ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಳಗಾವಿಯಲ್ಲಿ ಅಚ್ಚರಿ: ಭಾರತೀಯ ಜನತಾ ಪಕ್ಷದಿಂದ ನಾಮಪತ್ರ ಸಲ್ಲಿಸಿದ ಸ್ವಾಮೀಜಿ!

By ಬೆಳಗಾವಿ ಪ್ರತಿನಿಧಿ
|
Google Oneindia Kannada News

ಬೆಳಗಾವಿ, ಮಾರ್ಚ್ 23: ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ನಾಮಪತ್ರ ಸಲ್ಲಿಕೆಯ ಮೊದಲ ದಿನವಾದ ಮಂಗಳವಾರ ಇಬ್ಬರು ಅಭ್ಯರ್ಥಿಗಳು ಒಟ್ಟು ನಾಲ್ಕು ನಾಮಪತ್ರಗಳನ್ನು ಸಲ್ಲಿಸಿದ್ದಾರೆ‌.

ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಬರಡೋಲ ಗ್ರಾಮದ ವೆಂಕಟೇಶ್ವರ ಮಹಾಸ್ವಾಮೀಜಿ ಅವರು ಒಟ್ಟು ಮೂರು ನಾಮಪತ್ರಗಳನ್ನು ಸಲ್ಲಿಸಿದ್ದು, ಅದರಲ್ಲಿ ಎರಡು ಭಾರತೀಯ ಜನತಾ ಪಾರ್ಟಿ ಹಾಗೂ ಒಂದು ಹಿಂದುಸ್ತಾನ ಜನತಾ ಪಾರ್ಟಿ ಎಂದು ನಮೂದಿಸಿದ್ದಾರೆ.

ಬೆಳಗಾವಿ ಉಪಚುನಾವಣೆ; ಇಂದಿನಿಂದ ನಾಮಪತ್ರ ಸಲ್ಲಿಕೆ ಬೆಳಗಾವಿ ಉಪಚುನಾವಣೆ; ಇಂದಿನಿಂದ ನಾಮಪತ್ರ ಸಲ್ಲಿಕೆ

ಸುರೇಶ ಅಂಗಡಿ ಕುಟುಂಬ ಸೇರಿ ಬೆಳಗಾವಿ ಜಿಲ್ಲೆಯ ಹಲವು ನಾಯಕರು ಬಿಜೆಪಿ ಟಿಕೆಟ್ ಗಾಗಿ ಲಾಬಿ ನಡೆಸುತ್ತಿದ್ದಾರೆ. ಟಿಕೆಟ್ ಯಾರಿಗೆ ಕೊಡಬೇಕು ಎಂಬ ಲೆಕ್ಕಾಚಾರದಲ್ಲಿ ಬಿಜೆಪಿ ಹೈಕಮಾಂಡ್ ತೊಡಗಿದೆ. ಈ ಮಧ್ಯೆ ಸ್ವಾಮೀಜಿ ಭಾರತೀಯ ಜನತಾ ಪಕ್ಷದಿಂದ ನಾಮಪತ್ರ ಸಲ್ಲಿಸಿ ಅಚ್ಚರಿ ಮೂಡಿಸಿದ್ದಾರೆ.

Belagavi Lok Sabha By-Election: Venkateshwara Swamiji Filed Nomination From BJP

ಪಕ್ಷೇತರ ಅಭ್ಯರ್ಥಿಯಾಗಿ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಬಿದರಿ ಗ್ರಾಮದ ಶ್ರೀಕಾಂತ್ ಪಡಸಲಗಿ ಅವರು ನಾಮಪತ್ರವನ್ನು ಸಲ್ಲಿಸಿದರು. ಜಿಲ್ಲಾ ಚುನಾವಣಾಧಿಕಾರಿ ಆಗಿರುವ ಜಿಲ್ಲಾಧಿಕಾರಿ ಡಾ.ಕೆ.ಹರೀಶ್ ಕುಮಾರ್ ಅವರು ನಾಮಪತ್ರಗಳನ್ನು ಸ್ವೀಕರಿಸಿದರು.

English summary
The two candidates filed a total of four nominations on Tuesday, the first day of filing nominations for the by-election in the Belagavi Lok Sabha constituency.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X