ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಪರಿಷತ್ ಚುನಾವಣೆ; ಜಾರಕಿಹೊಳಿ ಕುಟುಂಬಕ್ಕೆ ಟಿಕೆಟ್?

|
Google Oneindia Kannada News

ಬೆಳಗಾವಿ, ನವೆಂಬರ್ 14; ವಿಧಾನ ಪರಿಷತ್‌ನ 25 ಸ್ಥಾನಗಳಿಗೆ ಡಿಸೆಂಬರ್ 10ರಂದು ಚುನಾವಣೆ ನಡೆಯಲಿದೆ. ಬೆಳಗಾವಿ ಜಿಲ್ಲೆಯಲ್ಲಿ 2 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಜಾರಕಿಹೊಳಿ ಕುಟುಂಬದಿಂದ ಟಿಕೆಟ್‌ಗಾಗಿ ಬೇಡಿಕೆ ಇಡಲಾಗಿದೆ. ಬಿಜೆಪಿಯಿಂದ ಒಂದು ಸ್ಥಾನ ನೀಡುವಂತೆ ಮನವಿ ಮಾಡಲಾಗಿದೆ.

ಬೆಳಗಾವಿ ಜಿಲ್ಲೆಯ ಸ್ಥಳೀಯ ಸಂಸ್ಥೆಗಳಿಂದ ಮಹಾಂತೇಶ್‌ ಕವಟಗಿಮಠ, ವಿವೇಕ್‌ರಾವ್ ವಸಂತ್‌ರಾವ್ ಪಾಟೀಲ್ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಈ ಸ್ಥಾನಗಳ ಅವಧಿ ಪೂರ್ಣಗೊಳ್ಳಲಿದ್ದು, ಡಿಸೆಂಬರ್ 10ರಂದು ಮತದಾನ ನಡೆಯಲಿದೆ. ಡಿಸೆಂಬರ್ 14ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.

ವಿಧಾನ ಪರಿಷತ್ ಚುನಾವಣೆ; ಸ್ಪರ್ಧಿಸಲು ಅರ್ಹತೆಗಳು ವಿಧಾನ ಪರಿಷತ್ ಚುನಾವಣೆ; ಸ್ಪರ್ಧಿಸಲು ಅರ್ಹತೆಗಳು

ಬಿಜೆಪಿಯಿಂದ ಮಹಾಂತೇಶ್‌ ಕವಟಗಿ ಆಯ್ಕೆಯಾಗಿದ್ದು, ಅವರಿಗೆ ಪುನಃ ಟಿಕೆಟ್ ಸಿಗುವ ಸಾಧ್ಯತೆ ಇದೆ. ಮತ್ತೊಂದು ಸ್ಥಾನಕ್ಕಾಗಿ ರಮೇಶ್ ಜಾರಹೊಳಿ, ಬಾಲಚಂದ್ರ ಜಾರಕಿಹೊಳಿ ಬಿಜೆಪಿ ನಾಯಕರ ಬಳಿ ಬೇಡಿಕೆ ಇಟ್ಟಿದ್ದಾರೆ. ಟಿಕೆಟ್ ನೀಡಿದರೆ ಗೆಲ್ಲಿಸಿಕೊಂಡು ಬರುವ ಭರವಸೆ ಕೊಟ್ಟಿದ್ದಾರೆ.

ಪರಿಷತ್ ಚುನಾವಣೆ; ದೇವೇಗೌಡರ ಮೊಮ್ಮಗ ಕಣಕ್ಕೆ? ಪರಿಷತ್ ಚುನಾವಣೆ; ದೇವೇಗೌಡರ ಮೊಮ್ಮಗ ಕಣಕ್ಕೆ?

ವಿಧಾನ ಪರಿಷತ್ ಚುನಾವಣಗೆ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಲು ನವೆಂಬರ್ 23 ಕೊನೆಯ ದಿನ. ಜಾರಕಿಹೊಳಿ ಕುಟುಂಬದಲ್ಲಿ ಲಖನ್ ಜಾರಕಿಹೊಳಿಗೆ ಟಿಕೆಟ್ ನೀಡಬೇಕು ಎಂಬುದು ಬೇಡಿಕೆಯಾಗಿದೆ. ಲಖನ್ ಗೋಕಾಕ್ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಕಣಕ್ಕಿಳಿದು ಸೋಲು ಕಂಡಿದ್ದರು.

