ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

KSRTCಯಲ್ಲಿ ದುಪ್ಪಟ್ಟು ದರ: ವಾಪಸ್‌ ಬರುವಾಗ ಖಾಲಿ ಬರಬೇಕು

|
Google Oneindia Kannada News

ಬೆಳಗಾವಿ, ಮೇ 2: ವಲಸೆ ಕಾರ್ಮಿಕರಿಂದ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ದುಪ್ಪಟ್ಟು ದರ ವಸೂಲಿ ವಿಚಾರವಾಗಿ ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಸ್ಪಷ್ಟನೆ ನೀಡಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು ಕಾರ್ಮಿಕರ ಹಿತದೃಷ್ಟಿಯಿಂದ ಸಿಂಗಲ್ ಫೇರ್ ತೆಗೆದುಕೊಂಡು ಕಳುಹಿಸುವ ವ್ಯವಸ್ಥೆ ಮಾಡಲಾಗಿದೆ ಎಂದಿದ್ದಾರೆ.

Recommended Video

ದಾವಣಗೆರೆ ಕೊರೊನ ಸೋಂಕಿಗೆ ಗುಜರಾತ್ ನಂಟು ? ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ಹೇಳೋದೇನು ?

''ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಬಸ್‌ನಲ್ಲಿ ಕಡಿಮೆ ಜನರನ್ನು ಕಳಿಸಬೇಕಾಗುತ್ತದೆ. ಕಾರ್ಮಿಕರನ್ನು ಅವರ ಊರಿಗೆ ಬಿಟ್ಟು ವಾಪಸ್ ಬರುವಾಗ ಖಾಲಿ ಬರಬೇಕಾಗುತ್ತೆ. ಆದರೂ ಈ ಹೊರೆ ಸಹಿಸಿಕೊಂಡು ಸಿಂಗಲ್ ಫೇರ್ ಪಡೆಯಲಾಗುತ್ತೆ.'' ಎಂದಿದ್ದಾರೆ.

ವಲಸೆ ಕಾರ್ಮಿಕರಿಂದ ದುಪಟ್ಟು ಹಣ ಪಡೆಯಬೇಡಿ -ಸಿಎಂ ಆದೇಶವಲಸೆ ಕಾರ್ಮಿಕರಿಂದ ದುಪಟ್ಟು ಹಣ ಪಡೆಯಬೇಡಿ -ಸಿಎಂ ಆದೇಶ

ವಲಸೆ ಕಾರ್ಮಿಕರಿಗೆ ಉಚಿತ ಸಾರಿಗೆ ವ್ಯವಸ್ಥೆ ಕಲ್ಪಿಸಬೇಕೆಂಬ ಬೇಡಿಕೆ ವಿಚಾರವನ್ನು ಈಗಾಗಲೇ ಕಾರ್ಮಿಕ ಇಲಾಖೆಯಿಂದ ಕಾರ್ಮಿಕರಿಗೆ ಸಹಾಯ ಮಾಡಿದ್ದೇವೆ. ಕೊರೊನಾದಿಂದ ಇಡೀ ವಿಶ್ವಕ್ಕೆ ಕಂಟಕವಾಗಿದೆ. ಇದು ಎಲ್ಲರೂ ಕೂಡ ಹೊರಬೇಕಾಗಿರುವ ಭಾರವಾಗಿದ್ದು, ಸ್ವಲ್ಪ ಸಹಿಸಿಕೊಳ್ಳಬೇಕಾಗುತ್ತದೆ ಎಂದಿದ್ದಾರೆ.

Laxman Savadi Said KSRTC Collecting Single Fare From Migrant Workers

ಈ ರೀತಿ ಹೇಳುವ ಮೂಲಕ ಕಾರ್ಮಿಕರಿಗೆ ಉಚಿತ ಪ್ರಯಾಣ ಅಸಾಧ್ಯ ಎಂದು ಪರೋಕ್ಷವಾಗಿ ಲಕ್ಷ್ಮಣ್ ಸವದಿ ಹೇಳಿಕೆ ನೀಡಿದ್ದಾರೆ. ಮೇ 4ರಿಂದ ಕೊರೊನಾ ಹಾಟ್‌ಸ್ಪಾಟ್ ತಾಲೂಕು ಹೊರತುಪಡಿಸಿ ಇತರೆಡೆ ಸಾರಿಗೆ ಸಂಚಾರ ಶುರು ಆಗಲಿದೆ. ಆಯಾ ತಾಲೂಕುಗಳ ವ್ಯಾಪ್ತಿಯಲ್ಲಿ ಸಾರಿಗೆ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ.

ಮುಖ್ಯಮಂತ್ರಿ ಯಡಿಯೂರಪ್ಪ ಸಹ ವಲಸೆ ಕಾರ್ಮಿಕರನ್ನು ಊರಿಗೆ ಕರೆದುಕೊಂಡು ಹೋಗಲು ದುಪಟ್ಟು ಹಣ ಪಡೆಯಬೇಡಿ ಎಂದು ಅಧಿಕಾರಿಗಳಿಗೆ ತಿಳಿಸಿದ್ದಾರೆ.

English summary
Deputy chief minister Laxman Savadi said KSRTC collecting single fare from migrant workers.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X