ಮರಾಠಿಯಲ್ಲಿ ಮಾತಾಡಿದ ಲಕ್ಷ್ಮೀ ಹೆಬ್ಬಾಳ್ಕರ್; ವಿರೋಧಿಸಿದ ಯುವಕನಿಗೆ ಮಗನಿಂದ ಬೆದರಿಕೆ
Recommended Video
ಬೆಳಗಾವಿ, ಸೆಪ್ಟೆಂಬರ್ 25: ರಾಣಿ ಚೆನ್ನಮ್ಮನ ಪುತ್ಥಳಿ ಮುಂದೆ ನಿಂತು ಲಕ್ಷ್ಮೀ ಹೆಬ್ಬಾಳಕರ್ ಮರಾಠಿಯಲ್ಲಿ ಮಾತನಾಡಿದ್ದನ್ನು ವಿರೋಧಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದ ಯುವಕನಿಗೆ ಲಕ್ಷ್ಮೀ ಹೆಬ್ಬಾಳ್ಕರ್ ಮಗ ಬೆದರಿಕೆ ಸಂದೇಶ ಕಳುಹಿಸಿದ್ದಾರೆ.
ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ ಮೃನಾಲ್ ಹೆಬ್ಬಾಳ್ಕರ್ ಪೋಸ್ಟ್ ಹಾಕಿದ್ದ ಯುವಕನಿಗೆ "ಮೇಡಂ ವಿರುದ್ಧ ಇನ್ನೊಮ್ಮೆ ಪೋಸ್ಟ್ ಮಾಡಿದ್ರೆ ನಿನ್ನನ್ನ ಸುಮ್ಮನೆ ಬಿಡೋದಿಲ್ಲ, ನಿಮ್ಮ ಮನೆಗೆ ನೇರವಾಗಿ ಬರ್ತಿನಿ, ಬಿಸಿ ಮಾಡೋದಿದೆ, ನೋಡ್ತಾಯಿರು" ಎಂದು ಬೆದರಿಕೆ ಸಂದೇಶ ಕಳುಹಿಸಿದ್ದಾರೆ.

ಬಾಗಲಕೋಟೆಯ ಗಜಸೇನೆ ಜಿಲ್ಲಾಧ್ಯಕ್ಷ ಪವನ ಮಹಾಲಿಂಗಪುರ ಎಂಬುವರಿಗೆ ಫೇಸ್ ಬುಕ್ ಮೆಸೆಂಜರ್ ನಲ್ಲಿ ಹೀಗೆ ಬೆದರಿಕೆ ಸಂದೇಶಗಳನ್ನು ಕಳುಹಿಸಲಾಗಿದೆ. ಮೃಣಾಲ್ ಕಳಿಸಿದ್ದು ಎನ್ನಲಾದ ಸಂದೇಶಗಳು ಎಲ್ಲೆಲ್ಲೂ ಹರಿದಾಡುತ್ತಿವೆ.

ನಿನ್ನೆ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಪ್ರತಿಭಟನಾ ಮೆರವಣಿಗೆಯಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್, ಕಾಂಗ್ರೆಸ್ ಕಾರ್ಯಕರ್ತರು ಕನ್ನಡ ಮಾತನಾಡುವಂತೆ ಒತ್ತಾಯಿಸಿದಾಗ ಕನ್ನಡ ಮಾತನಾಡಿದ್ದರು. ರಾಣಿ ಚೆನ್ನಮ್ಮನ ಪುತ್ಥಳಿ ಮುಂದೆ ನಿಂತು ಮರಾಠಿ ಮಾತನಾಡಿದ್ದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗಿತ್ತು.












Click it and Unblock the Notifications