ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಜಾಗತಿಕ ಬಂಡವಾಳ ಹೂಡಿಕೆ ಸಮಾವೇಶಕ್ಕೆ ಸರ್ಕಾರ ₹75 ಕೋಟಿ ರೂಪಾಯಿ ವ್ಯಯಿಸಿದೆ: ಸಚಿವ ಮುರುಗೇಶ್ ನಿರಾಣಿ

|
Google Oneindia Kannada News

ಬೆಳಗಾವಿ, ಡಿಸೆಂಬರ್‌ 21: ಇತ್ತೀಚಿಗೆ ಬೆಂಗಳೂರಿನಲ್ಲಿ ನಡೆದ ಜಾಗತಿಕ ಬಂಡವಾಳ ಹೂಡಿಕೆ ಸಮಾವೇಶಕ್ಕೆ ರಾಜ್ಯ ಸರ್ಕಾರ 75 ಕೋಟಿ ರೂಪಾಯಿ ವ್ಯಯಿಸಿದೆ ಎಂದು ಬೃಹತ್ ಮತ್ತು ಮಧ್ಯಮ ಪ್ರಮಾಣದ ಕೈಗಾರಿಕೆಗಳ ಸಚಿವ ಮುರುಗೇಶ್ ನಿರಾಣಿ ತಿಳಿಸಿದ್ದಾರೆ.

ಮಂಗಳವಾರ ಸದನಲ್ಲಿ ಕಾಂಗ್ರೆಸ್‌ ಎಂಎಲ್‌ಸಿಗಳ ಪ್ರಶ್ನಗೆ ಉತ್ತರಿಸಿದ ಅವರು, 'ಇನ್ವೆಸ್ಟ್ ಕರ್ನಾಟಕ-2022' ಜಾಗತಿಕ ಹೂಡಿಕೆದಾರರ ಸಮಾವೇಶದ ಮೂಲಕ 9.81 ಲಕ್ಷ ಕೋಟಿ ರೂಪಾಯಿ ಹೂಡಿಕೆಯನ್ನು ಸ್ವೀಕರಿಸಲಾಗಿದೆ. ಹೂಡಿಕೆದಾರರ ಸಮಾವೇಶ ಆಯೋಜನೆಗೆ 75 ಕೋಟಿ ರೂಪಾಯಿ ವ್ಯಯಿಸಲಾಗಿದೆ ಎಂದು ಹೇಳಿದರು.

ರಾಜ್ಯಗಳ ಪುನರ್ವಿಂಗಡಣಾ ಕಾಯ್ದೆ; ಭಾಷಾವಾರು ಪ್ರಾಂತಗಳ ರಚನೆಯೇ ಅಂತಿಮ: ಬಸವರಾಜ ಬೊಮ್ಮಾಯಿರಾಜ್ಯಗಳ ಪುನರ್ವಿಂಗಡಣಾ ಕಾಯ್ದೆ; ಭಾಷಾವಾರು ಪ್ರಾಂತಗಳ ರಚನೆಯೇ ಅಂತಿಮ: ಬಸವರಾಜ ಬೊಮ್ಮಾಯಿ

ನವೆಂಬರ್ 2 ರಿಂದ 4 ರವರೆಗೆ ಮೂರು ದಿನಗಳ ಕಾಲ ನಡೆದ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ 9,81, 784 ಕೋಟಿ ರೂಪಾಯಿ ಬಂಡವಾಳ ಹೂಡಿಕೆ ಬಗ್ಗೆ ವಿವಿಧ ಯೋಜನೆಗಳ ಕುರಿತು ಒಪ್ಪಂದ ಮಾಡಿಕೊಳ್ಳಲಾಗಿದೆ. ಮೂರು ದಿನಗಳ ಕಾಲ ನಡೆದ ಈ ಸಮಾವೇಶದಲ್ಲಿ ಜಪಾನ್, ಫ್ರಾನ್ಸ್, ಇಂಗ್ಲೆಂಡ್, ಜರ್ಮನಿ, ಆಸ್ಟ್ರೇಲಿಯಾ, ದಕ್ಷಿಣ ಕೊರಿಯಾ ಹಾಗೂ ನೆದರ್ಲೆಂಡ್ ಸೇರಿದಂತೆ ಹಲವು ದೇಶಗಳ 15,000 ಪ್ರತಿನಿಧಿಗಳು ಹಾಗೂ ಸುಪ್ರಸಿದ್ಧ ಕಂಪನಿಯ ಸಿಇಓ ಹಾಗೂ ಅಧಿಕಾರಿಗಳು ಪಾಲ್ಗೊಂಡಿದ್ದರು. ಇನ್ವೆಸ್ಟ್ ಕರ್ನಾಟಕದಲ್ಲಿ ಪ್ರಮುಖವಾಗಿ 57 ಒಪ್ಪಂದಕ್ಕೆ ಸಹಿ ಹಾಕಲಾಗಿದೆ ಎಂದು ಸಚಿವರು ಸದನಕ್ಕೆ ತಿಳಿಸಿದ್ದಾರೆ.

