• search
  • Live TV
ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ನ.27 ರಂದು ಗೋವಾದಲ್ಲಿ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರನ ಅದ್ಧೂರಿ ವಿವಾಹ

By ಬೆಳಗಾವಿ ಪ್ರತಿನಿಧಿ
|

ಬೆಳಗಾವಿ, ನವೆಂಬರ್ 26: ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ, ಕಾಂಗ್ರೆಸ್ ಮುಖಂಡೆ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರನ ಮದುವೆ ನ.27ರ ಶುಕ್ರವಾರ ಗೋವಾದಲ್ಲಿ ಅದ್ಧೂರಿಯಾಗಿ ನಡೆಯಲಿದೆ.

ಗೋವಾದ ಲೀಲಾ ಪ್ಯಾಲೇಸ್ ಹೋಟೆಲ್‌ನಲ್ಲಿ ಅದ್ಧೂರಿ ವಿವಾಹ ಸಮಾರಂಭ ಹಮ್ಮಿಕೊಂಡಿದ್ದು, ಬುಧವಾರ ರಾತ್ರಿ ಮೆಹಂದಿ ಕಾರ್ಯಕ್ರಮ ನೆರವೇರಿದ್ದು, ಗುರುವಾರ ಹಳದಿ ಕಾರ್ಯಕ್ರಮ ನಡೆಯಲಿದೆ.

ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರನ ನಿಶ್ಚಿತಾರ್ಥ

ನ.27ರ ಶುಕ್ರವಾರದಂದು ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಜೊತೆ ಡಾ.ಹಿತಾ ಅವರ ವಿವಾಹ ಸಮಾರಂಭ ನಡೆಯಲಿದೆ. ವಧು ಡಾ.ಹಿತಾ ಅವರು ಭದ್ರಾವತಿ ಶಾಸಕ ಬಿ‌.ಕೆ.ಸಂಗಮೇಶ್ವರ ಸಹೋದರ ಬಿ.ಕೆ.ಶಿವಕುಮಾರ್ ಪುತ್ರಿ ಆಗಿದ್ದಾಳೆ. ಕಳೆದ ಆಗಸ್ಟ್ 17 ರಂದು ಮಲೆನಾಡಿನ ಹೆಣ್ಣು ಡಾ.ಹಿತಾ ಹಾಗೂ ಉತ್ತರ ಕರ್ನಾಟಕ ಬಯಲು ಸೀಮೆಯ ಗಂಡು ಮೃಣಾಲ್ ನಡುವೆ ನಿಶ್ಚಿತಾರ್ಥ ಏರ್ಪಟ್ಟಿತ್ತು.

ಶುಕ್ರವಾರ ಗೋವಾದಲ್ಲಿ ನಡೆಯುವ ಅದ್ಧೂರಿ ವಿವಾಹ ಸಮಾರಂಭದಲ್ಲಿ ಗಣ್ಯಾತಿಗಣ್ಯರು ಪಾಲ್ಗೊಳ್ಳುವ ನಿರೀಕ್ಷೆ ಇದೆ. ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಆಪ್ತರಿಗೆ ಹಾಗೂ ಗಣ್ಯ ವ್ಯಕ್ತಿಗಳಿಗೆ ಮಾತ್ರ ಆಹ್ವಾನ ನೀಡಲಾಗಿದೆ.

ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷೆ ಸೋನಿಯಾ ಗಾಂಧಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ‌, ಈಶ್ವರ ಖಂಡ್ರೆ ಪಾಲ್ಗೊಳ್ಳುವ ನಿರೀಕ್ಷೆ ಇದೆ.

ದೆಹಲಿಯಲ್ಲಿ ವಿಪರೀತ ವಾಯು ಮಾಲಿನ್ಯ ಹಿನ್ನೆಲೆಯಲ್ಲಿ ವೈದ್ಯರ ಸಲಹೆ ಮೇರೆಗೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಈಗಾಗಲೇ ಗೋವಾದಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ.

English summary
Belagavi Rural constituency MLA Lakshmi Hebbalkar's Son wedding Ceremony in will take place in Goa on November 27.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X