• search
  • Live TV
ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

Breaking; ಪರಿಷತ್ ಚುನಾವಣೆ ಪ್ರಕಾಶ್ ಹುಕ್ಕೇರಿ ಕಾಂಗ್ರೆಸ್ ಅಭ್ಯರ್ಥಿ

|
Google Oneindia Kannada News

ಬೆಳಗಾವಿ, ಏಪ್ರಿಲ್ 21; ವಾಯುವ್ಯ ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್ ಸದಸ್ಯರ ಆಯ್ಕೆಗೆ ನಡೆಯುವ ಚುನಾವಣೆಗೆ ಕಾಂಗ್ರೆಸ್ ಪಕ್ಷ ಅಭ್ಯರ್ಥಿ ಘೋಷಣೆ ಮಾಡಿದೆ. ಸಚಿವರಾಗಿ, ಸಂಸದರಾಗಿ ಕೆಲಸ ಮಾಡಿರುವ ಪ್ರಕಾಶ್‌ ಹುಕ್ಕೇರಿ 35 ವರ್ಷಕ್ಕೂ ಹೆಚ್ಚು ಕಾಲದ ರಾಜಕೀಯ ಅನುಭವ ಹೊಂದಿದ್ದಾರೆ.

ಗುರುವಾರ ಎಐಸಿಸಿ ಪ್ರಧಾನ ಕಾರ್ಯದರ್ಶಿ ಮುಕುಲ್ ವಾಸ್ನಿಕ್ ವಾಯುವ್ಯ ಶಿಕ್ಷಕರ ಕ್ಷೇತ್ರದಿಂದ ಪ್ರಕಾಶ್ ಹುಕ್ಕೇರಿ ಅಭ್ಯರ್ಥಿ ಎಂದು ಘೋಷಣೆ ಮಾಡಿದರು. ಚುನಾವಣಾ ದಿನಾಂಕ ಇನ್ನೂ ಘೋಷಣೆಯಾಗಬೇಕಿದೆ.

ವಿಧಾನ ಪರಿಷತ್ ಮೂರು ಸ್ಥಾನಗಳಿಗೆ ಬಿಜೆಪಿ ಅಭ್ಯರ್ಥಿಗಳ ಘೋಷಣೆವಿಧಾನ ಪರಿಷತ್ ಮೂರು ಸ್ಥಾನಗಳಿಗೆ ಬಿಜೆಪಿ ಅಭ್ಯರ್ಥಿಗಳ ಘೋಷಣೆ

ಬಿಜೆಪಿ ಅರುಣ ಶಹಾಪುರಗೆ ಟಿಕೆಟ್ ನೀಡಿದೆ. ಈಗ ಪ್ರಕಾಶ್‌ ಹುಕ್ಕೇರಿ ಅಭ್ಯರ್ಥಿಯಾಗಿದ್ದು, ವಾಯುವ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ ಕಣ ರಂಗೇರುವುದು ಖಚಿತವಾಗಿದೆ. ಇದರಿಂದಾಗಿ ಬೆಳಗಾವಿ ರಾಜಕಾರಣದ ಬಗ್ಗೆ ಮತ್ತೆ ರಾಜ್ಯದಲ್ಲಿ ಚರ್ಚೆ ನಡೆಯಲಿದೆ.

ಪರಿಷತ್ ಚುನಾವಣೆ; ಕಾಂಗ್ರೆಸ್ ಬೆಂಬಲಿಸಿದ ಸಿ. ಪಿ. ಯೋಗೀಶ್ವರ್! ಪರಿಷತ್ ಚುನಾವಣೆ; ಕಾಂಗ್ರೆಸ್ ಬೆಂಬಲಿಸಿದ ಸಿ. ಪಿ. ಯೋಗೀಶ್ವರ್!

ಕೆಲವು ದಿನಗಳ ಹಿಂದೆ ಬೆಳಗಾವಿಯಲ್ಲಿ ಮಾತನಾಡಿದ್ದ ಪ್ರಕಾಶ್ ಹುಕ್ಕೇರಿ. "ನಾನು 35 ವರ್ಷಗಳಿಂದ ರಾಜಕೀಯದಲ್ಲಿದ್ದೇನೆ. ಜನರು ಸಹ ನಾನು ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧೆ ಮಾಡಬೇಕು ಎಂದು ಬಯಸಿದ್ದಾರೆ" ಎಂದು ಹೇಳಿದ್ದರು.

 ವಿಧಾನ ಪರಿಷತ್‌ ವಿಪಕ್ಷ ನಾಯಕರಾಗಿ ಬಿಕೆ ಹರಿಪ್ರಸಾದ್ ನೇಮಕ ವಿಧಾನ ಪರಿಷತ್‌ ವಿಪಕ್ಷ ನಾಯಕರಾಗಿ ಬಿಕೆ ಹರಿಪ್ರಸಾದ್ ನೇಮಕ

"ಕಳೆದ ಮೂರು ದಶಕಗಳಿಂದ ಚಿಕ್ಕೋಡಿ ಲೋಕಸಭಾ ಕ್ಷೇತ್ರ ಮತ್ತು ಹುಕ್ಕೇರಿ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಗಾಗಿ ಕೆಲಸ ಮಾಡಿದ್ದೇನೆ. ತಳಮಟ್ಟದಲ್ಲಿ ಪಕ್ಷವನ್ನು ಸಂಘಟಿಸಲು ಪ್ರಯತ್ನ ನಡೆಸಿದ್ದೇನೆ. ಪಕ್ಷ ಟಿಕೆಟ್ ನೀಡಬೇಕು" ಎಂದು ತಿಳಿಸಿದ್ದರು.

ಆರು ಬಾರಿ ಹುಕ್ಕೇರಿ ವಿಧಾನಸಭಾ ಕ್ಷೇತ್ರದಿಂದ ಗೆಲುವು ಸಾಧಿಸಿದ್ದ ಪ್ರಕಾಶ್ ಹುಕ್ಕೇರಿ ವಿವಿಧ ಇಲಾಖೆಗಳ ಸಚಿವರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ. ಚಿಕ್ಕೋಡಿ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ ಸಹ ಆಯ್ಕೆಯಾಗಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಸಹ ಪ್ರಕಾಶ್ ಹುಕ್ಕೇರಿಗೆ ಟಿಕೆಟ್ ನೀಡಲು ಒಪ್ಪಿಗೆ ಸೂಚಿಸಿದ್ದರು. ಈಗ ಪಕ್ಷ ಅಧಿಕೃತವಾಗಿ ಟಿಕೆಟ್ ಘೋಷಣೆ ಮಾಡಿದೆ.

English summary
Congress announced senior party leader Prakash Hukkeri as the candidate for the north west teachers constituency for Karnataka legislative council.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X