ಕಿತ್ತೂರು ಅರಮನೆ-ಕೋಟೆ ಅಭಿವೃದ್ಧಿಗೆ ಕಾಲ ಮಿತಿ ನೀಡಿದ ಸಚಿವ ಕೃಷ್ಣ ಬೈರೇಗೌಡ

ಬೆಳಗಾವಿ ಡಿಸೆಂಬರ್ 08: ಕಿತ್ತೂರು ಅರಮನೆ ಹಾಗೂ ಕೋಟೆ ಅಭಿವೃದ್ಧಿಯನ್ನು ಅಕ್ಟೋಬರ್ 2024ರ ಕಾಲಮಿತಿಯೊಳಗೆ ಮುಗಿಸಬೇಕು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಕಿತ್ತೂರು ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚಿಸಿದರು.

ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಶುಕ್ರವಾರ ಏರ್ಪಡಿಸಿದ್ದ ಕಿತ್ತೂರು ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳ ಜೊತೆಗೆ ಸಭೆ ನಡೆಸಿ ಮಾತನಾಡಿದ ಸಚಿವ ಕೃಷ್ಣ ಬೈರೇಗೌಡ ಅವರು, "ಬ್ರಿಟೀಷರ ವಿರುದ್ಧ ಕಿತ್ತೂರು ರಾಣಿ ಚೆನ್ನಮ್ಮ ಸೇನೆ ಮೊದಲ ಗೆಲುವು ಸಾಧಿಸಿದ್ದ ಐತಿಹಾಸಿಕ ವಿಜಯಕ್ಕೆ 2024 ಅಕ್ಟೋಬರ್ ಗೆ 200 ವರ್ಷವಾಗಲಿದೆ. ಇದು ಇಡೀ ನಾಡಿನ ಹೆಮ್ಮೆಯ ವಿಚಾರಗಳಲ್ಲೊಂದು.

Krishna Byre Gowda has given a time limit for the development of Kittur Palace-Fort

ಈ ನಿಟ್ಟಿನಲ್ಲಿ ಸರ್ಕಾರ ಐತಿಹಾಸಿಕ ಕಾರ್ಯಕ್ರಮ ಯೋಜಿಸುವ ಆಲೋಚನೆಯಲ್ಲಿದ್ದು, ಅಷ್ಟರೊಳಗೆ ಕಿತ್ತೂರು ಕೋಟೆ ಹಾಗೂ ಅರಮನೆ ಹಾಗೂ ರಾಣಿ ಚೆನ್ನಮ್ಮ ಅವರ ಸಮಾಧಿ ಸ್ಥಳ ಸಂಪೂರ್ಣ ಅಭಿವೃದ್ಧಿಯಾಗಬೇಕು. ಅಲ್ಲದೆ, ಈ ಸ್ಥಳಗಳು ಪ್ರವಾಸಿ ತಾಣವಾಗಿಯೂ ಜನರನ್ನು ಸೆಳೆಯುವಂತಿರಬೇಕು" ಎಂದು ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಅವರು ಸೂಚಿಸಿದರು.

ಕೋಟೆ ಹಾಗೂ ಅರಮನೆಯನ್ನು ಸಂರಕ್ಷಿಸುವುದು ನಮ್ಮ ಹೊಣೆ ಮತ್ತು ಜವಾಬ್ದಾರಿ. ನಮ್ಮ ಶ್ರೀಮಂತ ಇತಿಹಾಸ ಹಾಗೂ ಪರಂಪರೆಯ ಕುರುಹುಗಳನ್ನು ಉಳಿಸುವುದು ಮತ್ತು ಮುಂದಿನ ಪೀಳಿಗೆಗೆ ದಾಟಿಸುವುದು ನಮ್ಮ ಮೇಲಿರುವ ಮಹತ್ತರವಾದ ಜವಾಬ್ದಾರಿಯೂ ಆಗಿದೆ. ಹೀಗಾಗಿ ಮುಂದಿನ 200 ವರ್ಷಗಳನ್ನು ಗಮನದಲ್ಲಿಟ್ಟು ಮುಂದಾಲೋಚನೆಯಿಂದಾಗಿ ಈ ತಾಣಗಳನ್ನು ಅಭಿವೃದ್ಧಿಪಡಿಸಬೇಕು ಎಂದರು.

ಅಭಿವೃದ್ಧಿ ವಿಚಾರದಲ್ಲಿ ಪ್ರಾಚೀನತೆಯ ಅಂಶಗಳನ್ನೂ ಒಳಗೊಂಡಿರಬೇಕು. ನೋಡುಗರಿಗೆ ಇದು ನಮ್ಮದೇ ಇತಿಹಾಸ ಎಂದು ಸೆಳೆಯುವಂತಿರಬೇಕು. ಈ ನಿಟ್ಟಿನಲ್ಲಿ ಪ್ರಾಧಿಕಾರ ಅಧಿಕಾರಿಗಳು ಪುರಾತತ್ವ ಇಲಾಖೆಯ ಸಲಹೆ ಸೂಚನೆಗಳನ್ನು ಪಡೆದುಕೊಳ್ಳಬೇಕು. ಅವರ ಮೇಲ್ವಿಚಾರಣೆಯಲ್ಲಿ ಎಲ್ಲಾ ಕೆಲಸಗಳೂ ನಡೆಯಬೇಕು ಎಂದು ಅವರು ಸೂಚಿಸಿದರು.

Krishna Byre Gowda has given a time limit for the development of Kittur Palace-Fort

ಪ್ರಾಧಿಕಾರದ ಖಾತೆಯಲ್ಲಿ ಈಗಾಗಲೇ 14.5 ಕೋಟಿ ರೂ. ಹಣ ಇದೆ. ಮುಂದಿನ ವರ್ಷದ ಅನುದಾನವೂ ಸೇರಿ ಕನಿಷ್ಟ 20 ಕೋಟಿ ರೂ. ಪ್ರಾಧಿಕಾರಕ್ಕೆ ಸಿಗಲಿದೆ. ಅಲ್ಲದೆ, ವಿಶೇಷ ಪ್ಯಾಕೇಜ್ ನೀಡಲು-ಕೋಟೆ-ಅರಮನೆ ಅಭಿವೃದ್ಧಿ ಕಾಮಗಾರಿಗೆ ಸಂಬಂಧಿಸಿದ ವೆಚ್ಚವನ್ನು ಬಜೆಟ್ ನಲ್ಲಿ ಸೇರಿಸಲೂ ಸಹ ಸರ್ಕಾರ ಸಿದ್ದವಾಗಿದೆ ಎಂದು ಸಭೆಯಲ್ಲಿ ಸಚಿವ ಕೃಷ್ಣ ಬೈರೇಗೌಡ ಅವರು ಭರವಸೆ ನೀಡಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+