ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಳಗಾವಿ : ಖಡಕ್ ಗಲ್ಲಿಯಲ್ಲಿ ಕಲ್ಲು ತೂರಾಟ, ಪೊಲೀಸರಿಗೆ ಗಾಯ

By ಬೆಳಗಾವಿ ಪ್ರತಿನಿಧಿ
|
Google Oneindia Kannada News

ಬೆಳಗಾವಿ, ನವೆಂಬರ್ 16 : ಬೆಳಗಾವಿಯ ಖಡಕ್ ಗಲ್ಲಿಯಲ್ಲಿ ಮತ್ತೆ ಕಲ್ಲು ತೂರಾಟ ನಡೆದಿದೆ. ಹಲವು ಪೊಲೀಸರು ಘಟನೆಯಲ್ಲಿ ಗಾಯಗೊಂಡಿದ್ದು, ಪೊಲೀಸರ ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ.

ಬೆಳಗಾವಿ ಮಾರ್ಕೆಟ್ ಠಾಣಾ ವ್ಯಾಪ್ತಿಯ ಖಡಕ್ ಗಲ್ಲಿಯಲ್ಲಿ ಬುಧವಾರ ರಾತ್ರಿ 10.30ರ ಸುಮಾರಿಗೆ ಕಲ್ಲು ತೂರಾಟ ನಡೆದಿದೆ. ಒಬ್ಬರು ಡಿಸಿಪಿ, ಒಬ್ಬರು ಎಸಿ ಘಟನೆಯಲ್ಲಿ ಗಾಯಗೊಂಡಿದ್ದಾರೆ.

ಟಿಪ್ಪು ಜಯಂತಿ ಆಚರಣೆ ವಿವಾದ : ಬೆಳಗಾವಿಯಲ್ಲಿ ಕಲ್ಲು ತೂರಾಟಟಿಪ್ಪು ಜಯಂತಿ ಆಚರಣೆ ವಿವಾದ : ಬೆಳಗಾವಿಯಲ್ಲಿ ಕಲ್ಲು ತೂರಾಟ

Khadak Galli is tensed after stone pelting

2 ಪೊಲೀಸರ ಬೈಕ್‌ಗಳು ಸೇರಿ ಐದು ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ. ಕಲ್ಲು, ಇಟ್ಟಿಗೆ, ಗಾಜಿನ ಬಾಟಲಿಗಳನ್ನು ಎಸೆಯಲಾಗಿದೆ. ಸ್ಥಳದಲ್ಲಿ ಬಿಗುವಿನ ವಾತಾವರಣವಿದ್ದು, ಭದ್ರತೆಯನ್ನು ಹೆಚ್ಚಿಸಲಾಗಿದೆ.

ಪಟ್ಟು ಬಿಡದ ರಮೇಶ್ ಕುಮಾರ್ ಮತ್ತು ಬೆಳಗಾವಿ ಅಧಿವೇಶನದ 9 ಅಂಶಗಳುಪಟ್ಟು ಬಿಡದ ರಮೇಶ್ ಕುಮಾರ್ ಮತ್ತು ಬೆಳಗಾವಿ ಅಧಿವೇಶನದ 9 ಅಂಶಗಳು

ಯಾರು, ಏಕೆ ಕಲ್ಲು ತೂರಾಟ ನಡೆಸಿದ್ದಾರೆ? ಎಂಬ ಬಗ್ಗೆ ಮಾಹಿತಿ ಸಿಕ್ಕಿಲ್ಲ. ಮಾರ್ಕೆಟ್ ಠಾಣೆ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು ತನಿಖೆ ನಡೆಸುತ್ತಿದ್ದಾರೆ. ಕಲ್ಲು ತೂರಾಟ ನಡೆಸಿದ ಆರೋಪಿಗಳಿಗಾಗಿ ಹುಡುಕಾಟ ನಡೆಯುತ್ತಿದೆ.

ನವೆಂಬರ್ 4ರಂದು ಟಿಪ್ಪು ಜಯಂತಿ ಆಚರಣೆಗೆ ಅನುಮತಿ ನೀಡುವಂತೆ ಕೋರಿ ಮುಸ್ಲಿಂ ಸಮುದಾಯದ ಮುಖಂಡರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲು ಆಗಮಿಸಿದ್ದರು.

ಈ ಸಂದರ್ಭದಲ್ಲಿ ಶ್ರೀರಾಮ ಸೇನೆ ಮುಖಂಡ ರಮಾಕಾಂತ ಕೊಂಡುಸ್ಕರ ಪ್ರತಿಕೃತಿ ದಹಿಸಲು ಮುಂದಾಗಿದ್ದರು. ಆದರೆ, ಪೊಲೀಸರು ಇದನ್ನು ತಡೆದಿದ್ದರು. ಅಂದು ರಾತ್ರಿ ಸಹ ಖಡಕ್ ಗಲ್ಲಿಯಲ್ಲಿ ಕಲ್ಲು ತೂರಾಟ ನಡೆದಿತ್ತು.

English summary
Tension gripped in Belagavi Khadak Galli after stone pelting on Wednesday, November 15, 2017.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X