ಪಾಂಡಿಚೇರಿ-ಮುಂಬೈ ಚಾಲುಕ್ಯ ಎಕ್ಸ್‌ಪ್ರೆಸ್ ರೈಲಿನಲ್ಲಿ ಟಿಕೆಟ್ ತೋರಿಸಿ ಎಂದಿದ್ದಕ್ಕೆ ಚಾಕು ಇರಿತ: ಓರ್ವ ಸಾವು, ಐವರಿಗೆ ಗಾಯ
ಬೆಳಗಾವಿ, ಮೇ, 16: ಟಿಕೆಟ್ ತೋರಿಸಿ ಎಂದು ಕೇಳಿದ್ದಕ್ಕೆ ಟಿಸಿ ಸೇರಿ ಐವರ ಮೇಲೆ ಮುಸುಕುಧಾರಿಯೊಬ್ಬರು ಚಾಕುವಿನಿಂದ ದಾಳಿ ನಡೆಸಿದ್ದು, ಈ ವೇಳೆ ಅಟೆಂಡರ್ ಸಾವನ್ನಪ್ಪಿದ ಘಟನೆ ಪಾಂಡಿಚೇರಿ-ಮುಂಬೈ ಚಾಲುಕ್ಯ ಎಕ್ಸ್‌ಪ್ರೆಸ್ ರೈಲಿನಲ್ಲಿ ನಡೆದಿದೆ.
ಚಾಲುಕ್ಯ ಎಕ್ಸ್‌ಪ್ರೆಸ್ ರೈಲಿನಲ್ಲಿ ಟಿಕೆಟ್ ಕೇಳಿದ್ದಕ್ಕೆ ಅಪರಿಚಿತ ಮುಸುಕುಧಾರಿಯೊಬ್ಬರು ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಬೆಳಗಾವಿಯ ಖಾನಾಪುರ ತಾಲೂಕಿನ ಲೋಂಡಾ ಬಳಿ ನಡೆದಿದೆ. ಇನ್ನು ಈ ವೇಳೆ ಓರ್ವ ಸಾವನ್ನಪ್ಪಿದ್ದು, ಐವರು ಗಂಭೀರ ಗಾಯಗೊಂಡಿದ್ದು, ಇವರನ್ನು ಚಿಕಿತ್ಸೆಗಾಗಿ ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಟ್ರೇನ್ ಅಟೆಂಡರ್ ದೇವ ಋಷಿ (23) ಘಟನೆಯಲ್ಲಿ ಮೃತಪಟ್ಟವರಾಗುದ್ದಾರೆ ಎನ್ನುವ ಮಾಹಿತಿ ತಿಳಿದುಬಂದಿದೆ. ಒಟ್ಟಿನಲ್ಲಿ ಹೇಳಬೇಕೆಂದರೆ ರೈಲ್ವೆ ನಿಯಮದ ಪ್ರಕಾರ ರೈಲಿನಲ್ಲಿ ಪ್ರಯಾಣ ಮಾಡುವುವಾಗ ಅದ್ಯಾರೇ ಇರಲಿ ಟಿಸಿ ಟಿಕೆಟ್ ಚೆಕ್ಕಿಂಗ್‌ಗೆ ಬಂದಾಗ ಟಿಕೆಟ್ ತೋರಿಸಬೇಕಾಗುತ್ತದೆ. ಆದರೆ ಇಂದು ಚಾಲುಕ್ಯ ಎಕ್ಸ್‌ಪ್ರೆಸ್ ರೈಲಿನಲ್ಲಿ ಟಿಕೆಟ್ ಕೇಳಿದ್ದಕ್ಕೆ ವ್ಯಕ್ತಿಯೊಬ್ಬ ಅಲ್ಲಿನ ಸಿಬ್ಬಂದಿ ಹಲ್ಲೆ ಮಾಡಿದ್ದು, ಇದು ದೊಡ್ಡ ಅಪರಾಧವಾಗಿದೆ.
ಅದರಲ್ಲೂ ನಿಯಮದ ಪ್ರಕಾರ, ರೈಲಿನಲ್ಲಿ ಟಿಕೆಟ್ ಇಲ್ಲದೆ ಪ್ರಯಾಣ ಮಾಡುವಂತಿಲ್ಲ. ಒಂದು ವೇಳೆ ಈ ನಿಯಮ ಮೀರಿದರೂ ದಂಡ ಕಟ್ಟಬೇಕಾಗುತ್ತದೆ. ಒಂದು ಟಿಕೆಟ್ ರಹಿತವಾಗಿ ಪ್ರಯಾಣಿಸಿದ್ದಲ್ಲದೆ, ಟಿಸಿ ಮೇಲೆಯೇ ಹಲ್ಲೆ ಮಾಡಿದರೆ ಅಂತಹವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗಯತ್ತದೆ. ಆದರೆ ಇಂದು ನಡೆದ ಘಟನೆಯಲ್ಲಿ ಆರೋಪಿ ಒಬ್ಬ ಮುಸುಕುಧಾರಿ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ.












Click it and Unblock the Notifications