ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಳಗಾವಿ ಉಪ ಚುನಾವಣೆ: ನಾಮಪತ್ರ ವಾಪಸ್; ಬಿಜೆಪಿಗೆ ಸಿಹಿ ಸುದ್ದಿ!

By ಬೆಳಗಾವಿ ಪ್ರತಿನಿಧಿ
|
Google Oneindia Kannada News

ಬೆಳಗಾವಿ, ಏಪ್ರಿಲ್ 3: ಏಪ್ರಿಲ್ 17ರಂದು ನಡೆಯುವ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೂ ಮುನ್ನ ಭಾರತೀಯ ಜನತಾ ಪಕ್ಷಕ್ಕೆ ತುಸು ನೆಮ್ಮದಿ ನೀಡುವ ಸುದ್ದಿ ಸಿಕ್ಕಿದೆ.

ದಿ.ಸುರೇಶ್ ಅಂಗಡಿ ಅವರ ಸಾವಿನಿಂದ ತೆರವಾಗಿರುವ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ನಿಗದಿಯಾಗಿದ್ದು, ಚುನಾವಣಾ ಕಣದಲ್ಲಿರುವ ಅಭ್ಯರ್ಥಿಗಳು ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ.

ಸುರೇಶ್ ಅಂಗಡಿ ಪತ್ನಿ ಸ್ಪರ್ಧೆ: ಸತೀಶ್ ಜಾರಕಿಹೊಳಿ ಹಣೆಬರಹ ಈ ಹಿರಿಯ ಕಾಂಗ್ರೆಸ್ ಮುಖಂಡರ 'ಕೈ'ಯಲ್ಲಿ!ಸುರೇಶ್ ಅಂಗಡಿ ಪತ್ನಿ ಸ್ಪರ್ಧೆ: ಸತೀಶ್ ಜಾರಕಿಹೊಳಿ ಹಣೆಬರಹ ಈ ಹಿರಿಯ ಕಾಂಗ್ರೆಸ್ ಮುಖಂಡರ 'ಕೈ'ಯಲ್ಲಿ!

ಈ ಬಾರಿ ಕಾಂಗ್ರೆಸ್ ಪಕ್ಷದಿಂದ ಸತೀಶ್ ಜಾರಕಿಹೊಳಿ ಸ್ಪರ್ಧಿಸುತ್ತಿರುವುದು ಕ್ಷೇತ್ರದಲ್ಲಿ ಇನ್ನಷ್ಟು ಪೈಪೋಟಿ ಏರ್ಪಟ್ಟಿದೆ. ಬಿಜೆಪಿಯಿಂದ ಸ್ಪರ್ಧಿಸಿರುವ ದಿ.ಸುರೇಶ್ ಅಂಗಡಿ ಅವರ ಪತ್ನಿ ಮಂಗಲ ಸುರೇಶ್ ಅಂಗಡಿ ಅವರು ಕ್ಷೇತ್ರದಾದ್ಯಂತ ಓಡಾಡುತ್ತಿದ್ದಾರೆ.

Belagavi Lok Sabha By-Election: 4 Independent Candidates Withdrawn Nomination

ಇದರ ಮಧ್ಯೆ ನಾಲ್ವರು ಪಕ್ಷೇತರ ಅಭ್ಯರ್ಥಿಗಳು ಬಿಜೆಪಿ ಅಭ್ಯರ್ಥಿ ಬೆಂಬಲ ನೀಡಿರುವುದು ಬಿಜೆಪಿ ಸ್ವಲ್ಪ ನಿಟ್ಟುಸಿರು ಬಿಡುವಂತಾಗಿದೆ. ಶನಿವಾರದಂದು ನಾಲ್ವರು ಪಕ್ಷೇತರ ಅಭ್ಯರ್ಥಿಗಳು ನಾಮಪತ್ರ ವಾಪಸ್ ಪಡೆದಿದ್ದಾರೆ.

ನಾಮಪತ್ರ ವಾಪಸ್ ಪಡೆದ ಪಕ್ಷೇತರ ಅಭ್ಯರ್ಥಿಗಳು ಬಿಜೆಪಿ ಅಭ್ಯರ್ಥಿ ಮಂಗಲ ಸುರೇಶ್ ಅಂಗಡಿಗೆ ಬೆಂಬಲ ನೀಡಲು ಮುಂದೆ ಬಂದಿದ್ದಾರೆ. ಬಿಜೆಪಿ ಶಾಸಕ ಅನಿಲ್ ಬೆನಕೆ ನೇತೃತ್ವದಲ್ಲಿ ನಾಲ್ವರು ನಾಮಪತ್ರ ವಾಪಸ್ ಪಡೆದರು.

Belagavi Lok Sabha By-Election: 4 Independent Candidates Withdrawn Nomination

Recommended Video

Semi LockDown New Rules : ಬೆಂಗಳೂರಿನಲ್ಲಿ ಕೊರೊನ ಕಾರಣ ಹೊಸ ನಿಯಮಗಳು ಹೀಗಿರಲಿವೆ | Oneindia Kannada

ಬೆಳಗಾವಿ ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿಗೆ ಆಗಮಿಸಿ ನಾಮಪತ್ರ ವಾಪಸ್ ಪಡೆದ ಪಕ್ಷೇತರ ಅಭ್ಯರ್ಥಿಗಳಾದ ಅಶೋಕ್ ಹನಜಿ, ಹನಮಂತ ನಾಗನೂರ, ಬಸವರಾಜ ಹುದ್ದಾರ್, ಸುರೇಶ್ ಪರಗಣ್ಣವರ್ ಬಿಜೆಪಿಗೆ ಬೆಂಬಲಿಸುವುದಾಗಿ ಘೋಷಿಸಿದ್ದಾರೆ. ಏಪ್ರಿಲ್ 17ರಂದು ಮತದಾನ ನಡೆಯಲಿದ್ದು, ಮೇ 2ರಂದು ಫಲಿತಾಂಶ ಪ್ರಕಟವಾಗಲಿದೆ.

English summary
4 Independent candidates withdrawn Nominations to support BJP candidate Mangal Suresh Angadi in Belagavi Lok sabha By-election.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X