Lok Sabha Election: ಬೆಳಗಾವಿಯಲ್ಲಿ ಬ್ಯಾಂಕ್ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೊಟ್ಟ ಖಡಕ್ ಸೂಚನೆ ಏನು ಗೊತ್ತಾ?
ಬೆಳಗಾವಿ, ಏಪ್ರಿಲ್, 07: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಈ ವೇಳೆಯೇ ಅತೀ ಹೆಚ್ಚು ಅಕ್ರಮವಾಗಿ ವಹಿವಾಟುಗಳು ನಡೆಯುತ್ತಿರುತ್ತವೆ. ಆದ್ದರಿಂದ ಜಿಲ್ಲೆಯಲ್ಲಿ ಪೊಲೀಸ್ ಇಲಾಖೆ ಈಗಾಗಲೇ ಭಾರೀ ಅಲರ್ಟ್ ಆಗಿದೆ. ಇನ್ನು ಜಿಲ್ಲಾಧಿಕಾರಿಗಳು ಕೂಡ ಅಧಿಕಾರಿಗಳಿಗೆ ಕೆಲವೊಂದು ಖಡಕ್ ಸೂಚನೆಗಳನ್ನು ನೀಡಿದ್ದಾರೆ. ಹಾಗಾದರೆ ಆ ಸೂಚನೆಗಳು ಏನು ಎನ್ನುವ ಮಾಹಿತಿಯನ್ನು ಇಲ್ಲ ತಿಳಿಯಿರಿ.
ಇದೀಗ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದು, ಆದ್ದರಿಂದ ಅನುಮಾನಾಸ್ಪದ ಬ್ಯಾಂಕ್ ವಹಿವಾಟು ಮತ್ತು ಡಿಜಿಟಲ್ ಪಾವತಿಗಳ ಮೇಲೆ ನಿಗಾ ವಹಿಸಬೇಕು. ಬೃಹತ್ ಮೊತ್ತದ ವಹಿವಾಟು, ಅನುಮಾನಾಸ್ಪದ ವಹಿವಾಟುಗಳು ಕಂಡುಬಂದಲ್ಲಿ ಕೂಡಲೇ ಮಾಹಿತಿಯನ್ನು ನೀಡಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಅವರು ಬ್ಯಾಂಕ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ .

ನಗರದ ಹಳೆ ಜಿಲ್ಲಾ ಪಂಚಾಯತ್ ಸಭಾ ಭವನದಲ್ಲಿ ನಡೆದ ಬ್ಯಾಂಕ್ ಅಧಿಕಾರಿಗಳ ಸಭೆಯಲ್ಲಿ ಮಾದರಿ ನೀತಿ ಸಂಹಿತೆ ಅನ್ವಯ ಬ್ಯಾಂಕ್ ವಹಿವಾಟುಗಳ ಮಾರ್ಗಸೂಚಿಗಳ ಕುರಿತು ಅವರು ಮಾಹಿತಿ ನೀಡಿದರು. ಇನ್ನು ಲೋಕಸಭಾ ಚುನಾವಣೆಯಲ್ಲಿ ಆಮಿಷಗಳ ಮೂಲಕ ಮತದಾರರ ಮೇಲೆ ಪ್ರಭಾವ ಬೀರುವ ಅಕ್ರಮ ಯತ್ನಗಳನ್ನು ತಡೆಗಟ್ಟಲು, ಚುನಾವಣಾ ಆಯೋಗವು ಅನುಮಾನಾಸ್ಪದ ಬ್ಯಾಂಕ್ ವಹಿವಾಟುಗಳು ಮತ್ತು ಡಿಜಿಟಲ್ ಪಾವತಿಗಳನ್ನು ಕಟ್ಟುನಿಟ್ಟಾಗಿ ಗಮನಿಸುತ್ತಿದೆ.
ಜಿಲ್ಲೆಯಲ್ಲಿ ಸದ್ಯ 5 ಬ್ಯಾಂಕ್‌ಗಳ ಅನುಮಾನಾಸ್ಪದ ವಹಿವಾಟುಗಳ ಮಾಹಿತಿ ಲಭ್ಯವಾಗುತ್ತಿದ್ದು, ಉಳಿದ ಬ್ಯಾಂಕ್‌ಗಳಿಂದ ಮಾಹಿತಿ ಬರಬೇಕಿದೆ. ಬ್ಯಾಂಕ್ ಅಧಿಕಾರಿಗಳು ಕೂಡಲೇ ಅಂತಹ ವಹಿವಾಟಿನ ಕುರಿತು ಮಾಹಿತಿ ಸಲ್ಲಿಸಬೇಕು ಎಂದು ಸೂಚಿಸಿದರು.
ಚೆಕ್ ಪೋಸ್ಟ್‌ಗಳಲ್ಲಿ ದಾಖಲೆಗಳಿಲ್ಲದೇ 50,000 ರೂಪಾಯಿ ನಗದು ಸಾಗಾಣಿಕೆಗೆ ಕಂಡು ಬಂದಲ್ಲಿ ಕೂಡಲೇ ವಶಪಡಿಸಿಕೊಂಡು ನಿಯಮಾನುಸಾರ ಕ್ರಮ ಜರುಗಿಸಲಾಗುತ್ತಿದೆ. ಎಲ್ಲಾ ಚೆಕ್ ಪೋಸ್ಟ್‌ಗಳಲ್ಲಿ ಅನಧಿಕೃತ ನಗದು ಸಾಗಾಣಿಕೆಯನ್ನು ತಡೆಗಟ್ಟಲು ತೀವ್ರ ನಿಗಾ ವಹಿಸಲಾಗಿದೆ. 100ಕ್ಕಿಂತ ಅಧಿಕ ಮಹಿಳಾ ಬ್ಯಾಂಕ್ ಖಾತೆದಾರಿಗೆ 500, 1,000 ರೂಪಾಯಿಗಳಂತೆ ಹಣ ವರ್ಗಾವಣೆಯಾದಲ್ಲಿ ಅಂತಹ ಖಾತೆಗಳನ್ನು ಫ್ರೀಜ್ ಮಾಡಬೇಕು ಎಂದು ಹೇಳಿದರು.
