ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಳಗಾವಿ ಉಪ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಪ್ರಕಟಿಸುವ ದಿನ ಯಾವಾಗ ಗೊತ್ತಾ?

By ಬೆಳಗಾವಿ ಪ್ರತಿನಿಧಿ
|
Google Oneindia Kannada News

ಬೆಳಗಾವಿ, ಜನವರಿ 23: ಬೆಳಗಾವಿ ಲೋಕಸಭಾ ಉಪ ಚುನಾವಣೆ ದಿನಾಂಕ ಪ್ರಕಟವಾದ ಮರುದಿನವೇ ಕಾಂಗ್ರೆಸ್ ಅಭ್ಯರ್ಥಿಯ ಹೆಸರು ಘೋಷಣೆ ಮಾಡಲಾಗುವುದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ತಿಳಿಸಿದರು.

ಬೆಳಗಾವಿಯ ಕಾಂಗ್ರೆಸ್ ಭವನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಬಿಜೆಪಿಗೂ ನಮಗೂ ಯಾವುದೇ ಸಂಬಂಧವಿಲ್ಲ. ಅವರು ಅಭ್ಯರ್ಥಿ ಹೆಸರು ಘೋಷಣೆ ಮಾಡಿದ ಬಳಿಕ ಮಾಡಬೇಕು ಅಂತಾ ಏನು ಇಲ್ಲ. ಚುನಾವಣಾ ಆಯೋಗ ದಿನಾಂಕ ಪ್ರಕಟ ಮಾಡಿದ ಬಳಿಕವೇ ಕಾಂಗ್ರೆಸ್ ಅಭ್ಯರ್ಥಿ ಹೆಸರು ಘೋಷಣೆ ಮಾಡಲಾಗುತ್ತದೆ ಎಂದು ಹೇಳಿದರು.

ಬೆಳಗಾವಿ ಉಪ ಚುನಾವಣೆ; ಬಿಜೆಪಿಗೆ ಟಿಕೆಟ್‌ಗೆ ಮುತಾಲಿಕ್ ಬೇಡಿಕೆ! ಬೆಳಗಾವಿ ಉಪ ಚುನಾವಣೆ; ಬಿಜೆಪಿಗೆ ಟಿಕೆಟ್‌ಗೆ ಮುತಾಲಿಕ್ ಬೇಡಿಕೆ!

ಕಾಂಗ್ರೆಸ್ ಪಕ್ಷದಿಂದ ಮೂರು ಜನರ ಹೆಸರನ್ನು ಹೈಕಮಾಂಡ್ ಗೆ ಶಿಫಾರಸ್ಸು ಮಾಡಲಾಗಿದೆ. ಆ ಮೂರು ಜನರಲ್ಲಿ ಒಬ್ಬರನ್ನು ಆಯ್ಕೆ ಮಾಡಲಾಗುವುದು. ಅದರಲ್ಲಿ ನನ್ನ ಹೆಸರು ಸಹ ಇದೆ. ಆದರೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಹೆಸರು ಇಲ್ಲ. ಪ್ರಕಾಶ ಹುಕ್ಕೇರಿ ಅವರು ಆಕಾಂಕ್ಷಿಯಾಗಿದ್ದಾರೆ. ಆದರೆ ಅವರು ಹೆಸರು ಸಹ ಇಲ್ಲ ಎಂದು ಸ್ಪಷ್ಟಪಡಿಸಿದರು.

Belagavi: KPCC Working President Satish Jarakiholi Reacted About Belagavi Lok Sabha Congress Candidate

ಸುವರ್ಣಸೌಧ ಮುತ್ತಿಗೆ

ಈಗಾಗಲೇ ಬೆಳಗಾವಿಯಲ್ಲಿ ಸರ್ಕಾರ ಎರಡು ಬಾರಿ ಸುವರ್ಣ ವಿಧಾನಸೌಧದಲ್ಲಿ ಅಧಿವೇಶನ ನಡೆಸಬೇಕಿತ್ತು. ಆದರೆ ನಡೆಸದೆ ಇರುವ ಕಾರಣದಿಂದ ಕಾಂಗ್ರೆಸ್ ಪಕ್ಷದಿಂದ ದೊಡ್ಡ ಮಟ್ಟದಲ್ಲಿ ಪ್ರತಿಭಟನೆ ನಡೆಸಲಾಗುತ್ತದೆ. ರಾಜ್ಯ ಕಾಂಗ್ರೆಸ್ ನಾಯಕರು ಬೆಳಗಾವಿ ಉಪ ಚುನಾವಣೆಗೂ ಮೊದಲೇ ಸುವರ್ಣಸೌಧ ಮುತ್ತಿಗೆ ಹಾಕಲಾಗುತ್ತದೆ ಎಂದು ತಿಳಿಸಿದರು.

ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಿ, ಅಲ್ಲಿಂದ ಸುವರ್ಣ ವಿಧಾನಸೌಧದವರೆಗೆ ಶಕ್ತಿ ಪ್ರದರ್ಶನ ಮಾಡಲಾಗುತ್ತದೆ ಎಂದರು.

English summary
KPCC working president Satish Jarakiholi said the name of the Congress candidate will be announced the day after the Belagavi Lok Sabha by-election is announced.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X