• search
  • Live TV
ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಬೆಂಗಳೂರು-ಪುಣೆ ಹೆದ್ದಾರಿಯಲ್ಲಿ ಭಾರೀ ಕುಸಿತ; ನಾಳೆ ಮಧ್ಯಾಹ್ನದವರೆಗೂ ಸಂಚಾರ ಇಲ್ಲ

By ಬೆಳಗಾವಿ ಪ್ರತಿನಿಧಿ
|
Google Oneindia Kannada News

ಬೆಳಗಾವಿ, ಆಗಸ್ಟ್ 6: ಮಳೆಯಿಂದಾಗಿ ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಭಾರಿ ಪ್ರಮಾಣದ ಭೂಕುಸಿತ ಸಂಭವಿಸಿದೆ. ಹೀಗಾಗಿ ಪುಣೆ- ಬೆಂಗಳೂರು ರಸ್ತೆ ಸಂಪರ್ಕ ಸಂಪೂರ್ಣ ಕಡಿತಗೊಂಡಿದೆ.

ಕರ್ನಾಟಕದ ಮಹಾಮಳೆ, ಚಿತ್ರಗಳಲ್ಲಿ ನೋಡಿ

ಬೆಂಗಳೂರಿನಿಂದ ಬೆಳಗಾವಿ ಮಾರ್ಗವಾಗಿ ಪುಣೆಗೆ ಸಂಪರ್ಕಿಸುತ್ತಿದ್ದ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಬೃಹತ್ ಪ್ರಮಾಣದಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.

 ಚಿಕ್ಕಮಗಳೂರಿನಲ್ಲಿ ಜೋರು ಮಳೆ; ಚಾರ್ಮಾಡಿ ಘಾಟ್ ಬಳಿ ಉರುಳಿದ ಮರ ಚಿಕ್ಕಮಗಳೂರಿನಲ್ಲಿ ಜೋರು ಮಳೆ; ಚಾರ್ಮಾಡಿ ಘಾಟ್ ಬಳಿ ಉರುಳಿದ ಮರ

ಹೀಗೆ ಏಕಾಏಕಿ ಭೂಕುಸಿತವಾಗಿರುವುದರಿಂದ ಬೆಳಗಾವಿಯಿಂದ ಕೊಲ್ಲಾಪುರ ಕಡೆಗೆ ಯಾರೂ ಪ್ರಯಾಣ ಮಾಡದಂತೆ ಉತ್ತರ ಐಜಿಪಿ ರಾಘವೇಂದ್ರ ಸುಹಾಸ್ ಮನವಿ ಮಾಡಿದ್ದಾರೆ.

ಹೆಚ್ಚಿನ ಮಟ್ಟದಲ್ಲಿ ರಸ್ತೆಗೆ ಹಾನಿಯಾಗಿರುವುದರಿಂದ ನಾಳೆ ಮಧ್ಯಾಹ್ನದವರೆಗೂ ರಸ್ತೆ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.

ನಿನ್ನೆ ಸಂಜೆಯಿಂದಲೇ ರಾಜ್ಯದ ಗಡಿಯಲ್ಲಿ ಬೆಳಗಾವಿ ಪೊಲೀಸರು ವಾಹನ ಸ್ಥಗಿತಗೊಳಿಸಿದ್ದಾರೆ.

English summary
Land collapsed ue to heavy rain in Bangalore-Pune National Highway 4. Thus the Pune-Bangalore road network has been cut off.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X