ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಅವರವರ ಕ್ಷೇತ್ರದ ವಿಚಾರ ಬಂದಾಗ ಅಲ್ಲಿನ ನಾಯಕರೇ ಸುಪ್ರೀಂ: ಕೆಪಿಸಿಸಿ ಕಾರ್ಯಾಧ್ಯಕ್ಷ

By ಬೆಳಗಾವಿ ಪ್ರತಿನಿಧಿ
|
Google Oneindia Kannada News

ಬೆಳಗಾವಿ, ಫೆಬ್ರವರಿ 22: ಕ್ಷೇತ್ರವಾರು ಕಾಂಗ್ರೆಸ್ ನಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ. ಅವರವರ ಕ್ಷೇತ್ರದ ವಿಚಾರ ಬಂದಾಗ ಅಲ್ಲಿನ ನಾಯಕರೇ ಸುಪ್ರೀಂ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು.

ಕಾಂಗ್ರೆಸ್ ನಲ್ಲಿ ಮೂರು ಗುಂಪುಗಳಿವೆ ಎಂದು ಮಾಧ್ಯಮದವರ ಪ್ರಶ್ನೆಗೆ ಬೆಳಗಾವಿಯ ಕಾಂಗ್ರೆಸ್ ಕಚೇರಿಯಲ್ಲಿ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ, ಎಲ್ಲರೂ ಒಂದೇ ಎಂದರು.

"ಪಕ್ಷ ಬಿಟ್ಟು ಹೋದವರನ್ನು ಮರಳಿ ಕರೆ ತರುತ್ತೇವೆ; ಪುನಃ ಪಕ್ಷ ಸಂಘಟಿಸುತ್ತೇವೆ''

ಚಿಕ್ಕೋಡಿ ಭಾಗಕ್ಕೆ ಪ್ರಕಾಶ ಹುಕ್ಕೇರಿ ಅವರೇ ಬಾಸ್, ಬೇರೆ ಬೇರೆ ವಿಷಯಗಳಿಗೆ ಮನಸ್ತಾಪವಿರಬಹುದು, ಆದರೆ ಪಕ್ಷದ ವಿಚಾರದಲ್ಲಿ ಭಿನ್ನಾಭಿಪ್ರಾಯವಿಲ್ಲ. ಬೈಲಹೊಂಗಲಕ್ಕೆ ಮಹಾಂತೇಶ, ಬೆಳಗಾವಿ ಗ್ರಾಮೀಣಕ್ಕೆ ಹೆಬ್ಬಾಳ್ಕರ್, ಬೆಳಗಾವಿ ಉತ್ತರಕ್ಕೆ ಫೀರೋಜ್ ಸೇಠ್ ಹೀಗೆ ಅವರವರ ಕ್ಷೇತ್ರಕ್ಕೆ ಅವರೇ ಸುಪ್ರೀಂ ಎಂದು ತಿಳಿಸಿದರು.

ಪಕ್ಷ ಅಂತಾ ಬಂದಾಗ ನಾವೆಲ್ಲರೂ ಒಂದೇ

ಪಕ್ಷ ಅಂತಾ ಬಂದಾಗ ನಾವೆಲ್ಲರೂ ಒಂದೇ

ಕ್ಷೇತ್ರ ವಿಚಾರ ಬಂದಾಗ ಅಲ್ಲಿನ ನಾಯಕರೇ ಸುಪ್ರೀಂ ಇರುತ್ತಾರೆ. ಅಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ. ಜಿಲ್ಲೆಯ ವಿಚಾರಕ್ಕೆ ಬಂದಾಗ ಪೈಪೋಟಿ ಇರುತ್ತದೆ. ಬೆಂಗಳೂರಿನಿಂದ ದಿಲ್ಲಿಯವರೆಗೂ ನೆಚ್ಚಿನ ನಾಯಕರಿರುತ್ತಾರೆ. ಚೈನ್ ಸಿಸ್ಟಮ್ ಇರುತ್ತೆ ಅದು ಬೇರೆ, ಪಕ್ಷ ಅಂತಾ ಬಂದಾಗ ನಾವೆಲ್ಲರೂ ಒಂದೇ ಎಂದು ಸ್ಪಷ್ಟಪಡಿಸಿದರು.

