ಎಸಿಬಿ ದಾಳಿ: ಭ್ರಷ್ಟ ಅಧಿಕಾರಿ ಮನೆಯ ಬಾತ್ ರೂಮ್‌ನಲ್ಲಿ ಲಕ್ಷ ಲಕ್ಷ ಹಣ ಪತ್ತೆ!
ಬೆಳಗಾವಿ, ಜೂನ್ 21: ಎಸಿಬಿ ಅಧಿಕಾರಿಗಳು ಬೆಳ್ಳಂಬೆಳಗ್ಗೆ ಬೆಲ್ ಮಾಡ್ತಿದ್ದಂತೆ ಬೆಚ್ಚಿ ಬಿದ್ದ ಅದೆಷ್ಟೋ ಅಧಿಕಾರಿಗಳು. ಇವರು ಮಾಡಿಟ್ಟ ಆಸ್ತಿ ನೋಡಿ ಎಸಿಬಿ ಅಧಿಕಾರಿಗಳು ಸಹ ಸುಸ್ತಾಗಿದ್ದಾರೆ. ಬೆಳಗಾವಿಯ ಲೋಕೋಪಯೋಗಿ ಇಲಾಖೆಯಲ್ಲಿ ಅಧೀಕ್ಷಕ ಅಭಿಯಂತರನಾಗಿರುವ ಭೀಮರಾವ್ ಯಶವಂತ ಪವಾರ್( ಬಿವೈ ಪವಾರ್) ಮನೆಯ ಬಾತ್ ರೂಮ್‌ನಲ್ಲಿ ಲಕ್ಷ ಲಕ್ಷ ಹಣ ಸಿಕ್ಕಿದೆ.
ಮನೆಯಲ್ಲಿ ಬಾತ್‌ರೂಮ್ ಕಟ್ಟಿಸೋದು ಸ್ನಾನಕ್ಕೆ, ಮಲಮೂತ್ರ ವಿಸರ್ಜನೆಗೆ. ಆದರೆ ಇಲ್ಲೊಬ್ಬ ಭ್ರಷ್ಟ ಅಧಿಕಾರಿ ಮನೆಯ ಬಾತ್ ರೂಮ್‌ನಲ್ಲಿ ಲಕ್ಷ ಲಕ್ಷ ಹಣವಿಟ್ಟಿರೋದು ಎಸಿಬಿ ದಾಳಿಯ ವೇಳೆಯಲ್ಲಿ ಪತ್ತೆಯಾಗಿದೆ.

ಜೂನ್ 30ಕ್ಕೆ ಸೇವಾ ನಿವೃತ್ತಿ ಹೊಂದಲಿದ್ದ ಬಿವೈ ಪವಾರ್
ಲೋಕೋಪಯೋಗಿ ಇಲಾಖೆಯ ಅಧೀಕ್ಷಕ ಅಭಿಯಂತರ ಬಿವೈ ಪವಾರ್ ಹಿರಿಯ ಅಧಿಕಾರಿ ಅಧಿಕಾರಿಯಾಗಿದ್ದರು. ಜೂನ್ 30ರಂದು ನಿವೃತ್ತಿ ಅಂಚಿನಲ್ಲಿದ್ದರು. ಆದರೆ, ಅಕ್ರಮ ಸಂಪತ್ತನ್ನು ಗಳಿಸಿರುವ ಆರೋಪದ ಮೇಲೆ ಅವರ ಮನೆ ಮೇಲೆ ಎಸಿಬಿ ದಾಳಿಯಾಗಿದೆ. ಬೆಳಗಾವಿಯ ಲೋಕೋಪಯೋಗಿ ಇಲಾಖೆ ಅಧಿಕಾರಿಯಾಗಿರುವ PWD ಬೆಳಗಾವಿ ಅಧೀಕ್ಷಕ ಬಿ.ವೈ ಪವಾರ್ ಮನೆ, ಕಚೇರಿ ಮೇಲೆ ದಾಳಿಯಾಗಿದ್ದು ಬೆಳಗಾವಿಯ ಜಕ್ಕೇರಿ ಹೊಂಡದಲ್ಲಿರುವ ಮನೆ, ಕಚೇರಿ ಮೇಲೆ ದಾಳಿಯಾಗಿದೆ. ಇವರಿಗೆ ಸೇರಿದ ಸರ್ಕಾರಿ ನಿವಾಸದ ಮೇಲೂ ದಾಳಿ ಮಾಡಿ ಪರಿಶೀಲನೆ ಮಾಡಲಾಗುತ್ತಿದೆ. ನಿಪ್ಪಾಣಿ ಮನೆ, ಬೋರಗಾಂವಿನಲ್ಲಿರುವ ಕಾರ್ಖಾನೆ, ಬಿ.ವೈ ಪವಾರ್‌ಗೆ ಸೇರಿದ ಮನೆ, ಕಚೇರಿ ಸೇರಿ ಆರು ಕಡೆ ದಾಳಿ 25 ಕ್ಕೂ ಅಧಿಕ ಸಿಬ್ಬಂದಿಯಿಂದ ಕಾರ್ಯಾಚರಣೆಯನ್ನು ನಡೆಸುತ್ತಿದ್ದಾರೆ.

ಎಸಿಬಿ ಡಿವೈಎಸ್‌ಪಿ ಬಿ.ಎಸ್.ನ್ಯಾಮಗೌಡರ ನೇತೃತ್ವದ ತಂಡದಿಂದ ಶೋಧ
ಬೆಳಗಾವಿ ಲೋಕೋಪಯೋಗಿ ಅಧೀಕ್ಷಕ ಇಂಜಿನಿಯರ್ ಬಿ.ವೈ.ಪವಾರ್ ನಿವಾಸದಲ್ಲಿ ಲಕ್ಷಾಂತರ ಹಣ ಪತ್ತೆಯಾಗಿರುವದಲ್ಲದೇ ಎಸಿಬಿ ಎಸ್‌ಪಿ ಬಿ.ಎಸ್.ನ್ಯಾಮಗೌಡರ ನೇತೃತ್ವದಲ್ಲಿ ಮುಂದುವರಿದ ಪರಿಶೀಲನೆ ಮುಂದುವರೆದಿದೆ. ಬಿ.ವೈ.ಪವಾರ್ ನಿವಾಸದಲ್ಲಿ ಬೆಳ್ಳಿ, ಚಿನ್ನದ ಆಭರಣಗಳು ಪತ್ತೆಯಾಗಿರುವುದಲ್ಲದೇ ಅಪಾರ ಪ್ರಮಾಣದ ಆಸ್ತಿ ಪತ್ರಗಳು, ಆಸ್ತಿ ಪತ್ತೆಯಾಗಿದೆ.
-
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications