ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕುಡಚಿ ಬಿಜೆಪಿ ಶಾಸಕ ಪಿ. ರಾಜೀವ್ ಹೋಂ ಕ್ವಾರಂಟೈನ್

|
Google Oneindia Kannada News

ಬೆಳಗಾವಿ, ಸೆಪ್ಟೆಂಬರ್ 21: ಬೆಳಗಾವಿ ಜಿಲ್ಲೆಯ ಕುಡಚಿ ಕ್ಷೇತ್ರದ ಬಿಜೆಪಿ ಶಾಸಕ ಪಿ. ರಾಜೀವ್ ಹೋಂ ಕ್ವಾರಂಟೈನ್‌ ಆಗಿದ್ದಾರೆ. ಶಾಸಕರ ತಂದೆಗೆ ಕೋವಿಡ್ ಸೋಂಕು ತಗುಲಿದ್ದು ಮನೆಯಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿದೆ.

ಸೋಮವಾರ ಫೇಸ್ ಬುಕ್‌ನಲ್ಲಿ ಈ ಕುರಿತು ಶಾಸಕ ಪಿ. ರಾಜೀವ್ ಪೋಸ್ಟ್ ಹಾಕಿದ್ದಾರೆ. "ನನ್ನ ತಂದೆಯವರಿಗೆ ಕೊರೊನಾ ಪಾಸಿಟಿವ್ ವರದಿ ಬಂದಿರುವುದರಿಂದ ಮನೆಯಲ್ಲಿಯೇ ಪ್ರತ್ಯೇಕ ಕೊಠಡಿಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ" ಎಂದು ಹೇಳಿದ್ದಾರೆ.

ಇಂದಿನಿಂದ ಮಳೆಗಾಲದ ಅಧಿವೇಶನ ಕಾಂಗ್ರೆಸ್ ಪಕ್ಷದ ರಣತಂತ್ರ ಏನು ಗೊತ್ತಾ?ಇಂದಿನಿಂದ ಮಳೆಗಾಲದ ಅಧಿವೇಶನ ಕಾಂಗ್ರೆಸ್ ಪಕ್ಷದ ರಣತಂತ್ರ ಏನು ಗೊತ್ತಾ?

"ನನ್ನ ತಂದೆಯವರೊಂದಿಗೆ ಪ್ರಾಥಮಿಕ ಸಂಪರ್ಕ ಹೊಂದಿರುವುದರಿಂದ ಮಾನ್ಯ ಸಭಾಧ್ಯಕ್ಷರ ಅನುಮತಿಯೊಂದಿಗೆ ಹಾಗೂ ವೈದ್ಯರ ಸಲಹೆಯಂತೆ ಹೋಮ್ ಕ್ವಾರಂಟೈನ್‌ನಲ್ಲಿ ಇರುತ್ತೇನೆ" ಎಂದು ಶಾಸಕರು ತಿಳಿಸಿದ್ದಾರೆ.

ಸಚಿವರು, ಶಾಸಕರಿಗೂ ಕೋವಿಡ್ ನೆಗಟಿವ್ ಪರೀಕ್ಷಾ ವರದಿ ಕಡ್ಡಾಯಸಚಿವರು, ಶಾಸಕರಿಗೂ ಕೋವಿಡ್ ನೆಗಟಿವ್ ಪರೀಕ್ಷಾ ವರದಿ ಕಡ್ಡಾಯ

Kudachi BJP MLA P.Rajeev In Home Quarantine

ಬೆಂಗಳೂರಿನ ವಿಧಾನಸೌಧದಲ್ಲಿ ಸೋಮವಾರದಿಂದ ಮುಂಗಾರು ಅಧಿವೇಶನ ಆರಂಭವಾಗುತ್ತಿದೆ. ಶಾಸಕರು ಕ್ವಾರಂಟೈನ್‌ನಲ್ಲಿರುವ ಕಾರಣ ಅಧಿವೇಶನಕ್ಕೆ ಹಾಜರಾಗುತ್ತಿಲ್ಲ. ಅಧಿವೇಶನಕ್ಕೆ ಬರುವವರು ಕಡ್ಡಾಯವಾಗಿ ಕೋವಿಡ್ ನಗೆಟಿವ್ ವರದಿ ತರಬೇಕು ಎಂದು ಸೂಚನೆ ನೀಡಲಾಗಿದೆ.

ಚಿತ್ತಾಪುರ ಶಾಸಕ ಪ್ರಿಯಾಂಕ್‌ ಖರ್ಗೆಗೆ ಕೋವಿಡ್ ಸೋಂಕುಚಿತ್ತಾಪುರ ಶಾಸಕ ಪ್ರಿಯಾಂಕ್‌ ಖರ್ಗೆಗೆ ಕೋವಿಡ್ ಸೋಂಕು

ಎಲ್ಲಾ ಶಾಸಕರು ಶನಿವಾರ ಮತ್ತು ಭಾನುವಾರ ಕೋವಿಡ್ ಪರೀಕ್ಷೆ ಮಾಡಿಸಿಕೊಂಡಿದ್ದಾರೆ. ಕೋವಿಡ್ ವರದಿ ಪಾಸಿಟಿವ್ ಬಂದ ಹಿನ್ನಲೆಯಲ್ಲಿ ಮೊದಲ ದಿನದ ಅಧಿವೇಶನಕ್ಕೆ 6ಕ್ಕೂ ಹೆಚ್ಚು ಸಚಿವರು, 15ಕ್ಕೂ ಹೆಚ್ಚು ಶಾಸಕರು ಗೈರಾಗಲಿದ್ದಾರೆ.

ಶಾಸಕರು ಮಾತ್ರವಲ್ಲ ಅಧಿವೇಶನದ ವೇಳೆ ಕರ್ತವ್ಯ ನಿರ್ವಹಣೆ ಮಾಡುವ ಸಿಬ್ಭಂದಿ, ಅಧಿವೇಶನ ವರದಿ ಮಾಡಲು ತೆರಳುವ ಪತ್ರಕರ್ತರಿಗೆ ಸಹ ಕೋವಿಡ್ ಪರೀಕ್ಷೆ ಮಾಡಿಸಿಕೊಂಡು ಬರಲು ಸೂಚನೆ ನೀಡಲಾಗಿದೆ. ಕೋವಿಡ್ ನೆಗಟಿವ್ ವರದಿ ಇದ್ದರೆ ಮಾತ್ರ ವಿಧಾನಸೌಧವೊಳಗೆ ಬಿಡಲಾಗುತ್ತದೆ.

Recommended Video

Bangalore ಇನ್ನೂ ಕೆಲವು ದಿನ ಮಳೆ ಮುಂದುವರೆಯಲಿದೆ | Oneindia Kannada

ಭಾನುವಾರದ ವರದಿಯಂತೆ ಬೆಳಗಾವಿ ಜಿಲ್ಲೆಯಲ್ಲಿ 151 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ. ಜಿಲ್ಲೆಯಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 17810. ಸಕ್ರಿಯ ಪ್ರಕರಣಗಳ ಸಂಖ್ಯೆ 2180. ಜಿಲ್ಲೆಯಲ್ಲಿ ಇದುವರೆಗೂ 269 ಜನರು ಮೃತಪಟ್ಟಿದ್ದಾರೆ.

English summary
Kudachi constituency BJP MLA P.Rajeev in home quarantine after father test positive for COVID 19. P.Rajeev will not attend monsoon session in Bengaluru from September 21.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X