ಬಿಜೆಪಿ ಪರ ಪ್ರಚಾರ: ಪ್ರಕಾಶ್ ಹುಕ್ಕೇರಿ ಹೇಳಿಕೆಗೆ ಸತೀಶ್ ಜಾರಕಿಹೊಳಿ ಆಕ್ರೋಶ
ಬೆಳಗಾವಿ, ಅಕ್ಟೋಬರ್ 27: ಮಾಜಿ ಕೇಂದ್ರ ಸಚಿವ ದಿ.ಸುರೇಶ್ ಅಂಗಡಿ ಕುಟುಂಬಕ್ಕೆ ಟಿಕೆಟ್ ನೀಡಿದರೆ ಬಿಜೆಪಿ ಪಕ್ಷದ ಪರ ಪ್ರಚಾರ ಮಾಡುತ್ತೇನೆ ಎಂಬ ಪ್ರಕಾಶ್ ಹುಕ್ಕೇರಿ ಹೇಳಿಕೆ ವಿಚಾರವಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರಕಾಶ್ ಹುಕ್ಕೇರಿ ಅವರ ಹೇಳಿಕೆ ಅಚ್ಚರಿ ತಂದಿದೆ. ಕಾಂಗ್ರೆಸ್ ಪಕ್ಷದಲ್ಲಿದ್ದು, ಬೇರೆ ಪಕ್ಷದ ಪರ ಹೇಳಿಕೆ ಕೊಡುವುದು ಎಷ್ಟರ ಮಟ್ಟಿಗೆ ಸರಿ? ಪ್ರಕಾಶ್ ಹುಕ್ಕೇರಿ ಆತ್ಮಾವಲೋಕನ ಮಾಡಿಕೊಳ್ಳುವುದು ಉತ್ತಮ ಎಂದು ಬೆಳಗಾವಿ ಜಿಲ್ಲೆ ಗೋಕಾಕ್‌ನಲ್ಲಿ ಸತೀಶ್ ಜಾರಕಿಹೊಳಿ ತಿರುಗೇಟು ನೀಡಿದರು.
ಪ್ರಕಾಶ್ ಹುಕ್ಕೇರಿಯವರು ಕಾಂಗ್ರೆಸ್‌ನಲ್ಲಿ ಎಲ್ಲಾ ಹುದ್ದೆಗಳನ್ನು ಎಂಜಾಯ್ ಮಾಡಿದ್ದಾರೆ. ಜಿ.ಪಂ ಸದಸ್ಯನಿಂದ ಹಿಡಿದು, ಎಂಎಲ್ಎ, ಎಂಪಿ, ಎಂಎಲ್ಸಿ, ಮಂತ್ರಿ ಎಲ್ಲಾ ಆಗಿದ್ದಾರೆ. ತಕ್ಷಣ ಏನೂ ಆಗಲ್ಲ ಕಾದು ನೋಡೋಣವೆಂದರು.

ಎಲ್ಲಾ ಪಕ್ಷಗಳನ್ನು ಮುಸುಕಿನ ಗುದ್ದಾಟ ಇದೆ. ಬಿಜೆಪಿಯಲ್ಲಿ ಏನು ಸರಿ ಇದೆ? ಅಲ್ಲಿಯೂ ನಮಗಿಂತ ಹೆಚ್ಚು ಮುಸುಕಿನ ಗುದ್ದಾಟವಿದೆ. ಒಂದು ವಿಷಯ ಪರಿಹಾರ ಮಾಡಿದರೆ, ಮತ್ತೊಂದು ವಿಷಯ ಬರ್ತಾನೆ ಇರುತ್ತೆ, ಅದಕ್ಕೆ ರಾಜಕೀಯ ಅನ್ನೋದು. ಹೈಕಮಾಂಡ್ ಸಹ ಪ್ರಕಾಶ್ ಹುಕ್ಕೇರಿ ಹೇಳಿಕೆಯನ್ನು ಗಮನಿಸಿದೆ. ಅವರ ವಿರುದ್ಧ ಕ್ರಮ ಕೈಗೊಳ್ಳುದು ಹೈಕಮಾಂಡ್ ಗೆ ಬಿಟ್ಟ ವಿಚಾರ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ತಿಳಿಸಿದರು.
ಡಿ.ಕೆ ಶಿವಕುಮಾರ್ ಸಿಎಂ ಆಗುತ್ತಾರೆ ಎಂದು ಸೌಮ್ಯಾರೆಡ್ಡಿ, ಸಿದ್ದರಾಮಯ್ಯ ಸಿಎಂ ಆಗುತ್ತಾರೆ ಅಂತಾ ಜಮೀರ್ ಅಹ್ಮದ್ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಸತೀಶ್ ಜಾರಕಿಹೊಳಿ, ಯಾರು ಏನೇ ಹೇಳಿದರೂ ಅದಕ್ಕೆ ಏನೂ ವ್ಯಾಲ್ಯೂ ಇಲ್ಲ, 113 ಶಾಸಕರು ಆಯ್ಕೆಯಾಗಿ ಅವರ ಅಭಿಪ್ರಾಯ ಸಂಗ್ರಹಿಸಿ ಹೈಕಮಾಂಡ್ ನಿರ್ಧರಿಸುವುದು ನಮ್ಮಲ್ಲಿರುವ ವ್ಯವಸ್ಥೆ ಎಂದರು.
ಯಾರಿದ್ದರೂ ಪಕ್ಷ ಸಂಘಟನೆ ಮಾಡಬೇಕು, ಕಾಂಗ್ರೆಸ್ ಅಧಿಕಾರಕ್ಕೆ ತರಲು ಪ್ರಯತ್ನ ಮಾಡಬೇಕು. ಅದೊಂದೇ ನಮ್ಮ ಹತ್ತಿರ ಇರುವ ಆಪ್ಷನ್, ಸಿಎಂ ಆಪ್ಷನ್ ಪ್ರಶ್ನೆ ಇಲ್ಲ ಎಂದು ಬೆಳಗಾವಿ ಜಿಲ್ಲೆ ಗೋಕಾಕ್‌ನಲ್ಲಿ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications