• search
  • Live TV
ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ರಾಯಣ್ಣ ಪುತ್ಥಳಿ ವಿವಾದ ಸುಖಾಂತ್ಯ; ಬೆಳಗಾವಿಯಲ್ಲಿ ಈಶ್ವರಪ್ಪ ಹೇಳಿದ್ದೇನು?

By ಬೆಳಗಾವಿ ಪ್ರತಿನಿಧಿ
|
Google Oneindia Kannada News

ಬೆಳಗಾವಿ, ಆಗಸ್ಟ್ 29: ಬೆಳಗಾವಿಯ ಪೀರನವಾಡಿಯ ಸಂಗೊಳ್ಳಿ ರಾಯಣ್ಣ ಮೂರ್ತಿ ಮರುಸ್ಥಾಪನೆ ವಿವಾದ ಇಷ್ಟು ಬೇಗ ಇತ್ಯರ್ಥ ಆಗುತ್ತದೆ ಎಂದು ನಾನು ಅಂದುಕೊಂಡಿರಲಿಲ್ಲ ಎಂದು ಸಚಿವ ಕೆ ಎಸ್ ಈಶ್ವರಪ್ಪ ಹೇಳಿದ್ದಾರೆ.

ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಲ್ಕು ದಿನದ ಹಿಂದೆ ಬೆಳಗಾವಿಗೆ ಭೇಟಿ ನೀಡಿದ್ದೆ. ಶಿವಾಜಿ, ರಾಯಣ್ಣ ಮೂರ್ತಿ ವಿವಾದ ಇತ್ಯರ್ಥವಾಗಿದೆ. ಇಷ್ಟು ಸುಲಭವಾಗಿ ಮೂರ್ತಿ ವಿವಾದ ಇತ್ಯರ್ಥ ಆಗುತ್ತದೆ ಎಂದು ಗೊತ್ತಿರಲಿಲ್ಲ. ದೇಶದ ಸ್ವಾತಂತ್ರ್ಯಕ್ಕಾಗಿ ಇಬ್ಬರ ಹೋರಾಟ ಸ್ಮರಣೀಯ. ಕೆಲವರ ಸಂಕುಚಿತ ಭಾವನೆಯಿಂದ ಗೊಂದಲ ಆಯಿತು. ನಿನ್ನೆ ಆಗಿರೋ ತೀರ್ಮಾನ ರಾಷ್ಟ್ರ ಭಕ್ತರಿಗೆ ಸಂತೋಷ ತಂದಿದೆ ಎಂದರು.

ಬೆಳಗಾವಿ ರಾಯಣ್ಣ ಪುತ್ಥಳಿ ಪ್ರತಿಷ್ಠಾಪನೆ ವಿವಾದಕ್ಕೆ ತೆರೆಬೆಳಗಾವಿ ರಾಯಣ್ಣ ಪುತ್ಥಳಿ ಪ್ರತಿಷ್ಠಾಪನೆ ವಿವಾದಕ್ಕೆ ತೆರೆ

ರಾಯಣ್ಣ, ಶಿವಾಜಿ ಇಬ್ಬರೂ ಜಾತಿ, ಭಾಷೆಯನ್ನು ಮೀರಿದ್ದಾರೆ. ಬೆಳಗಾವಿಯಲ್ಲಿ ಆಗಿರುವ ತೀರ್ಮಾನ ದೇಶಕ್ಕೆ ಮಾದರಿ. ತೀರ್ಮಾನದಿಂದ ಎಲ್ಲರಿಗೂ ಸಂತೋಷ ಆಗಿದೆ. ಇದು ಮಾದರಿ ತೀರ್ಮಾನ. ಗಲಾಟೆ ಸಂಬಂಧ ಮೂರು ಪ್ರಕರಣ ದಾಖಲಾಗಿವೆ. ಈ ಬಗ್ಗೆ ಗೃಹ ಸಚಿವರ ಜತೆಗೆ ಚರ್ಚೆ ಮಾಡಿದ್ದೇನೆ. ಪ್ರಕರಣ ವಾಪಸ್ ಪಡೆಯುವ ಬಗ್ಗೆ ಮಾತುಕತೆ ಮಾಡಿದ್ದೇನೆ. ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿಗೆ ಅಭಿನಂದನೆ ಸಲ್ಲಿಸಬೇಕು.

ರಾಯಣ್ಣ ಪ್ರತಿಮೆ ಸಂಬಂಧ ಹೋರಾಟ ಮಾಡಿದ ಎಲ್ಲರಿಗೂ ಅಭಿನಂದನೆಗಳು ಎಂದರು.

English summary
I didnt think that the controversy over sangolli Rayanna statue would be end this soon, said Minister KS Eshwarappa in belagavi,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X