Tiger Claw: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೂ ಸಂಕಷ್ಟ, ಪೆಂಡೆಂಟ್ ವಶಕ್ಕೆ ಪಡೆದು ಅಧಿಕಾರಿಗಳು ಹೇಳಿದ್ದೇನು?
ಬೆಂಗಳೂರು, ಅಕ್ಟೋಬರ್ 27: ಹುಲಿ ಉಗುರು ಧಾರಣೆ ಕರ್ನಾಟಕದಲ್ಲಿ ಭಾರೀ ಸದ್ದು ಮಾಡುತ್ತಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಪ್ರಭಾವಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೂ ಹುಲಿ ಉಗುರು ಸಂಕಷ್ಟ ಎದುರಾಗಿದೆ. ಅರಣ್ಯಾಧಿಕಾರಿಗಳು ಶುಕ್ರವಾರ ಸಚಿವೆಯ ಬೆಳಗಾವಿ ನಿವಾಸದಲ್ಲಿ ಶೋಧ ಕಾರ್ಯ ನಡೆಸಿದ್ದಾರೆ.
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಅವರು ಹುಲಿ ಹುಗುರಿನ ಪೆಂಡೆಂಟ್ ಧರಿಸಿದ್ದರು. ಈ ಕುರಿತು ಫೋಟೊ ವೈರಲ್ ಆಗುತ್ತಿದ್ದಂತೆ ಮನೆಗೆ ಅರಣ್ಯಾಧಿಕಾರಿಗಳು ಆಗಮಿಸಿದ್ದಾರೆ.

ಬೆಳಗಾವಿಯಲ್ಲಿರುವ ಲಕ್ಷ್ಮೀ ಹೆಬ್ಬಾಳ್ಕರ್ ಅವರ ನಿವಾಸದಲ್ಲಿ ಮೃಣಾಲ್ ಅವರ ಹುಲಿ ಉಗುರಿನ ಲಾಕೆಟ್ ಅನ್ನು ಶೋಧ ನಡೆಸಿ ಪೆಂಡೆಂಟ್ ವಶಕ್ಕೆ ಪಡೆದಿದ್ದಾರೆ.
ಈ ಕುರಿತ ಸ್ಪಷ್ಟನೆ ನೀಡಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು, ಇದು ಅಸಲಿ ಹುಲಿ ಉಗುರಿನ ಪೆಂಡೆಂಟ್ ಅಲ್ಲ. ಇವತ್ತಿನ ದಿವಸ ಒರಿಜಿನಲ್ ಹುಲಿ ಉಗುರು ಎಲ್ಲಿಂದ ಸಿಗಬೇಕು. ಇದು ನಕಲಿ ಎಂದು ಅವರು ಸುದ್ದಿಗಾರರಿಗೆ ಸ್ಪಷ್ಟನೆ ನೀಡಿದ್ದಾರೆ. ಅಧಿಕಾರಿಗಳಿಗೆ ತನಿಖೆಗೆ ಸಹಕರಿಸುವುದಾಗಿ ತಿಳಿಸಿದ್ದಾರೆ. ಸದ್ಯ ಸಚಿವೆ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿದ್ದಾರೆ. ಅಲ್ಲದೇ ಗುರುವಾರ ನಡೆದ ಕಾರ್ಯಕ್ರಮದಲ್ಲಿ ಅವರು ಭಾಗಿ ಆಗಿದ್ದರು. ಅವರು ಮನೆಗೆ ಮರಳಿದ ನಂತರ ಅಧಿಕಾರಿಗಳು ಮತ್ತಷ್ಟು ಮಾಹಿತಿ ಕಲೆ ಹಾಕಲಿದ್ದಾರೆ. ಹೆಬ್ಬಾಳ್ಕರ್ ಮನೆ ಮೇಲಿನ ಪರಿಶೀಲನೆ ಭಾರೀ ಚರ್ಚೆಗೆ ಗ್ರಾಸವಾಗಿದೆ.
FSLಗೆ ಉಗುರು ಕಳುಹಿಸಲು ತಯಾರಿ
ಸದ್ಯ ಹುಲಿ ಉಗುರು ಪತ್ತೆ ಮಾಡಿರುವ ಅರಣ್ಯಾಧಿಕಾರಿಗಳು, ಆ ಲಾಕೆಟ್ ಅಳಕೆ, ಬಣ್ಣ, ಅದರ ತೂಕವನ್ನು ಅವರ ನಿವಾಸದಲ್ಲಿಯೇ ಪರಿಶೀಲಿಸುತ್ತಿದ್ದಾರೆ. ಸದ್ಯ ಇದು ನಿಜವಾದ ಹುಲಿ ಉಗುರೇನಾ ಎಂಬ ಸತ್ಯ ಎಫ್‌ಎಸ್‌ಎಲ್ ಗೆ ಕಳುಹಿಸಲು ಅರಣ್ಯಾಧಿಕಾರಿಗಳು ತಯಾರಿ ನಡೆಸುತ್ತಿದ್ದಾರೆ.
ಈ ಹುಲಿ ಉಗುರನ್ನು ಬೆಂಗಳೂರಿನ ಎಫ್‌ಎಸ್‌ಎಲ್ ರವಾನಿಸಲಿದ್ದೇವೆ. ಅದರ ವರದಿ ಬಂದ ನಂತರವೇ ಈ ಬಗ್ಗೆ ತಿಳಿಸುತ್ತೇವೆ. ಸದ್ಯ ಪ್ರಾಥಮಿಕ ಪರಿಶೀಲನೆ ನಡೆಸಿದ್ದೇವೆ. ಪೆಂಡೆಂಟ್‌ನಲ್ಲಿನ ಚಿನ್ನವನ್ನು ಮರಳಿ ಅವರೆ ನೀಡಿ, ಉಗುರು ಒಯ್ಯುತ್ತೇವೆ. ನೈಜತೆ ಆಧಾರದಲ್ಲಿ ಮುಂದಿನ ಪ್ರಕ್ರಿಯೆ ಜರುಗಿಸುತ್ತೇವೆ ಎಂದು ನಿವಾಸದಲ್ಲಿ ಪರಿಶೀಲನೆ ನಡೆಸಿದ ಅರಣ್ಯಾಧಿಕಾರಿಯೊಬ್ಬರು ಮಾಹಿತಿ ನೀಡಿದರು.












Click it and Unblock the Notifications