Breaking; ವಿಧಾನ ಪರಿಷತ್ 25 ಸ್ಥಾನಕ್ಕೆ ಚುನಾವಣೆ ಘೋಷಣೆ Breaking; ವಿಧಾನ ಪರಿಷತ್ 25 ಸ್ಥಾನಕ್ಕೆ ಚುನಾವಣೆ ಘೋಷಣೆ

ಬಾಲಚಂದ್ರ ಜಾರಕಿಹೊಳಿ ಹೇಳಿಕೆ

ಬಾಲಚಂದ್ರ ಜಾರಕಿಹೊಳಿ ಹೇಳಿಕೆ

ಅರಭಾವಿ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಲಖನ್ ಜಾರಕಿಹೊಳಿಗೆ ಟಿಕೆಟ್ ನೀಡುವ ಕುರಿತು ಮಾತನಾಡಿದ್ದಾರೆ, "ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್‌ಗೆ ನಡೆಯುವ ಚುನಾವಣೆಯಲ್ಲಿ ಸಹೋದರ ಲಖನ್ ಜಾರಕಿಹೊಳಿಗೆ 2ನೇ ಅಭ್ಯರ್ಥಿಯಾಗಿ ಸ್ಪರ್ಧಿಸಲು ಬಿಜೆಪಿಯಿಂದ ಅವಕಾಶ ನೀಡಬೇಕು" ಎಂದು ಮನವಿ ಮಾಡಿದ್ದಾರೆ.

"ಬಿಜೆಪಿಯ ಮೊದಲನೇ ಅಭ್ಯರ್ಥಿಯಾಗಿ ಮಹಾಂತೇಶ ಕವಟಗಿಮಠ ಸ್ಪರ್ಧೆ ಬಹುತೇಕ ಖಚಿತವಾದಂತಿದೆ. ಲಖನ್ ಜಿಲ್ಲೆಯಲ್ಲಿ ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ. ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳ ಜೊತೆ ಉತ್ತಮ ಬಾಂಧವ್ಯ ಹೊಂದಿದ್ದಾರೆ. ಇದನ್ನು ಗಮನಿಸಿ ಟಿಕೆಟ್ ನೀಡಬೇಕು ಎಂದು ಮನವಿ ಮಾಡಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು

ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು

"2019ರಲ್ಲಿ ನಡೆದ ಗೋಕಾಕ್ ಉಪ ಚುನಾವಣೆಯಲ್ಲಿ ಲಖನ್ ಜಾರಕಿಹೊಳಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದರು. ಬಳಿಕ ಬದಲಾದ ಪರಿಸ್ಥಿತಿಯಲ್ಲಿ ಅವರು ಬಿಜೆಪಿ ಜೊತೆ ಗುರುತಿಸಿಕೊಂಡು ಸಕ್ರಿಯವಾಗಿ ಕೆಲಸ ಮಾಡಿದ್ದಾರೆ. ಲೋಕಸಭಾ ಉಪ ಚುನಾವಣೆಯಲ್ಲಿ ಮಂಗಲಾ ಸುರೇಶ್ ಅಂಗಡಿ ಪರವಾಗಿ ಪ್ರಚಾರ ನಡೆಸಿ ಗೆಲುವಿಗೆ ಕಾರಣವಾಗಿದ್ದಾರೆ" ಎಂದು ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ.

"ಲಖನ್‌ ಜಾರಕಿಹೊಳಿಗೆ ಪಕ್ಷವೂ ಅವಕಾಶ ನೀಡಿದರೆ ಬೆಳಗಾವಿಯಲ್ಲಿಯಲ್ಲಿ ಎರಡೂ ಸ್ಥಾನಗಳಲ್ಲಿಯೂ ಬಿಜೆಪಿ ನಿಶ್ಚಿತವಾಗಿ ಗೆಲುವು ಸಾಧಿಸಲಿದೆ" ಎಂದು ಬಾಲಚಂದ್ರ ಜಾರಕಿಹೊಳಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ರಮೇಶ್ ಜಾರಕಿಹೊಳಿ ಮಾತುಕತೆ

ರಮೇಶ್ ಜಾರಕಿಹೊಳಿ ಮಾತುಕತೆ

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಆರ್. ಟಿ. ನಗರದ ನಿವಾಸಕ್ಕೆ ಭೇಟಿ ನೀಡಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜೊತ ಅರ್ಧಗಂಟೆಗಳ ಕಾಲ ಮಾತುಕತೆ ನಡೆಸಿದರು. ಈ ವೇಳೆ ಲಖನ್ ಜಾರಕಿಹೊಳಿಗೆ ಟಿಕೆಟ್ ನೀಡುವ ಕುರಿತು ಮಾತುಕತೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ತಮಗೆ ಮಂತ್ರಿ ಸ್ಥಾನ ಕೈ ತಪ್ಪಿರುವ ಹಿನ್ನಲೆಯಲ್ಲಿ ಲಖನ್‌ ಜಾರಕಿಹೊಳಿಗೆ ವಿಧಾನ ಪರಿಷತ್ ಟಿಕೆಟ್ ನೀಡಬೇಕು ಎಂದು ರಮೇಶ್ ಜಾರಕಿಹೊಳಿ ಮನವಿ ಮಾಡಿದ್ದಾರೆ. ಕಳೆದ ವಾರದ ದೆಹಲಿಗೆ ಭೇಟಿ ನೀಡಿದಾಗಲೂ ವರಿಷ್ಠರ ಜೊತೆ ಈ ಕುರಿತು ಅವರು ಚರ್ಚೆ ನಡೆಸಿದ್ದಾರೆ ಎಂಬ ಮಾಹಿತಿ ಇದೆ.

ಕುಟುಂಬದಲ್ಲಿ ಮತ್ತೊಬ್ಬರಿಗೆ ಟಿಕೆಟ್

ಕುಟುಂಬದಲ್ಲಿ ಮತ್ತೊಬ್ಬರಿಗೆ ಟಿಕೆಟ್

ಬೆಳಗಾವಿ ರಾಜಕೀಯದಲ್ಲಿ ಜಾರಕಿಹೊಳಿ ಕುಟುಂಬ ಪ್ರಭಾವಿಯಾಗಿದೆ. ಬಿಜೆಪಿಯಿಂದ ರಮೇಶ್ ಜಾರಕಿಹೊಳಿ (ಗೋಕಾಕ್), ಬಾಲಚಂದ್ರ ಜಾರಕಿಹೊಳಿ (ಅರಭಾವಿ) ಶಾಸಕರು. ಸತೀಶ್ ಜಾರಕಿಹೊಳಿ ಕಾಂಗ್ರೆಸ್ ಪಕ್ಷದಲ್ಲಿದ್ದು ಯಮಕನಮರಡಿ ಶಾಸಕರಾಗಿದ್ದಾರೆ.

ರಮೇಶ್ ಜಾರಕಿಹೊಳಿ ಹಿಂದೆ ಜಲಸಂಪನ್ಮೂಲ ಸಚಿವರಾಗಿದ್ದರು. ಬಾಲಚಂದ್ರ ಜಾರಕಿಹೊಳಿ ಕೆಎಂಎಫ್ ಅಧ್ಯಕ್ಷರು. ಬಿಜೆಪಿ ಜಾರಕಿಹೊಳಿ ಕುಟುಂಬದಲ್ಲಿ ಮತ್ತೊಬ್ಬರಿಗೆ ಟಿಕೆಟ್ ನೀಡಲಿದೆಯೇ? ಕಾದು ನೋಡಬೇಕು.

English summary
Election commission announced dates for Karnataka legislative council election. Jarkiholi family demand for ticket for Lakhan Jarkiholi from Belagavi.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X