ಚುನಾವಣಾ ಅಭ್ಯರ್ಥಿಗಳು 95 ಲಕ್ಷ ಚುನಾವಣಾ ಪ್ರಚಾರ ಮಿತಿಯನ್ನು ಹೊಂದಿರುತ್ತಾರೆ. ಯಾವುದೇ ದಾಖಲೆಗಳಿಲ್ಲದೆ, 10 ಲಕ್ಷಕ್ಕೂ ಅಧಿಕ ಹಣ ಬ್ಯಾಂಕ್ ಜೊತೆಗೆ ಜಮೆ ಮಾಡಲು ಅವಕಾಶ ಇರುವುದಿಲ್ಲ. ಅಂತಹ ಖಾತೆದಾರರು ಇದ್ದಲ್ಲಿ ಆದಾಯ ತೆರಿಗೆ ನೋಡಲ್ ಅಧಿಕಾರಿಗಳಿಗೆ ಸೂಕ್ತ ದಾಖಲೆ ಸಲ್ಲಿಸಲು ಸೂಚಿಸಬೇಕು ಎಂದು ಹೇಳಿದರು.
ಬೃಹತ್ ಮೊತ್ತದ ವಹಿವಾಟುಗಳಾದಲ್ಲಿ ಆದಾಯ ತೆರಿಗೆ ನೋಡಲ್ ಅಧಿಕಾರಿಗಳಿಗೆ ಕೂಡಲೇ ಸಂಪರ್ಕಿಸಿ ಮಾಹಿತಿ ನೀಡಬೇಕು. ಯುಪಿಐ ಡಿಜಿಟಲ್ ಪಾವತಿ ಮೂಲಕ ಕೂಡ ಬೇರೆ ಬೇರೆ ನಂಬರ್‌ಗಳಿಗೆ ಹಣ ವರ್ಗಾವಣೆ ಆಗಿರುವ ಕುರಿತು ಸಹ ಮಾಹಿತಿ ನೀಡಬೇಕು ಎಂದು ತಿಳಿಸಿದರು.
ಸಾಲ-ಸೌಲಭ್ಯ ಒದಗಿಸಲು ಸೂಚನೆ: ಸರ್ಕಾರದ ವಿವಿಧ ಇಲಾಖೆಯ ಯೋಜನೆಗಳ ಮೂಲಕ ಅರ್ಜಿ ಸಲ್ಲಿಸಿದಲ್ಲಿ ಕೂಡಲೇ ಅರ್ಜಿಗಳನ್ನು ವಿಲೇವಾರಿಗೊಳ್ಳಬೇಕು. ವಿನಾಕಾರಣ ನೆಪವೊಡ್ಡದೇ ಸಾಲ ಸೌಲಭ್ಯ ಅರ್ಜಿಗಳನ್ನು ತಿರಸ್ಕರಿಸುವಂತಿಲ್ಲ. ಅಭ್ಯರ್ಥಿಗಳು ಸೂಕ್ತ ದಾಖಲೆಗಳನ್ನು ಸಲ್ಲಿಸಿದಲ್ಲಿ ಕಡ್ಡಾಯವಾಗಿ ಬ್ಯಾಂಕ್ ಅಧಿಕಾರಿಗಳು ಸಾಲ ಒದಗಿಸಬೇಕು ಎಂದು ಹೇಳಿದರು.
ಕೃಷಿ ಇಲಾಖೆ ಜಂಟಿ ನಿರ್ದೇಶಕರು ಹಾಗೂ ಮಾದರಿ ನೀತಿಸಂಹಿತೆ ನೋಡಲ್ ಅಧಿಕಾರಿ ಶಿವನಗೌಡ ಪಾಟೀಲ, ಲೀಡ್ ಬ್ಯಾಂಕ್ ಮ್ಯಾನೇಜರ್ ಪ್ರಶಾಂತ್ ಕುಲಕರ್ಣಿ, ಕ್ಯಾಶ್ ರಿಲೀಸ್ ಕಮಿಟಿ ಸದಸ್ಯ ಕಾರ್ಯದರ್ಶಿ ಗೌರಿಶಂಕರ ಕಡೆಚೂರು, ಲೋಕಲ್ ಆಡಿಟ್ ಸರ್ಕಲ್ ಜಂಟಿ ನಿರ್ದೇಶಕರಾದ ಶಂಕರಾನಂದ ಬನಶಂಕರಿ ಸೇರಿದಂತೆ ವಿವಿಧ ಬ್ಯಾಂಕ್ ಮುಖ್ಯಸ್ಥರು, ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
-
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
Sri Rama Navami 2026: ಶ್ರೀ ರಾಮನವಮಿ; ಧರ್ಮದ ಜಯದ ದಿವ್ಯ ಸಂದೇಶ












Click it and Unblock the Notifications