ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡಿದ ಲಕ್ಷ್ಮೀ ಹೆಬ್ಬಾಳ್ಕರ್

|
Google Oneindia Kannada News

ಬೆಳಗಾವಿ, ಜನವರಿ 27; ದೇಶಾದ್ಯಂತ ಶ್ರೀ ರಾಮ ಮಂದಿರ ನಿರ್ಮಾಣಕ್ಕಾಗಿ ದೇಣಿಗೆಯನ್ನು ಸಂಗ್ರಹ ಮಾಡಲಾಗುತ್ತಿದೆ. ಶ್ರೀ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಎನ್ನುವ ಹೆಸರಿನಲ್ಲಿ ನಿಧಿ ಸಂಗ್ರಹಣ ನಡೆಯುತ್ತಿದ್ದು, ಜನರು ತಮ್ಮ ಕೈಲಾದಷ್ಟು ದೇಣಿಗೆಯನ್ನು ನೀಡುತ್ತಿದ್ದಾರೆ.

ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಶ್ರೀ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ಗೆ 2 ಲಕ್ಷ ರೂಪಾಯಿ ದೇಣಿಯನ್ನು ನೀಡಿದ್ದಾರೆ. ರಾಮ ಮಂದಿರ ನಿಧಿ ಸಂಗ್ರಹಣೆ ಮಾಡುವವರು ಶಾಸಕಿಯ ಮನೆಗೆ ಭೇಟಿ ನೀಡಿದ್ದರು. ಆಗ ಎರಡು ಲಕ್ಷ ರೂಪಾಯಿ ಚೆಕ್ ಹಸ್ತಾಂತರ ಮಾಡಿದ್ದಾರೆ.

ಕೂಡಿಟ್ಟ ಹಣವನ್ನು ರಾಮ ಮಂದಿರಕ್ಕೆ ಅರ್ಪಿಸಿದ ಚಿಣ್ಣರು: ಡಿಸಿಎಂ ಭಾವುಕ ಕೂಡಿಟ್ಟ ಹಣವನ್ನು ರಾಮ ಮಂದಿರಕ್ಕೆ ಅರ್ಪಿಸಿದ ಚಿಣ್ಣರು: ಡಿಸಿಎಂ ಭಾವುಕ

Laxmi hebbalkar Donated 2 Lakh Rs For Ram Mandir

ಈ ಸಂದರ್ಭದಲ್ಲಿ ಶಾಸಕಿಯ ಸಹೋದರ ಚನ್ನರಾಜ ಹಟ್ಟಿಹೊಳಿ, ವಿದ್ಯಾಭಾರತಿ ಕರ್ನಾಟಕ ಪ್ರಾಂತ ಅಧ್ಯಕ್ಷ ಪರಮೇಶ್ವರ ಹೆಗಡೆ, ವಿಶ್ವಹಿಂದೂ ಪರಿಷತ್ ಸಹಕೋಶಾಧ್ಯಕ್ಷ ಕೃಷ್ಣ ಭಟ್, ಜಿಲ್ಲಾ ವ್ಯವಸ್ಥಾ ಪ್ರಮುಖ್ ವಿಶಾಲ ಖಂಡಾಗಳೆ​ ಮುಂತಾದವರು ಉಪಸ್ಥಿತರಿದ್ದರು.

ರಾಮ ಮಂದಿರ ನಿರ್ಮಾಣ ಯಾವಾಗ ಪೂರ್ಣ, ತಗುಲುವ ವೆಚ್ಚವೆಷ್ಟು? ರಾಮ ಮಂದಿರ ನಿರ್ಮಾಣ ಯಾವಾಗ ಪೂರ್ಣ, ತಗುಲುವ ವೆಚ್ಚವೆಷ್ಟು?

"ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕೆ 45 ದಿನಗಳ ಕಾಲ ದೇಣಿಗೆ ಸಂಗ್ರಹ ಅಭಿಯಾನ ನಡೆಯಲಿದೆ" ಎಂದು ಶ್ರೀರಾಮ ಮಂದಿರ ನಿರ್ಮಾಣ ಸಮಿತಿ ಟ್ರಸ್ಟಿಯೂ ಆಗಿರುವ ಉಡುಪಿ ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದ್ದಾರೆ.

ರಾಮ ಮಂದಿರ ನಿರ್ಮಾಣಕ್ಕೆ 1 ಕೋಟಿ ರು ದೇಣಿಗೆ ನೀಡಿದ ಗೌತಮ್ ಗಂಭೀರ್ ರಾಮ ಮಂದಿರ ನಿರ್ಮಾಣಕ್ಕೆ 1 ಕೋಟಿ ರು ದೇಣಿಗೆ ನೀಡಿದ ಗೌತಮ್ ಗಂಭೀರ್

"ನಿಧಿ ಸಂಗ್ರಹದಲ್ಲಿ ಲೋಪದೋಷವಾಗಬಾರದು. ಹಣ ದುರುಪಯೋಗವಾಗಬಾರದು ಎಂಬ ಕಾರಣಕ್ಕೆ ವಿಶ್ವಹಿಂದೂ ಪರಿಷತ್‌ಗೆ ಜವಾಬ್ದಾರಿ ನೀಡಲಾಗಿದೆ. ವಿಶ್ವಹಿಂದೂ ಪರಿಷತ್ ಕಾರ್ಯಕರತರ ಪಡೆ ಪ್ರತಿ ಮನೆಗೂ ಭೇಟಿ ನೀಡಲಿದ್ದಾರೆ" ಎಂದು ಸ್ವಾಮೀಜಿ ತಿಳಿಸಿದ್ದಾರೆ.

"45 ದಿನಗಳ ಕಾಲ ಅಭಿಯಾನ ನಡೆಯಲಿದೆ. ಜನರು ಭಕ್ತಿ ಪೂರ್ವಕವಾಗಿ ದೇಣಿಗೆ ನೀಡಬಹುದಾಗಿದೆ. ಎಲ್ಲರನ್ನೂ ಒಳಗೊಂಡು ರಾಮ ಮಂದಿರ ನಿರ್ಮಿಸಬೇಕು ಎಂಬ ಉದ್ದೇಶದಿಂದ ದೇಣಿಗೆ ಸಂಗ್ರಹ ಮಾಡಲಾಗುತ್ತಿದೆ" ಎಂದು ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದ್ದಾರೆ.

English summary
Belagavi rural assembly seat Congress MLA Laxmi hebbalkar donated 2 lakh Rs for Ram mandir. Shri Ram Janmabhoomi Teerth Kshetra Trust had begun its donation collection drive.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X