Karnataka Government Spent Rs 75 Crore To Hold Global Investors Meet Said Murugesh Nirani

ಇನ್ನು ಸಕ್ಕರೆ ಕಾರ್ಖಾನೆಗಳ ಮಾಲೀಕರು ಕಬ್ಬು ತೂಕ ಮಾಡುವಾಗ ಮೋಸ ಮಾಡುತ್ತಿದ್ದಾರೆ ಎಂದು ಆರೋಪಿಸಿದ ವಿರೋಧ ಪಕ್ಷಗಳ ಸದಸ್ಯರಿಗೆ ಉತ್ತರಿಸಿದ ಸಚಿವ ಮುರುಗೇಶ್‌ ನಿರಾಣಿ, ಎಥೆನಾಲ್ ಹಾಗೂ ಸಕ್ಕರೆ ಉತ್ಪಾದನೆ ಬೆಲೆ, ಆದಾಯಲ್ಲಿ ಅಲ್ಪಸ್ವಲ್ಪ ಬದಲಾವಣೆ ಇದೆ. ಕಬ್ಬು ತೂಕದಲ್ಲಿ ಯಾವುದೇ ಮೋಸ ಆಗುತ್ತಿಲ್ಲ. ಏಕೆಂದರೆ ಬೆಳೆಗಾರರು ಖಾಸಗಿಯಾಗಿಯೂ ತೂಕ ಮಾಡಿಸುತ್ತಾರೆ. ಹಾಗಾಗಿ, ಟನ್ ಗಟ್ಟಲೆ ಮೋಸ ಆಗುವುದಿಲ್ಲ ಎಂದು ಸದನಕ್ಕೆ ತಿಳಿಸಿದರು.

ಈಶ್ವರಪ್ಪ ಮತ್ತು ರಮೇಶ್ ಜಾರಕಿಹೊಳಿಗೆ ಸಚಿವ ಸ್ಥಾನ ಸಿಗಬೇಕು: ಮುರುಗೇಶ್ ನಿರಾಣಿಈಶ್ವರಪ್ಪ ಮತ್ತು ರಮೇಶ್ ಜಾರಕಿಹೊಳಿಗೆ ಸಚಿವ ಸ್ಥಾನ ಸಿಗಬೇಕು: ಮುರುಗೇಶ್ ನಿರಾಣಿ

ಯುವಕರು ಸ್ವಯಂ ಉದ್ಯೋಗದಾತರಾಗಲು ನಡೆಸುತ್ತಿರುವ 'ಉದ್ಯಮಿಯಾಗ-ಉದ್ಯೋಗ ನೀಡು' ವಿಶೇಷ ಕಾರ್ಯಕ್ರಮವು ಮುಂದುವರೆಯಲಿದೆ. ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳಿಗೆ ಇನ್ನೂ ಹೆಚ್ಚಿನ ತರಬೇತಿ, ಮಾರ್ಗದರ್ಶನ ನೀಡಲಾಗುತ್ತದೆ. ಅದಕ್ಕಾಗಿ ಪ್ರತಿ ಜಿಲ್ಲೆಯ 3-4 ಕೇಂದ್ರಗಳಲ್ಲಿ ಒಂದು ದಿನದ ಕಾರ್ಯಕ್ರಮ ಆಯೋಜಿಸಲಾಗುತ್ತದೆ ಎಂದರು.

Karnataka Government Spent Rs 75 Crore To Hold Global Investors Meet Said Murugesh Nirani

ವಿದ್ಯಾರ್ಥಿಗಳು ಉದ್ಯೋಗ ಹುಡುಕುವ ಬದಲು ಉದ್ಯಮ ಸ್ಥಾಪಿಸಿ ಉದ್ಯೋಗ ಕೊಡುವಂತಾಗಬೇಕು ಎನ್ನುವ ಉದ್ದೇಶದಿಂದ ಕಾರ್ಯಾಗಾರವನ್ನು ನಡೆಸಿ, ಅವಕಾಶಗಳ ಬಗ್ಗೆ ಮತ್ತು ಸರ್ಕಾರದಿಂದ ದೊರೆಯುವ ಸೌಲಭ್ಯಗಳ ಕುರಿತು ತಿಳಿಸಲಾಗುತ್ತಿದೆ. ಇದರಲ್ಲಿ 50 ಸಾವಿರ ಮಂದಿ ಭಾಗಿಯಾಗುವ ನಿರೀಕ್ಷೆ ಇದೆ. ನಂತರ 40-50 ಗಂಟೆಯ ಆನ್‌ಲೈನ್‌ ಕಾರ್ಯಕ್ರಮಕ್ಕೆ ನೋಂದಣಿ ಮಾಡಿಸಲಾಗುತ್ತದೆ ಎಂದು ತಿಳಿಸಿದರು.h

English summary
Rs 75 crore was spent to organise the recently concluded three-day Global Investors Meet Invest Karnataka-2022 held in Bengaluru said Minister Murugesh Nirani.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X