ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶಾಸಕಿ ಅಂಜಲಿ ನಿಂಬಾಳ್ಕರ್ ಬಿಜೆಪಿಗೆ, ಸಚಿವ ಸ್ಥಾನದ ಆಫರ್?

|
Google Oneindia Kannada News

ಬೆಳಗಾವಿ, ಜುಲೈ 07 : ಖಾನಾಪುರದ ಕಾಂಗ್ರೆಸ್ ಶಾಸಕಿ ಅಂಜಲಿ ನಿಂಬಾಳ್ಕರ್ ಅವರು ಬಿಜೆಪಿಗೆ ಸೇರಲಿದ್ದಾರೆ? ಎಂಬ ಸುದ್ದಿಗಳು ಹಬ್ಬಿವೆ. ಈಗಾಗಲೇ ಕಾಂಗ್ರೆಸ್‌ನ 9 ಶಾಸಕರು ರಾಜೀನಾಮೆ ನೀಡಿದ್ದು, ಮೈತ್ರಿ ಸರ್ಕಾರ ಅಲ್ಪ ಮತಕ್ಕೆ ಕುಸಿಯುವ ಭೀತಿ ಎದುರಾಗಿದೆ.

ಅಂಜಲಿ ನಿಂಬಾಳ್ಕರ್ ಅವರು ಬಿಜೆಪಿ ಸೇರಲಿದ್ದಾರೆ ಎಂಬ ಸುದ್ದಿಗಳು ಭಾನುವಾರ ದಟ್ಟವಾಗಿ ಹಬ್ಬಿವೆ. 9 ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡಿರುವ ಹಿನ್ನಲೆಯಲ್ಲಿ ಈ ಸುದ್ದಿ ಕುತೂಹಲಕ್ಕೆ ಕಾರಣವಾಗಿದೆ.

ಕಾಂಗ್ರೆಸ್‌ಗೆ ಕೈಕೊಡಲು ಮುಂದಾದರಾ ಶಾಸಕಿ ಅಂಜಲಿ ನಿಂಬಾಳ್ಕರ್?ಕಾಂಗ್ರೆಸ್‌ಗೆ ಕೈಕೊಡಲು ಮುಂದಾದರಾ ಶಾಸಕಿ ಅಂಜಲಿ ನಿಂಬಾಳ್ಕರ್?

ಅಂಬಲಿ ನಿಂಬಾಳ್ಕರ್ ಅವರು ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಅವರ ಪತ್ನಿ. ಬಿಜೆಪಿಗೆ ಅವರಿಗೆ ಸಚಿವ ಸ್ಥಾನದ ಆಫರ್ ನೀಡಿದೆ ಎಂದು ತಿಳಿದುಬಂದಿದೆ. ಒಂದು ವೇಳೆ ಅವರು ಬಿಜೆಪಿಗೆ ಸೇರುವುದಾದದರೆ ಸೋಮವಾರ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಇದೆ.

ಶಾಸಕ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ಮತ್ತೊಬ್ಬ ಶಾಸಕ!ಶಾಸಕ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ಮತ್ತೊಬ್ಬ ಶಾಸಕ!

Khanapur Congress MLA Anjali Nimbalkar may join BJP

ಡಾ.ಅಂಜಲಿ ನಿಂಬಾಳ್ಕರ್ ಅವರು 36,649 ಮತಗಳನ್ನು ಪಡೆದು ಮೊದಲ ಬಾರಿಗೆ ವಿಧಾನಸಭೆಗೆ ಆಯ್ಕೆಯಾಗಿದ್ದಾರೆ. ಈಗಾಗಲೇ ಬೆಳಗಾವಿ ಜಿಲ್ಲೆಯ ರಮೇಶ್ ಜಾರಕಿಹೊಳಿ, ಮಹೇಶ್ ಕುಮಟಳ್ಳಿ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಕಾಂಗ್ರೆಸ್‌-ಜೆಡಿಎಸ್ ಶಾಸಕರ ರಾಜೀನಾಮೆ : ಯಾರು, ಏನು ಹೇಳಿದರು?ಕಾಂಗ್ರೆಸ್‌-ಜೆಡಿಎಸ್ ಶಾಸಕರ ರಾಜೀನಾಮೆ : ಯಾರು, ಏನು ಹೇಳಿದರು?

ಬೆಂಗಳೂರಿನಲ್ಲಿ ಕಾಂಗ್ರೆಸ್ ನಾಯಕರು ಸರಣಿ ಸಭೆಗಳನ್ನು ನಡೆಸುತ್ತಿದ್ದು, ಸರ್ಕಾರ ಉಳಿಸಿಕೊಳ್ಳಲು ಪ್ರಯತ್ನ ನಡೆಸುತ್ತಿದ್ದಾರೆ. ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ಬೆಳಗ್ಗೆ 9.30ಕ್ಕೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ.

ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಅಮೆರಿಕದಿಂದ ದೆಹಲಿಗೆ ಆಗಮಿಸಿದ್ದಾರೆ. ವಿಶೇಷ ವಿಮಾನದಲ್ಲಿ ಅವರು ಸಂಜೆ 5.40ಕ್ಕೆ ಎಚ್‌ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಬಳಿಕ ಕಾಂಗ್ರೆಸ್ ಮತ್ತು ಜೆಡಿಎಸ್ ಮುಂದಿನ ತೀರ್ಮಾನವನ್ನು ಕೈಗೊಳ್ಳಲಿವೆ.

English summary
Khanapur Congress MLA Anjali Nimbalkar may join BJP. 9 Congress and 3 JD(S) MLA's resigned for their post.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X