ಎಲ್ಲರೂ ರಾಮ ಮಂದಿರಕ್ಕೆ ದೇಣಿಗೆ ನೀಡಿದ್ದಾರೆ

ಎಲ್ಲರೂ ರಾಮ ಮಂದಿರಕ್ಕೆ ದೇಣಿಗೆ ನೀಡಿದ್ದಾರೆ

ರಾಮ ಮಂದಿರಕ್ಕೆ ದೇಣಿಗೆ ನೀಡಲು ಕಾಂಗ್ರೆಸ್ ನಾಯಕರು ನಾಟಕ ಮಾಡುತ್ತಿದ್ದಾರೆ ಎಂಬ ಸಚಿವ ಪ್ರಹ್ಲಾದ್ ಜೋಶಿ ಹೇಳಿಕೆಗೆ ಪ್ರತಿಕ್ರಿಯಿಸಿ, ರಾಮ ಮಂದಿರ ಕೇವಲ ಬಿಜೆಪಿಯವರ ಆಸ್ತಿಯಲ್ಲ. ಅದು ದೇಶದ ಆಸ್ತಿ. ಕಾಂಗ್ರೆಸ್ ಹಾಗೂ ಜೆಡಿಎಸ್ ಹೀಗೆ ಎಲ್ಲರೂ ರಾಮ ಮಂದಿರಕ್ಕೆ ದೇಣಿಗೆ ನೀಡಿದ್ದಾರೆ ಎಂದು ತಿರುಗೇಟು ನೀಡಿದರು.

ವಿರೋಧ ಪಕ್ಷ ಮಾತ್ರ ಹೊಣೆಗಾರಿಕೆ

ವಿರೋಧ ಪಕ್ಷ ಮಾತ್ರ ಹೊಣೆಗಾರಿಕೆ

ಬಹಳಷ್ಟು ಮಾಧ್ಯಮಗಳು ಆಡಳಿತ ಪಕ್ಷದ ತಪ್ಪು ಹುಡುಕುವುದನ್ನು ಬಿಟ್ಟು ವಿರೋಧ ಪಕ್ಷದ ಮೇಲೆ ಗೂಬೆ ಕೂರಿಸುತ್ತಿವೆ. ಎಲ್ಲ ಕ್ಷೇತ್ರದಲ್ಲಿಯೂ ಧರ್ಮ, ದುಡ್ಡು, ಜಾತಿ ತಾಂಡವವಾಡುತ್ತಿದೆ. ಪ್ರಾಮಾಣಿಕತೆ ಗುರುತಿಸುವುದು ಕಷ್ಟಕರವಾಗಿದೆ. ವಿರೋಧ ಪಕ್ಷ ಮಾತ್ರ ಹೊಣೆಗಾರಿಕೆ ಎನ್ನುವಂತೆ ಬಿಂಬಿಸಲಾಗುತ್ತಿದೆ. ಎಲ್ಲರ ಜವಾಬ್ದಾರಿ ಎಷ್ಟಿದೆ ಎನ್ನುವುದನ್ನು ಮಾಧ್ಯಮಗಳು ಅರಿಯಬೇಕು ಎಂದು ಇತ್ತೀಚಿನ ಮಾಧ್ಯಮಗಳ ಬೆಳವಣಿಗೆ ಕುರಿತು ಕೆಪಿಸಿಸಿ ಕಾರ್ಯಾಧ್ಯಕ್ಷ ಕಳವಳ ವ್ಯಕ್ತಪಡಿಸಿದರು.

ಅವಶ್ಯವಿರುವ ಸಮುದಾಯಕ್ಕೆ ಮೀಸಲಾತಿ

ಅವಶ್ಯವಿರುವ ಸಮುದಾಯಕ್ಕೆ ಮೀಸಲಾತಿ

ಮೀಸಲಾತಿ ನಿಜವಾಗಿಯೂ ಯಾವ ಸಮುದಾಯಕ್ಕೆ ಅವಶ್ಯಕತೆ ಇದೆಯೋ ಅವರಿಗೆ ನೀಡಬೇಕು. ಇದರಲ್ಲಿ ಸರ್ಕಾರ ಇಕ್ಕಟ್ಟಿಗೆ ಸಿಲುಕಿಕೊಳ್ಳುವ ಪ್ರಶ್ನೆಯೇ ಇಲ್ಲ. ಮೀಸಲಾತಿ ಕೇಳುವ ಹಕ್ಕು ಎಲ್ಲರಿಗೂ ಇದೆ. ಕಾನೂನಿನಲ್ಲಿ ಏನು ಅವಕಾಶವಿದೆ ಅದನ್ನು ಮಾಡಬೇಕು ಎಂದ ಅವರು, ಕಳೆದ ಬಾರಿಗಿಂತಲೂ ಈ ಬಾರಿ ತಾ.ಪಂ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಹೆಚ್ಚು ಸ್ಥಾನ ಗೆಲ್ಲುವ ನಿರೀಕ್ಷೆ ಇದೆ. ಕೊನೆಗೆ ಜನರ ತೀರ್ಪು ಅಂತಿಮ ಎಂ ದು ಹೇಳಿದರು.

English summary
KPCC working president Satish Jarakiholi said there was no groupism in the Congress party.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X