Breaking; ಕೆಎಎಸ್ ಅಧಿಕಾರಿ ರೇಷ್ಮಾ ತಾಳಿಕೋಟೆ ಪತಿ ಆತ್ಮಹತ್ಯೆ
ಕೆಎಎಎಸ್ ಅಧಿಕಾರಿ ರೇಷ್ಮಾ ತಾಳಿಕೋಟೆ ಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನಲ್ಲಿದ್ದ ರೇಷ್ಮಾ ಬೆಳಗಾವಿಗೆ ತೆರಳುತ್ತಿದ್ದಾರೆ.
ಬೆಳಗಾವಿ, ಫೆಬ್ರವರಿ 13; ಕೆಎಎಸ್ ಅಧಿಕಾರಿ ರೇಷ್ಮಾ ತಾಳಿಕೋಟೆ ಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಳಗಾವಿ ಎಪಿಎಂಸಿ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.
ಕಂದಾಯ ನಿರೀಕ್ಷಕರಾಗಿ ಕೆಲಸ ಮಾಡುತ್ತಿದ್ದ 39 ವರ್ಷದ ಜಾಫರ್ ಫಿರಜಾದೆ ಬೆಳಗಾವಿಯ ಅಜಮ್ ನಗರದ ಮನೆಯಲ್ಲಿ ಸೋಮವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರೇಷ್ಮಾ ತಾಳಿಕೋಟೆ ಕೆಲಸದ ನಿಮಿತ್ತ ಬೆಂಗಳೂರಿಗೆ ತೆರಳಿದ್ದರು.
ಬೆಳಗಾವಿ ಎಪಿಎಂಸಿ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಮೃತ ದೇಹವನ್ನು ಬಿಮ್ಸ್ ಆಸ್ಪತ್ರೆ ಶವಾಗಾರಕ್ಕೆ ರವಾನೆ ಮಾಡಲಾಗಿದೆ. ರೇಷ್ಮಾ ತಾಳಿಕೋಟೆ ಹಿಡಕಲ್ ಡ್ಯಾಂ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ.

ಜಾಫರ್ ಫಿರಜಾದೆ ಸಂಗಮೇಶ್ ನಗರದಲ್ಲಿರುವ ಸರ್ಕಾರಿ ತರಬೇತಿ ಸಂಸ್ಥೆಯಲ್ಲಿ ಕಂದಾಯ ನಿರೀಕ್ಷಕರಾಗಿ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದರು. ಭಾನುವಾರ ರೇಷ್ಮಾ ತಾಳಿಕೋಟೆ ಕೆಲಸದ ನಿಮಿತ್ತ ಬೆಂಗಳೂರಿಗೆ ತೆರಳಿದ್ದರು.
ಖಾನಾಪುರ ತಾಲೂಕು ತಹಶೀಲ್ದಾರ್ ಆಗಿದ್ದ ರೇಷ್ಮಾ ತಾಳಿಕೋಟೆ ಕೆಲವು ದಿನಗಳ ಹಿಂದೆ ಹಿಡಕಲ್ ಡ್ಯಾಂ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ನೇಮಕಗೊಂಡಿದ್ದರು. ಹೆಚ್ಚಿನ ಮಾಹಿತಿಗಾಗಿ ಪೊಲೀಸರು ರೇಷ್ಮಾ ಅವರು ಬೆಳಗಾವಿಗೆ ಬರುವುದನ್ನು ಕಾಯುತ್ತಿದ್ದಾರೆ.
ಜಾಫರ್ ಫಿರಜಾದೆ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಬೆಳಗಾವಿ ಎಪಿಎಂಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆತ್ಮಹತ್ಯೆ ತಡೆ ಸಹಾಯವಾಣಿ; ನಿಮ್ಹಾನ್ಸ್, ರೋಟರಿ ಸಂಸ್ಥೆ ಹಾಗೂ ಮೆಡಿಕೊ ಪ್ಯಾಸ್ಟೊರಾಲ್ ಅಸೋಸಿಯೇಷನ್ ನೆರವಿನಿಂದ ಬೆಂಗಳೂರಿನಲ್ಲಿ ಆತ್ಮಹತ್ಯೆ ತಡೆಗಟ್ಟಲು, ಮಾನಸಿಕ ಖಿನ್ನತೆಯಿಂದ ಬಳಲುವವರಿಗಾಗಿ SAHAI ಸಹಾಯವಾಣಿ ತೆರೆಯಲಾಗಿದೆ. ಸಹಾಯವಾಣಿ ಸಂಖ್ಯೆ ಇಂತಿದೆ 080 - 25497777.












Click it and Unblock the Notifications