೆ.

government-approved-cloud-seeding

ಸೂಕ್ತ ಪರಿಶೀಲನೆ ಬಳಿಕ ಕಂದಾಯ ಇಲಾಖೆಯ ಜಂಟಿ ಕಾರ್ಯದರ್ಶಿ ಟಿ.ಸಿ.ಕಾಂತರಾಜ್ ಮೋಡ ಬಿತ್ತನೆಗೆ ಅನುಮತಿ ನೀಡಿದ್ದಾರೆ. ಈ ಪ್ರಸ್ತಾವನೆಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅನುಮೋದನೆ ನೀಡಿದ್ದಾರೆ ಎಂದು ಅನುಮತಿ ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಮೋಡ ಬಿತ್ತನೆ ನಡೆಸುವ ಮೊದಲು ಅರ್ಜಿದಾರರು ಕಾನೂನಿನ ಪ್ರಕಾರ ಅಗತ್ಯವಿರುವ ಎಲ್ಲಾ ಅನುಮತಿಗಳನ್ನು ತೆಗೆದುಕೊಳ್ಳಬೇಕೆಂದು ಪತ್ರವು ಕಡ್ಡಾಯವಾಗಿ ತಿಳಿಸಿದೆ. ಇದು ಸಂಪೂರ್ಣ ಮೋಡ ಬಿತ್ತನೆಯನ್ನು ಮೇಲ್ವಿಚಾರಣೆ ಮಾಡಲು ಮತ್ತು ಅಗತ್ಯವಿರುವಲ್ಲೆಲ್ಲಾ ಮಾರ್ಗದರ್ಶನ ನೀಡಲು ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಅವರಿಗೆ ತಿಳಿಸಲಾಗಿದೆ.

ಮೋಡ ಬಿತ್ತನೆಯ ನಿಖರವಾದ ದಿನಾಂಕವು ಇನ್ನೂ ಸ್ಪಷ್ಟವಾಗಿ ತಿಳಿದು ಬಂದಿಲ್ಲ. ಅಧಿಕಾರಿಗಳಿಂದ ಅಂತಿಮ ಅನುಮೋದನೆಯ ನಂತರ ಮುಂದಿನ ವಾರದಲ್ಲಿ ಇದನ್ನು ಮಾಡಲಾಗುವುದು ಎಂದು ನಿರೀಕ್ಷಿಸಲಾಗಿದೆ. ನಿರ್ದಿಷ್ಟ ಪ್ರದೇಶದಲ್ಲಿ ಮಳೆಯಾಗಲು ಬಿತ್ತನೆ ಮಾಡಬಹುದು. ಸೆಪ್ಟೆಂಬರ್‌ 4ರಂದು ಮಳೆ ಕೊರತೆಯಿಂದ ರಾಣೆಬೆನ್ನೂರು ಶಾಸಕ ತಮ್ಮ ಕ್ಷೇತ್ರದಲ್ಲಿ ಇದೇ ಕಸರತ್ತು ನಡೆಸಿದ್ದರು.

ಬೆಳೆ ನಷ್ಟದ ಸಮೀಕ್ಷೆಯನ್ನು ನಡೆಸಿದ ನಂತರ, ಕರ್ನಾಟಕ ಸರ್ಕಾರವು ಸೆಪ್ಟೆಂಬರ್ 13 ರಂದು 161 ತಾಲ್ಲೂಕುಗಳಲ್ಲಿ ತೀವ್ರ ಬರ ಮತ್ತು 34 ತಾಲ್ಲೂಕುಗಳಲ್ಲಿ ಮಧ್ಯಮ ಬರವನ್ನು ಘೋಷಿಸಿತು. ಪರಿಹಾರ ಕೋರಿ ಕೇಂದ್ರಕ್ಕೆ ವರದಿ ಕಳುಹಿಸಲು ಸರ್ಕಾರ ಸಿದ್ಧತೆ ನಡೆಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪ್ರಕಾರ ಮಳೆಯ ವಿಷಯದಲ್ಲಿ ರಾಜ್ಯದ ಪಾಲಿಗೆ ಆಗಸ್ಟ್ ತಿಂಗಳು ಫಲಪ್ರದವಾಗಿರಲಿಲ್ಲ. ರಾಜ್ಯದಲ್ಲಿ ಶೇ 73ರಷ್ಟು ಮಳೆ ಕೊರತೆ ಉಂಟಾಗಿದೆ ಎನ್ನಲಾಗಿದೆ.

ಸರ್ಕಾರ ಸಂಪುಟ ಉಪ ಸಮಿತಿಯ ಶಿಫಾರಸುಗಳನ್ನು ಆಧರಿಸಿ, ಕರ್ನಾಟಕ ಸರ್ಕಾರವು ಗುರುವಾರ ರಾಜ್ಯದಲ್ಲಿ 161 ತಾಲ್ಲೂಕುಗಳನ್ನು ತೀವ್ರ ಬರಪೀಡಿತ ಮತ್ತು 34 ಮಧ್ಯಮ ಬರಪೀಡಿತ ತಾಲ್ಲೂಕುಗಳೆಂದು ಘೋಷಿಸಿದೆ. ಎಲ್ಲಾ ಜಿಲ್ಲಾಧಿಕಾರಿಗಳಿಗೆ ಆಯಾ ಜಿಲ್ಲೆಗಳಲ್ಲಿ ಬರ ನಿರ್ವಹಣೆಯನ್ನು ಆರಂಭಿಸುವಂತೆ ಸರ್ಕಾರ ಸೂಚಿಸಿದೆ.

ರಾಜ್ಯದ 195 ತಾಲೂಕುಗಳಲ್ಲಿ ಬೆಳೆ ನಷ್ಟ ಸಮೀಕ್ಷೆ ನಡೆಸುವಂತೆ ಸರಕಾರ ಆದೇಶ ನೀಡಿತ್ತು. ಸಂಪುಟ ಉಪಸಮಿತಿಗೆ ಸಲ್ಲಿಸಿದ ವರದಿ ಆಧರಿಸಿ ಸರ್ಕಾರ 161 ತಾಲ್ಲೂಕುಗಳಲ್ಲಿ ಬರ ಘೋಷಣೆ ಮಾಡಿದೆ. ರಾಜ್ಯದಲ್ಲಿ ಜೂನ್‌ನಲ್ಲಿ ಶೇ 56ರಷ್ಟು ಕಡಿಮೆ ಮಳೆಯಾಗಿದ್ದು, ಜುಲೈನಲ್ಲಿ ಶೇ 29ರಷ್ಟು ಹೆಚ್ಚು ಮಳೆಯಾಗಿದೆ, ಆದರೆ ಆಗಸ್ಟ್‌ನಲ್ಲಿ ರಾಜ್ಯವು ಶೇ 73 ರಷ್ಟು ತೀವ್ರ ಮಳೆ ಕೊರತೆಯನ್ನು ಎದುರಿಸಿದೆ ಎಂದು ಸರ್ಕಾರ ತನ್ನ ಅಧಿಸೂಚನೆಯಲ್ಲಿ ತಿಳಿಸಿದೆ. ಕಳೆದ 125 ವರ್ಷಗಳಲ್ಲಿ ಸಾಕ್ಷಿಯಾಗಿಲ್ಲ.

ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ಮೇಲ್ವಿಚಾರಣಾ ಕೇಂದ್ರದ (KSNDMC) ಪ್ರಕಾರ, ಜೂನ್ 1-ಆಗಸ್ಟ್ 19 ರ ನಡುವೆ ರಾಜ್ಯದಲ್ಲಿ 23 ಪ್ರತಿಶತ ಕಡಿಮೆ ಮಳೆಯಾಗಿದೆ. ಈ ಅವಧಿಯಲ್ಲಿ ರಾಜ್ಯದಲ್ಲಿ ಸರಾಸರಿ 635 ಮಿಮೀ ಮಳೆಯ ಬದಲಿಗೆ 487 ಮಿಮೀ ಮಳೆಯಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+