ಗಡಿಯಲ್ಲಿ ಶಿವಸೇನೆ ಉದ್ಧಟತನ; ಉದ್ಧವ್ ಠಾಕ್ರೆ ಭಾವಚಿತ್ರಕ್ಕೆ ಚಪ್ಪಲಿ ಸೇವೆ
ಬೆಳಗಾವಿ, ಜನವರಿ 22: ಬೆಳಗಾವಿ ಗಡಿಯಲ್ಲಿ ಶಿವಸೇನೆ ಪುಂಡಾಟಿಕೆ ಖಂಡಿಸಿ ಕರವೇ ಯುವ ಸೇನೆ ಕಾರ್ಯಕರ್ತರು ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ಬೆಳಗಾವಿ ಮಹಾನಗರ ಪಾಲಿಕೆಯ ಮುಂದೆ ನೆಡಲಾಗಿರುವ ಕನ್ನಡ ಧ್ವಜ ಸ್ತಂಭ ತೆರವಿಗೆ ಆಗ್ರಹಿಸಿ ಗುರುವಾರ ಶಿವಸೇನೆ ಕಾರ್ಯಕರ್ತರು ಗಡಿಯಲ್ಲಿ ಪ್ರತಿಭಟನೆ ನಡೆಸಿದ್ದರು. ಕರ್ನಾಟಕ ಸರ್ಕಾರ ಹಾಗೂ ಬೆಳಗಾವಿ ಜಿಲ್ಲಾಡಳಿತ ವಿರುದ್ಧ ಘೋಷಣೆ ಕೂಗಿ ಉದ್ಧತಟನ ಪ್ರದರ್ಶನ ಮಾಡಿದ್ದರು.
ಶಿವಸೇನಾ ಕಾರ್ಯಕರ್ತರು ನಡೆಸಿದ ಪುಂಡಾಟದ ವಿರುದ್ಧ ಸಿಡಿದೆದ್ದಿರುವ ವಿವಿಧ ಕನ್ನಡಪರ ಸಂಘಟನೆಯ ಕಾರ್ಯಕರ್ತರು, ಶುಕ್ರವಾರ ಮಹಾರಾಷ್ಟ್ರದಲ್ಲಿ ಕನ್ನಡ ಧ್ವಜ ಹಾರಿಸಲು ಮುಂದಾಗಿದ್ದರು. ಈ ಎಲ್ಲರನ್ನೂ ನಗರದ ಚೆನ್ನಮ್ಮ ವೃತ್ತದಲ್ಲಿ ಪೊಲೀಸರು ವಶಕ್ಕೆ ಪಡೆದರು.

ವಿವಿಧ ಭಾಗಗಳಿಂದ ಬೆಳಗಾವಿ ನಗರಕ್ಕೆ ಆಗಮಿಸುತ್ತಿದ್ದ ಕನ್ನಡಪರ ಹೋರಾಟಗಾರರನ್ನು ಹೀರೇಬಾಗೇವಾಡಿಯ ಟೋಲ್ ನಲ್ಲಿ ತಡೆಯಲಾಗಿತ್ತು. ಪೊಲೀಸರು ತಡೆ ಹಿಡಿದಿದ್ದನ್ನು ಖಂಡಿಸಿ, ಹೆದ್ದಾರಿ ತಡೆಗೆ ಹೋರಾಟಗಾರರು ಮುಂದಾದರು. ಬಳಿಕ ಬೆಳಗಾವಿ ನಗರಕ್ಕೆ ಆಗಮಿಸಿದ ಕಾರ್ಯಕರ್ತರು ನಗರದ ಚೆನ್ನಮ್ಮ ವೃತ್ತದಲ್ಲಿ ಕೆಲ ಹೊತ್ತು ಪ್ರತಿಭಟನೆ ನಡೆಸಿದರು.
ಬೆಳಗಾವಿ ಗಡಿಯಲ್ಲಿ ಶಿವಸೇನೆ ಪುಂಡಾಟಿಕೆ ಖಂಡಿಸಿ ಕರವೇ ಯುವ ಸೇನೆ ಕಾರ್ಯಕರ್ತರು ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.#Belagavi #Karave #ShivSena @karave_KRV pic.twitter.com/mFBeRRvdTg
— oneindiakannada (@OneindiaKannada) January 22, 2021
ಶಿವಸೇನೆ ಹಾಗೂ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೆ ಉದ್ಧವ್ ಠಾಕ್ರೆ ಭಾವಚಿತ್ರಕ್ಕೆ ಚಪ್ಪಲಿ ಸೇವೆಗೈದರು. ಬಳಿಕ ಮಹಾರಾಷ್ಟ್ರಕ್ಕೆ ತೆರಳಲು ಮುಂದಾದ ಕನ್ನಡ ಹೋರಾಟಗಾರರನ್ನು ಪೊಲೀಸರು ಚೆನ್ನಮ್ಮ ವೃತ್ತದಲ್ಲಿ ವಶಕ್ಕೆ ಪಡೆದು, ನಂತರ ಬಿಡುಗಡೆ ಮಾಡಿದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications